ಬೆಂಗಳೂರು: ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟ.ಅಂದು ಖಾಸಗಿ ವಾಹಿನಿಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟವನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವನೂ ತನ್ನ ಸಂಕಷ್ಟ ತೋಡಿಕೊಂಡಳು.
ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಈ ರೀತಿ ಬೇಜವಾಬ್ದಾರಿಯ ಹೇಳಿಕೆ ಕೊಡುವುದು ಸರಿಯಲ್ಲ: ಸಚಿವ ಅಶ್ವತ್ಥ ನಾರಾಯಣ
"ಇಬ್ಬರೂ ಗಂಡುಮಕ್ಕಳು ಸತ್ತ ಹೋಗ್ಯಾರ, ಮನಿ ಕಟ್ಟಸಿಕೊಡ್ರಿ ಸಾಹೇಬ್ರ" ಎಂದು ಗದ್ಗದಿತಳಾಗಿ ನುಡಿದ ಕಮಲವ್ವನಿಗೆ ಸಾಂತ್ವನ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊನೆಗೂ ಆಕೆಗೆ ನೀಡಿದ ಆಶ್ವಾಸನೆಯಂತೆ ಮನೆಯನ್ನು ನಿರ್ಮಿಸಿಕೊಡುವುದರ ಮೂಲಕ ಈಗ ಕಮಲವ್ವ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವಂತೆ ಮಾಡಿದ್ದಾರೆ.
ಇದನ್ನೂ ಓದಿ: ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು-ಸಿದ್ಧರಾಮಯ್ಯ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಶಿಗ್ಗಾಂವಿಯ ಮಂಚಿನಕೊಪ್ಪ ಗ್ರಾಮದ ಕಮಲವ್ವ ತಿಮ್ಮನಗೌಡ್ರ ತಮಗೆ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದರು.ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.ಇದಾದ ನಂತರ ಕಮಲವ್ವನಿಗೆ ನಾಲ್ಕೇ ತಿಂಗಳಲ್ಲಿ ಮನೆಯನ್ನು ನಿರ್ಮಿಸಿ ಅವರಿಗೆ ಹಸ್ತಾಂತರಿಸಲಾಗಿದೆ.
ಇದನ್ನೂ ಓದಿ: ಪ್ರಧಾನಿ ಕಿವಿಮಾತಿಗೆ ತಲೆದೂಗಿದ ರಾಜ್ಯ ಸರ್ಕಾರಗಳು: 'Lockdown' ಪದ ಬಳಕೆಯಿಂದ ದೂರ
ಹ್ಯಾಬಿಟ್ಯಾಟ್ ಸೆಂಟರ್ ಮೂಲಕ ನಿರ್ಮಿಸಲಾದ ಸುಸಜ್ಜಿತ ಮನೆಯನ್ನು ಸವಣೂರ ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅವರು ಹಸ್ತಾಂತರಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.