CM Bommai on COVID-19 Precautions: ಸರ್ಕಾರದ ಕ್ರಮಗಳಿಗೆ ಎಲ್ಲರ ಸಹಕಾರ ಅಗತ್ಯ: ಸಿಎಂ ಬೊಮ್ಮಾಯಿ

CM Bommai on COVID-19: ಕೊರೊನಾ ಆತಂಕ ಮತ್ತೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು. ಆರೋಗ್ಯ ಸಚಿವರು ಈ ಬಗ್ಗೆ ಕ್ರಮ ವಹಿಸಿ ಹಾಗೂ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಆಗಿರುವ ಕಹಿ ಘಟನೆ ಮತ್ತೆ ಮರುಕಳಿಸುವುದು ಬೇಡ ಎಂದು ಆಗ್ರಹಿಸಿದರು. ಇದಕ್ಕೆ ಕೆಲ ಸದಸ್ಯರು ಸಲಹೆಗಳನ್ನು ನೀಡಿ ಅವರ ಆತಂಕ ಹೊರಹಾಕಿದರು.

Written by - Prashobh Devanahalli | Edited by - Bhavishya Shetty | Last Updated : Dec 22, 2022, 02:53 PM IST
    • ಕೊರೊನಾ ಆತಂಕ ಮತ್ತೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು
    • ಈ ಬಗ್ಗೆ ಕ್ರಮ ವಹಿಸಿ ಹಾಗೂ ಅಗತ್ಯ ಕ್ರಮ ಕೈಗೊಳ್ಳಬೇಕು
    • ಕಹಿ ಘಟನೆ ಮತ್ತೆ ಮರುಕಳಿಸುವುದು ಬೇಡ ಎಂದು ಮುಂಜಾಗೃತೆ ಕೈಗೊಳ್ಳುವಂತೆ ಮಾಜಿ ಸಿಎಂ ಒತ್ತಾಯ
CM Bommai on COVID-19 Precautions: ಸರ್ಕಾರದ ಕ್ರಮಗಳಿಗೆ ಎಲ್ಲರ ಸಹಕಾರ ಅಗತ್ಯ: ಸಿಎಂ ಬೊಮ್ಮಾಯಿ title=
Corona Precaution

CM Bommai on COVID-19: ಬೆಳಗಾವಿ: ಮತ್ತೆ COVID ಆತಂಕ ಹೆಚ್ಚಳ ಆಗುತ್ತಿರುವ ಬೆನ್ನಲ್ಲೇ ಸದನ ಕಲಾಪದಲ್ಲಿ ಕೆಲ ಚರ್ಚೆ ನಡೆಯಿತು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ 3 ಗಂಟೆಗೆ ಸಭೆ ಇದೆ. ಮುಂದಿನ ಕ್ರಮಗಳ ಜಾರಿ ಬಗ್ಗೆ ಸದನಕ್ಕೆ ಹಾಗೂ ಸಾರ್ವಜನಿಕರಿಗೆ ತಿಳಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

ಕೊರೊನಾ ಆತಂಕ ಮತ್ತೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು. ಆರೋಗ್ಯ ಸಚಿವರು ಈ ಬಗ್ಗೆ ಕ್ರಮ ವಹಿಸಿ ಹಾಗೂ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಆಗಿರುವ ಕಹಿ ಘಟನೆ ಮತ್ತೆ ಮರುಕಳಿಸುವುದು ಬೇಡ ಎಂದು ಆಗ್ರಹಿಸಿದರು. ಇದಕ್ಕೆ ಕೆಲ ಸದಸ್ಯರು ಸಲಹೆಗಳನ್ನು ನೀಡಿ ಅವರ ಆತಂಕ ಹೊರಹಾಕಿದರು.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ವಿಚಾರ : ನಾಳಿನ ಸಂಪುಟ ಸಭೆಯಲ್ಲಿ ನಿರ್ಧಾರ?

ಇದಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಸುಧಾಕರ್, ಕೆಲವು ದೇಶಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ. ಆಸ್ಪತ್ರೆಗಳಲ್ಲಿ ರೋಗಿಗಳು ದಾಖಲಾಗುತ್ತಿರುವುದು ವರದಿಯಾಗಿದೆ. ರಾಜ್ಯದಲ್ಲಿ ಕ್ರಮಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಇಂದು ಸಭೆ ಕರೆಯಲಾಗಿದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಅಧಿಕಾರಿಗಳ ಜೊತೆ ಸಭೆ ನಡೆಯಲಿದೆ. ಯಾವ ರೀತಿ ಕ್ರಮಕೈಗೊಳ್ಳಬೇಕೆಂಬ ಬಗ್ಗೆ ಚರ್ಚಿಸುತ್ತೇವೆ. ಕೇಂದ್ರ ಸರ್ಕಾರದ ಅಧಿಕಾರಿಗಳ ಜೊತೆಯೂ ಚರ್ಚಿಸಲಾಗುವುದು. ಕೇಂದ್ರದಿಂದ ಕಾಲಕಾಲಕ್ಕೆ ಮಾಹಿತಿ‌ ಪಡೆಯುತ್ತೇವೆ ಎಂದರು.

ಕೋವಿಡ್ ಲಸಿಕೆ ಮೂರನೇ ಡೋಸ್ ಗೆ ಜನರಲ್ಲಿ ಆಸಕ್ತಿ ಕಮ್ಮಿ!

ಲಸಿಕೆ ಬಗ್ಗೆ ವಿವರಣೆ ನೀಡಿದ ಸಚಿವ ಸುಧಾಕರ್, ಈಗಾಗಲೇ ಎರಡು ಡೋಸ್ ಗಳನ್ನು ಪಡೆದಿದ್ದೇವೆ. ಆದರೆ ಮೂರನೇ ಡೋಸ್ ಬಗ್ಗೆ ಜನರಲ್ಲಿ ಆಸಕ್ತಿ ಮೂಡಿಲ್ಲ. ಶೇ.20ರಷ್ಟು ಜನರು ಮಾತ್ರ ಮೂರನೇ ಡೋಸ್ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಯಾನವನ್ನ ಆರಂಭಿಸುತ್ತೇವೆ ಎಂದರು.

ಆಗ ಮಧ್ಯಪ್ರವೇಶಿಸಿದ ಜೆಡಿಎಸ್ ಸದಸ್ಯ ಬಂಡೆಪ್ಪ ಕಾಶೆಂಪೂರ್, ಮೂರನೇ ಡೋಸ್ ಬಗ್ಗೆ ಅನುಮಾನಗಳು ಮೂಡಿವೆ. ಕೆಲವರು ಯಾಕೆ ಮೂರನೇ ಡೋಸ್ ತೆಗೆದುಕೊಂಡ್ರಿ ಅಂತಾರೆ. ಇದರ ಬಗ್ಗೆ ಮೊದಲು ಸ್ಪಷ್ಟತೆ ಮೂಡಿಸಿ ಎಂದರು.

ಇದನ್ನೂ ಓದಿ: "ಬೇರೆ ಪಕ್ಷಗಳು ಸೋಲುತ್ತವೆ ಎಂದು ಆ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಕಡಿಮೆ ಇದ್ದಾರೆ"

ಆಗ ಮೂರನೇ ಡೋಸ್ ಕಡ್ಡಾಯಗೊಳಿಸಿ ಎಂದು ಒತ್ತಾಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿ, ಶೇ.20 ರಷ್ಟು ಮಂದಿ ಮಾತ್ರ ಮೂರನೇ ಡೋಸ್ ಪಡೆದುಕೊಂಡಿದ್ದಾರೆ ಅನ್ನೋದು ತುಂಬಾ ಕಡಿಮೆಯೇ. ಹಾಗಾಗಿ ಇದನ್ನ ಮೊದಲು ಕಡ್ಡಾಯಗೊಳಿಸಿ ಎಂದು ಸಲಹೆ ನೀಡಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News