Cabinet Expansion: ಬಿಎಸ್ ವೈಗೆ ಸಂಪುಟದಲ್ಲಿ 'ಶಾಸಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಫಿಕ್ಸ್'..!

ಸಂಪುಟ ವಿಸ್ತರಣೆಗೂ ಮುನ್ನಾ ಬೆಳಗಾವಿಯಲ್ಲಿರುವಂತ ಶಾಸಕ ಉಮೇಶ್ ಕತ್ತಿಗೆ ಸಿಎಂ ಯಡಿಯೂರಪ್ಪ ಬೆಂಗಳೂರಿಗೆ ಬರುವಂತೆ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.

Last Updated : Jan 12, 2021, 02:29 PM IST
  • ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರ ಸಚಿವ ಸಂಪುಟ ನಾಳೆ ಮತ್ತೆ ವಿಸ್ತರಣೆಯಾಗಲಿದೆ. ನೂತನ ಸಚಿವರಾಗಿ 7 ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
  • ಸಂಪುಟ ವಿಸ್ತರಣೆಗೂ ಮುನ್ನಾ ಬೆಳಗಾವಿಯಲ್ಲಿರುವಂತ ಶಾಸಕ ಉಮೇಶ್ ಕತ್ತಿಗೆ ಸಿಎಂ ಯಡಿಯೂರಪ್ಪ ಬೆಂಗಳೂರಿಗೆ ಬರುವಂತೆ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.
  • ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
Cabinet Expansion: ಬಿಎಸ್ ವೈಗೆ ಸಂಪುಟದಲ್ಲಿ 'ಶಾಸಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಫಿಕ್ಸ್'..! title=

ಬೆಳಗಾವಿ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರ ಸಚಿವ ಸಂಪುಟ ನಾಳೆ ಮತ್ತೆ ವಿಸ್ತರಣೆಯಾಗಲಿದೆ. ನೂತನ ಸಚಿವರಾಗಿ 7 ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣ ವಚನಕ್ಕೂ ಮುಹೂರ್ತ ಫಿಕ್ಸ್ ಆಗಿದೆ. ಇದರ ಮಧ್ಯೆ ನಾಳೆ ನಡೆಯುವಂತ ಸಂಪುಟ ವಿಸ್ತರಣೆಗೂ ಮುನ್ನಾ ಬೆಳಗಾವಿಯಲ್ಲಿರುವಂತ ಶಾಸಕ ಉಮೇಶ್ ಕತ್ತಿ(Umesh Katti)ಗೆ ಸಿಎಂ ಯಡಿಯೂರಪ್ಪ ಬೆಂಗಳೂರಿಗೆ ಬರುವಂತೆ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಬೆಳಗಾವಿಯಿಂದ ಬೆಂಗಳೂರಿನತ್ತ ಶಾಸಕ ಉಮೇಶ್ ಕತ್ತಿ ಹೊರಟಿದ್ದಾರೆ. ಈ ಮೂಲಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಫಿಕ್ಸ್ ಎಂಬಂತೆ ಆಗಿದೆ.

S.Suresh Kumar: 'ಶಾಲಾ-ಕಾಲೇಜುಗಳ ಪಠ್ಯ ಪುಸ್ತಕಗಳಲ್ಲಿ ಶೇಕಡ 30ರಷ್ಟು ಕಡಿತ'

ಅಂತೂ ಇಂತೂ ರಾಜ್ಯದ ಜನರು ಹಾಗೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಂತವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಶಾಸಕ ಉಮೇಶ್ ಕತ್ತಿಗೆ ಬೆಳಗಾವಿಯಿಂದ ಬೆಂಗಳೂರಿಗೆ ಹೊರಟು ಬರುವಂತೆ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.

Cabinet Expansion : ಸಪ್ತ ಸಚಿವರ ಸಿಟಿ ಬೆಂಗಳೂರು ವಿಚಾರದಲ್ಲಿ ಬಿಎಸ್ ವೈಗೆ ಟೆನ್ಶನ್ ಯಾಕೆ..?

ಸಿಎಂ ಸೂಚನೆಯ ಮೇರೆಗೆ ಶಾಸಕ ಉಮೇಶ್ ಕತ್ತಿ ಬೆಳಗಾವಿಯಿಂದ ಬೆಂಗಳೂರಿನತ್ತ ಹೊರಟಿದ್ದಾರೆ. ನಾಳೆ ನಡೆಯಲಿರುವಂತ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಲಿರುವ ಕಾರಣದಿಂದಾಗಿಯೇ ಶಾಸಕ ಉಮೇಶ್ ಕತ್ತಿಗೆ ಬೆಂಗಳೂರಿಗೆ ಬರುವಂತೆ ಬುಲಾವ್ ನೀಡಲಾಗಿದೆ ಎನ್ನಲಾಗಿದೆ. ಹೀಗಾಗಿ ಉಮೇಶ್ ಕತ್ತಿಗೆ ನಾಳಿನ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಆ ಬಗ್ಗೆ ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರು ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದು, ಅಲ್ಲಿಯವರೆಗೆ ಕಾದು ನೋಡಬೇಕಿದೆ.

B.S.Yediyurappa: ನಾಳೆ ಬಿಎಸ್ ವೈ ಸಚಿವ ಸಂಪುಟ ವಿಸ್ತರಣೆ: ಮೂವರು ಹಾಲಿ ಸಚಿವರಿಗೆ ಕೊಕ್!?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News