ಸಿದ್ದರಾಮಯ್ಯ ಜೊತೆ ಸಿಎಂ ಮಾತುಕತೆ; ಜೀವ ಬೆದರಿಕೆ ಹಿನ್ನೆಲೆ ಸೂಕ್ತ ಭದ್ರತೆಗೆ ಸೂಚನೆ

ಜೀವ ಬದರಿಕೆ ಹಿನ್ನೆಲೆ ಸಿದ್ದರಾಮಯ್ಯರ ಜೊತೆಗೂ ಸಿಎಂ ಬೊಮ್ಮಾಯಿಯವರು ದೂರವಾಣಿ ಮೂಲಕ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

Written by - Zee Kannada News Desk | Last Updated : Aug 20, 2022, 07:38 AM IST
  • ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ & ಜೀವ ಬೆದರಿಕೆ ಪ್ರಕರಣ
  • ಸಿದ್ದರಾಮಯ್ಯರ ಭದ್ರತೆ ಹೆಚ್ಚಿಸಿ ತನಿಖೆ ನಡೆಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ
  • ಖುದ್ದು ಸಿದ್ದರಾಮಯ್ಯರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯ ಜೊತೆ ಸಿಎಂ ಮಾತುಕತೆ; ಜೀವ ಬೆದರಿಕೆ ಹಿನ್ನೆಲೆ ಸೂಕ್ತ ಭದ್ರತೆಗೆ ಸೂಚನೆ title=
ಸಿದ್ದರಾಮಯ್ಯರ ಭದ್ರತೆ ಹೆಚ್ಚಿಸುವಂತೆ ಸೂಚನೆ

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯರ ಭದ್ರತೆ ಹೆಚ್ಚಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ‘ಸಿದ್ದರಾಮಯ್ಯರಿಗೆ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್‌ ಮಹಾನಿರ್ದೇಶಕರನ್ನು ಕರೆಸಿ ಈ ಬಗ್ಗೆ ಚರ್ಚಿಸಲಾಗಿದೆ. ಕೂಡಲೇ ವಿರೋಧ ಪಕ್ಷದ ನಾಯಕರ ಭದ್ರತೆ  ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದೇನೆ’ ಅಂತಾ ಹೇಳಿದ್ದಾರೆ.

ಸಿದ್ದರಾಮಯ್ಯ ಜೊತೆ ಸಿಎಂ ಮಾತುಕತೆ  

ಜೀವ ಬದರಿಕೆ ಹಿನ್ನೆಲೆ ಸಿದ್ದರಾಮಯ್ಯರ ಜೊತೆಗೂ ಸಿಎಂ ಬೊಮ್ಮಾಯಿಯವರು ದೂರವಾಣಿ ಮೂಲಕ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅವರ ಅಥವಾ ಅವರ ಸಿಬ್ಬಂದಿಗೆ ಬೆದರಿಕೆ ಕರೆ ಬಂದಿದ್ದರೆ ಅಂತಹ ಮಾಹಿತಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದೇನೆ. ಈ ವಿಷಯದ ಕುರಿತು ಸಮಗ್ರ ತನಿಖೆ ನಡೆಸಲಾಗುವುದು’ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: "ನಾವು ಕೈಯಲ್ಲಿ ಮೊಟ್ಟೆ ತೆಗೆದುಕೊಂಡರೆ ನೀವು ಬೀದಿಯಲ್ಲಿ ಓಡಾಡಲು ಸಾಧ್ಯವಿಲ್ಲ"

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನವನ್ನು ಯಾರೇ ಮಾಡಿದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗ ಎರಡೂ ಕಡೆಯಿಂದ ತಪ್ಪುಗಳು ಆಗುತ್ತಿವೆ. ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಎಲ್ಲ ಜಿಲ್ಲೆಗಳ ಎಸ್‌ಪಿಗಳಿಗೂ ನಿರ್ದೇಶನ ನೀಡುವಂತೆ ಡಿಜಿಪಿಯವರಿಗೆ ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಕೊಡಗು ಜಿಲ್ಲಾ ಪ್ರವಾಸದ ವೇಳೆ ಆರಂಭದಲ್ಲಿ ತಿತಿಮತಿಯಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಕುಶಾಲನಗರ ತಾಲೂಕಿನ ಗೊಡ್ಡಹೊಸೂರಿನಲ್ಲಿ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಇದಲ್ಲದೆ ಹಾಸನದಲ್ಲಿಯೂ ಸಿದ್ದರಾಮಯ್ಯರ ವಾಹನಕ್ಕೆ ಬಿಜೆಪಿ ಕಾರ್ಯಕರ್ತರು ಗೇರಾವ್ ಹಾಕಿದ್ದರು.

ಇದನ್ನೂ ಓದಿ: "ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವಂತಹ ಆಘಾತಕಾರಿ ಹೇಳಿಕೆಯನ್ನು ಬಿಜೆಪಿ ತನ್ನ ಶಾಸಕರಿಂದಲೇ ಕೊಡಿಸುತ್ತಿದೆ"

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News