"ಮತ್ತೆ COVID-19?:ಜನರು ಆತಂಕ ಪಡುವ ಅಗತ್ಯ ಇಲ್ಲ :"

ಕೋವಿಡ್ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕೋವಿಡ್  ಬಗ್ಗೆ ಸಾರ್ವಜನಿಕರು ಭಯ  ಪಡಬೇಕಿಲ್ಲ. ತಜ್ಞರ ಸಲಹೆಯನ್ನು ಪಾಲನೆ ಮಾಡಿದರೆ ಕೋವಿಡ್ ಸಂಪೂರ್ಣ ನಿಯಂತ್ರಣ ಮಾಡಬಹುದು ಎಂದು ಹೇಳಿದರು.   

Written by - Prashobh Devanahalli | Edited by - Ranjitha R K | Last Updated : Dec 22, 2022, 12:43 PM IST
  • ದೇಶದಲ್ಲಿ ಮತ್ತೆ ಕೋವಿಡ್ ಆತಂಕ ಎದುರಾಗಿದೆ.
  • ಓಮಿಕ್ರಾನ್ ನ BF-7 ತಳಿ ಜನ ಭಯಭೀತರಾಗಿದ್ದಾರೆ.
  • ನಮ್ಮ ದೇಶದಲ್ಲೂ ಹೊಸತಳಿ ಕಾಣಿಸಿಕೊಂಡಿದೆ
"ಮತ್ತೆ COVID-19?:ಜನರು ಆತಂಕ ಪಡುವ ಅಗತ್ಯ ಇಲ್ಲ :" title=

ಬೆಳಗಾವಿ : ದೇಶದಲ್ಲಿ ಮತ್ತೆ ಕೋವಿಡ್ ಆತಂಕ ಎದುರಾಗಿದೆ. ಓಮಿಕ್ರಾನ್ ನ BF-7 ತಳಿ ಜನ ಭಯಭೀತರಾಗಿದ್ದಾರೆ.  ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಈ ಬಗ್ಗೆ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕೋವಿಡ್ ಬಗ್ಗೆ ಸಾರ್ವಜನಿಕರು ಭಯ  ಪಡಬೇಕಿಲ್ಲ. ತಜ್ಞರ ಸಲಹೆಯನ್ನು ಪಾಲನೆ ಮಾಡಿದರೆ ಕೋವಿಡ್ ಸಂಪೂರ್ಣ ನಿಯಂತ್ರಣ ಮಾಡಬಹುದು ಎಂದು ಹೇಳಿದರು. ಬೂಸ್ಟರ್ ಡೋಸ್ ಬಗ್ಗೆಯೂ ವಿಶೇಷ ಕಾರ್ಯಕ್ರಮ ರೂಪಿಸಲು ಸಭೆ ನಡೆಸಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು. 

ಇದನ್ನೂ ಓದಿ : ಪಂಚಮಸಾಲಿ ಮೀಸಲಾತಿ : ಮಧ್ಯಂತರ ವರದಿ ಬಗ್ಗೆ ಚರ್ಚಿಸಿ ಮುಂದಿನ ಕ್ರಮ : ಸಿಎಂ

ಕೋವಿಡ್ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಕೆಲವು ಸೂಚನೆ ನೀಡಿದೆ. ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಬೇರೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ರೂಪಾಂತರ ತಳಿಗಳು ಕಾಣಿಸಿಕೊಂಡಿವೆ. ಹೊಸ ರೂಪಾಂತರಿ ವೇಗದಿಂದ ಹರಡುತ್ತಿದೆ ಎಂಬ ಮಾಹಿತಿಗಳು ಬರುತ್ತಿವೆ. ಈ‌ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ ಸಭೆ ನಡೆಸಲಾಗುತ್ತಿದೆ.  ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

ಆರೋಗ್ಯ ಸಚಿವ ಸುಧಾಕರ್ ಹೇಳಿಕೆ:
ಚೀನಾದಲ್ಲಿ ಕೋವಿಡ್ ಹೆಚ್ಚಳ ಆಗುತ್ತಿದೆ. ನಮ್ಮ ದೇಶದಲ್ಲೂ ಕೆಲವು ಕಡೆ ಹೊಸತಳಿ ಕಾಣಿಸಿಕೊಂಡಿದೆ.  ಕ್ಯಾಬಿನೆಟ್ ನಂತರ ಸಿಎಂ ಸಭೆ ಈ ಬಗ್ಗೆ ನಡೆಸುತ್ತಾರೆ. ಕೋವಿಡ್ ತಾಂತ್ರಿಕ ತಜ್ಙರು ವರ್ಚುವಲ್ ಮೂಲಕ ಭಾಗಿಯಾಗುತ್ತಾರೆ. ರೋಗದ ತೀವ್ರತೆ ಬಗ್ಗೆ ಚರ್ಚೆಯಾಗಲಿದೆ. ಅಲ್ಲದೆ ಈ ಬಗ್ಗೆ ಎಚ್ಚರಿಕೆಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.  

ಇದನ್ನೂ ಓದಿ : CCB Cops Raid: ಶ್ಯಾಮನೂರು ಶಿವಶಂಕರಪ್ಪ ಪುತ್ರ SS ಮಲ್ಲಿಕಾರ್ಜುನ್ ಫಾರ್ಮ್ ಹೌಸ್ನಲ್ಲಿ ವನ್ಯಜೀವಿಗಳು ಪತ್ತೆ!

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News