National youth festival 2023 : ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ ಸಿಎಂ, ಚರ್ಚೆಗೆ ಗ್ರಾಸವಾದ ಮುಖ್ಯಮಂತ್ರಿಗಳ ನಡೆ

National youth festival 2023 : ಇಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕವನ್ನು ಅಳಿಸಿಕೊಂಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.   

Written by - Chetana Devarmani | Last Updated : Jan 12, 2023, 12:41 PM IST
  • ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನಾ ಸಮಾರಂಭ
  • ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
  • ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ ಸಿಎಂ, ಚರ್ಚೆಗೆ ಗ್ರಾಸವಾದ ನಡೆ
National youth festival 2023 : ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ ಸಿಎಂ, ಚರ್ಚೆಗೆ ಗ್ರಾಸವಾದ ಮುಖ್ಯಮಂತ್ರಿಗಳ ನಡೆ  title=
ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕವನ್ನು ಅಳಿಸಿಕೊಂಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 

ಇದನ್ನೂ ಓದಿ : 26ನೇ ರಾಷ್ಟ್ರೀಯ ಯುವಜನೋತ್ಸವ : ಯುವಜನೋತ್ಸವದ ಜನಪ್ರಿಯತೆಗೆ ದೇಸಿಯ ಕ್ರೀಡೆಗಳ ಮೆರಗು

ಯುವಜನೋತ್ಸವಕ್ಕೆ ಆಗಮಿಸುವ ಜನನಾಯಕರಿಗೆ ಸ್ವಾಗತ ಮಾಡಲು ವಿಮಾನ ನಿಲ್ದಾಣದಲ್ಲಿ ಸ್ವಾಗತ ಸಮಿತಿ ಆರತಿ ಬೆಳಗಿ ತಿಲಕ ಇಟ್ಟು ಸ್ವಾಗತಿಸುತ್ತಿದೆ. ಆದರೆ ಸಿಎಂ ಬೊಮ್ಮಾಯಿಯವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವ ಮುನ್ನವೇ ಹಣೆಗೆ ಹಚ್ಚಿದ ಹಿಂದೂ ಸಂಪ್ರದಾಯದ ತಿಲಕವನ್ನು ಅಳಿಸಿಕೊಳ್ಳುವ ಮೂಲಕ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

ಮೋದಿಯವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ಮುನ್ನವೇ ಇಂತಹದೊಂದು ನಡೆಯಿಂದ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ 2012 ರಲ್ಲಿ ಮಂಗಳೂರಿನಲ್ಲಿ ಒಂದು ದಿನದ ಯುವಜನೋತ್ಸವ ನಡೆದಿತ್ತು. ಅದಾದ ಬಳಿಕ 10 ವರ್ಷಗಳ ನಂತರ ಇದೀಗ ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿ ಯುವಜನೋತ್ಸವ ನಡೆಯುತ್ತಿದೆ. 

ಇದನ್ನೂ ಓದಿ : "ಮೋದಿ ಮೋದಿ ಎಂದು ಕೂಗುತ್ತಿದ್ದವರಿಗೆ ಬಿಜೆಪಿ ಪಕ್ಷ ಮಕ್ಮಲ್‌ ಟೋಪಿ ಹಾಕಿದೆ"

5 ದಿನಗಳ ಕಾರ್ಯಕ್ರಮದಲ್ಲಿ, ಉತ್ಸವದ ಉದ್ಘಾಟನೆ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಧಾರವಾಡದಲ್ಲಿ ಉಳಿದ ಕಾರ್ಯಕ್ರಮಗಳು ಜರುಗಲಿವೆ. ಈಗಾಗಲೇ ಇದಕ್ಕೆ ಬೇಕಾದ ಸಿದ್ಧತೆಗಳು ಪೂರ್ಣಗೊಂಡಿವೆ. ಕಾರ್ಯಕ್ರಮಕ್ಕೆ ಭಾಗವಹಿಸಬೇಕಿದ್ದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರು, ನಾಯಕರು ಹುಬ್ಬಳ್ಳಿಗೆ ಬಂದಿಳಿದಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News