ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತಗೊಳಗಾದ ಯಲ್ಲಾಪುರ ತಾಲೂಕಿನ ವಿವಿಧ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಜೊತೆಗೆ ಕೋವಿಡ್ -19(Covid-19) ಲಸಿಕೆ ನೀಡುವ ಕೇಂದ್ರವನ್ನು ಪರಿಶೀಲಿಸಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಜಿಲ್ಲಾಧಿಕಾರಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಮುಖ್ಯಮಂತ್ರಿ @BSBommai ರವರು ಇಂದು ಹುಬ್ಬಳ್ಳಿ ನವನಗರ ಸಮೀಪವಿರುವ ಅಮರಗೋಳದಲ್ಲಿ ತಮ್ಮ ತಾಯಿ ಗಂಗಮ್ಮ ಎಸ್.ಬೊಮ್ಮಾಯಿ ಹಾಗೂ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ, ಗೌರವ ಸಮರ್ಪಿಸಿದರು. pic.twitter.com/Vki8uIpDmi
— CM of Karnataka (@CMofKarnataka) July 29, 2021
ಇದನ್ನೂ ಓದಿ : ಸಿಎಂ ಬೊಮ್ಮಾಯಿ ಸಚಿವ ಸಂಪುಟಕ್ಕೆ ನಾನು ಸೇರುವುದಿಲ್ಲ: ಜಗದೀಶ್ ಶೆಟ್ಟರ್
ಅಲ್ಲದೆ, ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ(Veera Someshwara Shivacharya) ಭಗವತ್ಪಾದರು ಶ್ರೀಗಳನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಮುಖ್ಯಮಂತ್ರಿ @BSBommai ರವರು ಇಂದು ಯಲ್ಲಾಪುರ ತಾಲ್ಲೂಕಿನ ಬಾರೇಕಳಚೆ - ಕೈಗಾ ರಸ್ತೆ, ಕುಸಿದ ಸೇತುವೆ ಮೊದಲಾದ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಪ್ರದೇಶಗಳನ್ನು ವೀಕ್ಷಿಸಿದರು.
ಮಾಜಿ ಸಚಿವ @ShivaramHebbar ಮತ್ತಿತರರು ಉಪಸ್ಥಿತರಿದ್ದರು. pic.twitter.com/dWsLGKQEcq
— CM of Karnataka (@CMofKarnataka) July 29, 2021
ಇದಕ್ಕೂ ಮೊದಲು ಹುಬ್ಬಳ್ಳಿಯಲ್ಲಿರುವ ತಮ್ಮ ತಂದೆಯವರಾದ ಎಸ್. ಆರ್. ಬೊಮ್ಮಾಯಿ(SR Bommai) ಹಾಗೂ ಅವರ ತಾಯಿ ಗಂಗಮ್ಮ ಎಸ್ ಬೊಮ್ಮಾಯಿ ಅವರ ಗದ್ದಿಗೆ ಪೂಜೆ ಸಲ್ಲಿಸಿ ಗೌರವ ನಮನಗಳನ್ನು ಸಲ್ಲಿಸಿದರು.
ಹುಬ್ಬಳ್ಳಿಯ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಇಂದು ಮುಖ್ಯಮಂತ್ರಿ @BSBommai ರವರು ರಂಭಾಪುರಿ ಪೀಠದ ಪರಮಪೂಜ್ಯ ಡಾ. ವೀರಸೋಮೇಶ್ವರ ಜಗದ್ಗುರುಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. pic.twitter.com/vyu1AcCxw3
— CM of Karnataka (@CMofKarnataka) July 29, 2021
ಇದನ್ನೂ ಓದಿ : NEW CM BUMPER: ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ, ಮಾಸಾಶನ ಹೆಚ್ಚಳ ಮಾಡಿ ನೂತನ ಸಿಎಂ ಘೋಷಣೆ
ನಂತರ ಹುಬ್ಬಳ್ಳಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(RSS)ದ ಉತ್ತರ ಪ್ರಾಂತ ಕಾರ್ಯಾಲಯ ಕೇಶವ ಕುಂಜಕ್ಕೆ ಭೇಟಿ ನೀಡಿ ಕೇಶವ ಬಲಿರಾಮ್ ಹೆಡ್ಗೆವಾರ್ ಅವರ ಭಾರತಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಂಘದ ಹಿರಿಯರೊಂದಿಗೆ ಚರ್ಚಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ