ಬೆಂಗಳೂರು: ನಿನ್ನೆ ಡಿಸಿಗಳ ಜತೆ ಸಭೆ ನಡೆಸಿದ್ದೇನೆ. ಲಸಿಕೆ ಬಗ್ಗೆ ವಿಶೇಷ ಗಮನ ಕೊಡಲು ಸೂಚಿಸಿದ್ದೇನೆ. ವೀಕೆಂಡ್ ಕರ್ಫ್ಯೂ (Weekend Curfew) ವಾಪಸ್, ನಿರ್ಬಂಧಗಳ ಸಡಿಲಿಕೆ ಬಗ್ಗೆ ತಜ್ಞರ ಅಭಿಪ್ರಾಯದಂತೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ಸುಮಾರು 11 ರಿಂದ 12 ದಿನ ಮನೆಯಲ್ಲಿದ್ದೆ. ಕ್ವಾರಂಟೈನ್ ಮುಗಿದಿದೆ. ಇಂದಿನಿಂದ ಕಚೇರಿಯಲ್ಲಿ ಕೆಲಸ ಮಾಡುತ್ತೇನೆ. ಶುಕ್ರವಾರ ಮತ್ತೆ ತಜ್ಞರ ಜತೆ ಸಭೆ ಮಾಡುತ್ತೇವೆ. ಹಾಲಿ ನಿರ್ಬಂಧಗಳ ಪುನರ್ ಪರಿಶೀಲನೆ ಮಾಡುತ್ತೇವೆ ಎಂದರು.
ಫೆಬ್ರವರಿಯಲ್ಲಿ ಕೋವಿಡ್ ಪೀಕ್ ವಿಚಾರ:
ಜನವರಿ ಅಂತ್ಯದಿಂದ ಫೆಬ್ರವರಿ ಮಧ್ಯಭಾಗದವರೆಗೂ ಕೋವಿಡ್ (Covid-19) ಹೆಚ್ಚಾಗುತ್ತೆ ಅಂತ ತಜ್ಞರು ಅಂದಾಜು ಮಾಡಿದ್ದಾರೆ. ಕೊರೊನಾ ವಾರಿಯರ್ಸ್ ಬಗ್ಗೆ ತೀವ್ರ ಗಮನ ಕೊಡಲು ಸೂಚನೆ ನೀಡಲಾಗಿದೆ. ಹೋಂ ಐಸೋಲೇಷನ್ ನಲ್ಲಿ (Home Isolation) 94% ಸೋಂಕಿತರು ಇದ್ದಾರೆ. ಇವರ ಮೇಲೆ ಹೆಚ್ಚಿನ ಗಮನ ಇಡಲು ಸೂಚಿಸಲಾಗಿದೆ ಎಂದು ಹೇಳಿದರು.
ಬೂಸ್ಟರ್ ಡೋಸ್ ಕಡೆ ಗಮನ:
ಬೂಸ್ಟರ್ ಡೋಸ್ (Booster Dose) ಕಡೆ ಗಮನ ಕೊಡಲು ಸೂಚಿಸಿದ್ದೇನೆ. ಜಿಲ್ಲಾಡಳಿತಗಳಿಗೆ ಈ ಎಲ್ಲ ಸೂಚನೆ ನೀಡಿದ್ದೇನೆ. ಫೆಬ್ರವರಿ ಮಧ್ಯಭಾಗದಲ್ಲಿ ಪೀಕ್ ಗೆ ಹೋಗುತ್ತೆ ಅಂತ ಬೇರೆಬೇರೆ ದೇಶಗಳ ಟ್ರೆಂಡ್ ನೋಡಿ ಅಂದಾಜು ಮಾಡಿದ್ದಾರೆ ಎಂದರು.
ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರ ಜತೆ ಚರ್ಚೆ:
ಎಲ್ಲರೂ ಏನ್ ಚರ್ಚೆ ಮಾಡ್ತಿದಾರೆ ಅಂದ್ರೆ, ಈಗ ಕೋವಿಡ್ ಫ್ಲೂ ಥರ ಬಂದು ಹೋಗುತ್ತೆ. ಆಸ್ಪತ್ರೆಗಳಿಗೂ ಹೆಚ್ಚು ದಾಖಲಾತಿ ಆಗ್ತಿಲ್ಲ. ಹೀಗಾಗಿ ನಾವು ದೈನಂದಿನ ಕೆಲಸಗಳನ್ನು ಮಾಡ್ಕೋಬಹುದು ಅನ್ನೋ ಭಾವನೆ ಇದೆ. ಈ ಹಿನ್ನೆಲೆಯಲ್ಲಿ ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರು ಪರಾಮರ್ಶೆ ಮಾಡ್ತಿದ್ದಾರೆ. ಶುಕ್ರವಾರದ ಸಭೆಯಲ್ಲಿ ತಜ್ಞರ ಜತೆ ಚರ್ಚಿಸುತ್ತೇನೆ. ತಜ್ಞರ ಸಲಹೆಯಂತೆ ಸಡಿಲಿಕೆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ರೂಲ್ಸ್ ಬ್ರೇಕ್ ಮಾಡಿದ ಬಿಜೆಪಿಗರ ವಿರುದ್ಧ ಕ್ರಮ:
ಯಾರೇ ರೂಲ್ಸ್ ಬ್ರೇಕ್ (Corona Rules Break) ಮಾಡಿದ್ರೂ ಕ್ರಮ ಕೈಗೊಳ್ತೇವೆ. ನಮ್ಮ ಪಕ್ಷದವ್ರು, ಬೇರೆಯವ್ರು ಅಂತ ನೋಡದೇ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ CS ರವಿಕುಮಾರ್ ಗೆ ಸೂಚನೆ ನೀಡಿದ್ದೇನೆ. ಕಾಂಗ್ರೆಸ್ ನವ್ರು ದೂರು ಕೊಡುವ ಅಗತ್ಯ ಇಲ್ಲ. ಯಾರೇ ಕೋವಿಡ್ ನಿಯಮ ಉಲ್ಲಂಘಿಸಿದರೂ ಕ್ರಮ ಖಂಡಿತ ಎಂದು ಸಿಎಂ ಸ್ಪಷ್ಟನೆ ನೀಡಿದರು.
ಸಚಿವ ಸಂಪುಟ ಪುನಾರಚನೆ ವಿಚಾರ:
ಸಚಿವ ಸಂಪುಟ ಪುನಾರಚನೆ ವಿಚಾರದ ಬಗ್ಗೆ ನಾನು ಸಾರ್ವಜನಿಕವಾಗಿ ಮಾತಾಡಲ್ಲ ಎಂದು ಸಿಎಂ ಹೇಳಿದರು.
ಇದನ್ನೂ ಓದಿ: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ಆರಗ ಜ್ಞಾನೇಂದ್ರ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.