ಮೇಕೆದಾಟು ಡಿಪಿಆರ್ ಗೆ ಶೀಘ್ರದಲ್ಲಿ ಅನುಮೋದನೆ ನೀಡಲು ಮನವಿ: ಸಿಎಂ ಬೊಮ್ಮಾಯಿ

ಮೇಕೆದಾಟು ಯೋಜನೆ ಡಿಪಿಆರ್ ಗೆ ಅನುಮೋದನೆ ನೀಡಲು ಕೇಂದ್ರಕ್ಕೆ ಮನವಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Written by - Prashobh Devanahalli | Edited by - Chetana Devarmani | Last Updated : Mar 6, 2022, 06:29 PM IST
  • ಈ ಬಾರಿಯ ಅಧಿವೇಶನದ ಸಮಯದಲ್ಲಿ ಸರ್ವ ಪಕ್ಷದ ಸಭೆ ನಡೆಸಲಾಗುವುದು
  • ಮೇಕೆದಾಟು ಯೋಜನೆಯ ಡಿಪಿಆರ್ ಗೆ ಶೀಘ್ರದಲ್ಲಿ ಅನುಮೋದನೆ ನೀಡಲು ಮನವಿ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ಮೇಕೆದಾಟು ಡಿಪಿಆರ್ ಗೆ ಶೀಘ್ರದಲ್ಲಿ ಅನುಮೋದನೆ ನೀಡಲು ಮನವಿ:  ಸಿಎಂ ಬೊಮ್ಮಾಯಿ  title=
ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮೇಕೆದಾಟು ಯೋಜನೆಯ ಡಿಪಿಆರ್ ಗೆ (DRP) ಶೀಘ್ರದಲ್ಲಿ ಅನುಮೋದನೆ ನೀಡಲು ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: ಅವಧಿಗೂ ಮುನ್ನವೇ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಸ್ಟರ್ ಪ್ಲಾನ್..?

ಕೇಂದ್ರ ಸರ್ಕಾರವು ಮೇಕೆದಾಟು (Mekedatu) ಯೋಜನೆಗೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಯಿಸಿದರು.

ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ (CM Bommai), ಕೇಂದ್ರ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಈ ಯೋಜನೆಯ ಪ್ರಾಮುಖ್ಯತೆಯ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಈ ಬಾರಿಯ ಅಧಿವೇಶನದ ಸಮಯದಲ್ಲಿ ಸರ್ವ ಪಕ್ಷದ ಸಭೆ (All Party Meeting) ನಡೆಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಉಕ್ರೇನ್‌ನಿಂದ ವಾಪಸಾದ ಧಾರವಾಡದ ವಿದ್ಯಾರ್ಥಿನಿಗೆ ಸಿಎಂ ಬೊಮ್ಮಾಯಿ ಸ್ವಾಗತ

ನಂತರ ಸಮಯ ನಿಗದಿಪಡಿಸಿಕೊಂಡು ನವದೆಹಲಿಗೆ ತೆರಳಿ ಮೇಕೆದಾಟು, ಕೃಷ್ಣಾ ಮೇಲ್ದಂಡೆ (Krishna Meldande) ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News