ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಹೇಳಿದ್ದು ಹೀಗೆ..

ಫೆಬ್ರವರಿ 07 ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು. ಬೇರೆ ಬೇರೆ ಇಲಾಖೆಗಳ ಜತೆ ಚರ್ಚೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

Edited by - Zee Kannada News Desk | Last Updated : Feb 2, 2022, 02:15 PM IST
  • ಫೆಬ್ರವರಿ 7 ರಿಂದ ಬಜೆಟ್ ಸಿದ್ಧತೆ
  • ಬೇರೆ ಬೇರೆ ಇಲಾಖೆಗಳ ಜತೆ ಚರ್ಚೆ
  • ದೆಹಲಿಗೆ ನಾಳೆ ಬೆಳಗ್ಗೆ ಹೋಗ್ತೇನೆ
  • ವರಿಷ್ಠರ ಅಪಾಯಿಟ್ಮೆಂಟ್ ಇನ್ನೂ ಸಿಕ್ಕಿಲ್ಲ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಹೇಳಿದ್ದು ಹೀಗೆ..  title=
ಸಿಎಂ ಬೊಮ್ಮಾಯಿ

ಬೆಂಗಳೂರು : ಫೆಬ್ರವರಿ 07 ರಿಂದ ಬಜೆಟ್ (Karnataka Budget) ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು. ಬೇರೆ ಬೇರೆ ಇಲಾಖೆಗಳ ಜತೆ ಚರ್ಚೆ ಮಾಡಲಾಗುವುದು. ಎಲ್ಲ ಇಲಾಖೆಗಳ ಸಲಹೆ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಇದನ್ನೂ ಓದಿ:  E-Passport: ಏನಿದು ಇ-ಪಾಸ್ಪೋರ್ಟ್? ಅದು ಹೇಗೆ ಕೆಲಸ ಮಾಡುತ್ತೆ? ಇಲ್ಲಿದೆ ವಿವರ

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ (Basavaraj Bommai), ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಹೇಳಿದರು. 

ದೆಹಲಿಗೆ (CM Delhi tour) ನಾಳೆ ಬೆಳಗ್ಗೆ ಹೋಗ್ತೇನೆ. ವರಿಷ್ಠರ ಅಪಾಯಿಟ್ಮೆಂಟ್ ಇನ್ನೂ ಸಿಕ್ಕಿಲ್ಲ. ಸಂಸದರ ಜತೆ ಸಮಾಲೋಚನೆ ನಡೆಸ್ತೇನೆ. ರಾಜ್ಯದ ಪರ ಇರುವ ವಕೀಲರ ಜತೆಗೂ ರಾಜ್ಯದ ನೀರಾವರಿ ವಿಚಾರಗಳ ಬಗ್ಗೆ ಚರ್ಚೆ ನಡೆಸ್ತೇನೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು. 

ರಾಜ್ಯದಲ್ಲಿ ಬಜೆಟ್ ಮಂಡನೆ ಮಾಡುವ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ ಎಂದು ಹೇಳಿದರು.

ಸಂಪುಟ ವಿಸ್ತರಣೆ ವಿಚಾರ:

ಸಂಪುಟ ವಿಸ್ತರಣೆ (Cabinet Expansion) ವಿಚಾರವಾಗಿ ಮಾತನಾಡಿದ ಸಿಎಂ, ಇದರ ಬಗ್ಗೆ ನಾನು ಬಹಿರಂಗವಾಗಿ ಮಾತನಾಡಲ್ಲ. ಈ ಕುರಿತು ಬಹಿರಂಗವಾಗಿ ಚರ್ಚೆ ಮಾಡೋಕೆ ಹೋಗಲ್ಲ ಎಂದರು. 

ಇದನ್ನೂ ಓದಿ: e-Passport: ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ವಿತರಣೆ ಎಂದಿನಿಂದ ಪ್ರಾರಂಭ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News