ನವದೆಹಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು. ಅವರು ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಇದನ್ನೂ ಓದಿ : Shocking: ಶಾಲಾ ಮಕ್ಕಳ ಬ್ಯಾಗ್‌ನಲ್ಲಿ ಕಾಂಡೋಮ್ & ಗರ್ಭ ನಿರೋಧಕ ಮಾತ್ರೆಗಳು ಪತ್ತೆ!
ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು.
ಇಂದು ದೆಹಲಿಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವ ಶ್ರೀ @gssjodhpur ಅವರನ್ನು ಭೇಟಿ ಮಾಡಿ, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದೆನು.
Met today in New Delhi Union Minister of Water Resources Sri @gssjodhpur and discussed irrigation projects of the state. pic.twitter.com/Gyogin2yrB— Basavaraj S Bommai (@BSBommai) November 30, 2022
ಈ ಸಂದರ್ಭದಲ್ಲಿ ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಭಗವಂತ ಖೂಬ ,ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ,ಮುಖ್ಯಮಂತ್ರಿಗಳ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.
ಇದನ್ನೂ ಓದಿ : ಅತಿಥಿ ಉಪನ್ಯಾಸಕರಿಗೆ ಅಭದ್ರತೆಯ ಆತಂಕ ಬೇಡ: ಸಚಿವ ಅಶ್ವತ್ಥ ನಾರಾಯಣ