ಬೆಂಗಳೂರು : ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಆದರೂ ಅನಾವಶ್ಯಕ ನಿರ್ಬಂಧ ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬುಧವಾರ ಕೋವಿಡ್ ಕುರಿತಾಗಿ ವಿವಿಧ ರಾಜ್ಯಗಳ ಸಿಎಂಗಳ ಜೊತೆಗೆ ಪ್ರಧಾನಿ ಮೋದಿ ಸಭೆಯ ಬಳಿಕ ಮಾತನಾಡಿದ ಅವರು, ಎಲ್ಲೆಲ್ಲಿ ಅವಶ್ಯಕತೆ ಇದೆ. ಎಷ್ಟು ಅವಶ್ಯಕತೆ ಇದೆ ಅಲ್ಲಿ ಕ್ರಮ ಕೈಗೊಳ್ಳಿ. ಅದರ ಬದಲಾಗಿ ಅನವಶ್ಯಕ ನಿರ್ಬಂಧ ಬೇಡ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ತಿಳಿಸಿದರು.
ಇದನ್ನು ಓದಿ: ಕೇವಲ ʼಲಡ್ಡೂʼಗಾಗಿ ಅಲ್ಲೋಲ ಕಲ್ಲೋಲವಾಯ್ತು ಮದುವೆ ಮನೆ...
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುದೀರ್ಘವಾಗಿ ಕೇಂದ್ರ ಸರ್ಕಾರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಹಾಗೂ ರಾಜ್ಯದ ವರದಿಯನ್ನು ಪಡೆದುಕೊಂಡಿದ್ದಾರೆ. ಹಾಗೂ ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ನಾವು ಪ್ರಧಾನಿಗೆ ರಾಜ್ಯದ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇವೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಏಪ್ರಿಲ್ 9ರ ಬಳಿಕ ಬೆಂಗಳೂರಿನಲ್ಲಿ ಕೋವಿಡ್ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಟೆಸ್ಟಿಂಗ್ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ ಎಂದರು.
ಪ್ರತಿದಿನ 30,000 ಟೆಸ್ಟಿಂಗ್ ಮಾಡಲು ತೀರ್ಮಾನ ಮಾಡಿದ್ದೇವೆ. ಈ ಪೈಕಿ 10,000 ಬೆಂಗಳೂರು ಹಾಗೂ 20,000 ಜಿಲ್ಲೆಗಳಲ್ಲಿ. ಅಷ್ಟೇ ಅಲ್ಲದೆ ಅವರ ಟೆಲಿ ಟ್ರ್ಯಾಕಿಂಗ್ ಮಾಡಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಕಲ್ಪಿಸಿರುವ ವ್ಯವಸ್ಥೆ ಬಗ್ಗೆಯೂ ಪ್ರಧಾನಿಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ 50 ಸಾವಿರಕ್ಕೂ ಅಧಿಕ ಬೆಡ್ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1 ಲಕ್ಷ ಬೆಡ್ ವ್ಯವಸ್ಥೆ ಕಲ್ಪಿಸಲಾಗಿದೆ. ಅದೇ ರೀತಿ ಆಕ್ಸಿಜನ್ ಸ್ಟಾಕ್ ಕೂಡಾ ಇದೆ. ನಾವು ಸನ್ನದ್ಧರಾಗಿದ್ದು, ಸುಮಾರು 60 ಲಕ್ಷ ವ್ಯಾಕ್ಸಿನ್ ಕೂಡಾ ದಾಸ್ತಾನು ಇದೆ ಎಂಬ ಮಾಹಿತಿಯನ್ನು ನೀಡಿದ್ದೇವೆ ಎಂದರು.
ಪ್ರಧಾನಿ ಮೋದಿ ಕೂಡಾ ಕೆಲವೊಂದು ಸೂಚನೆಗಳನ್ನು ನೀಡಿದ್ದಾರೆ. 6-12 ವರ್ಷದ ಮಕ್ಕಳಿಗೆ ಶಾಲೆಯಲ್ಲಿ ಲಸಿಕೆ ಅಭಿಯಾನದ ರೂಪದಲ್ಲಿ ಮಾಡಬೇಕು ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.
15-18 ವರ್ಷದ ಮಕ್ಕಳ ಲಸಿಕೆ ಚುರುಕಿಗೆ ಸೂಚಿಸಿದ್ದಾರೆ. ಅದೇ ರೀತಿ ಟ್ರಾಕ್, ಟೆಸ್ಟ್, ಟ್ರೀಟ್ ಹಾಗೂ ಠೀಕಾಗೆ ಆದ್ಯತೆ ಕೊಡಬೇಕು. ಹಾಗೂ ಸಾರ್ವಜನಿಕವಾಗಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ಮುಂದುವರಿಸಿ ಎಂಬ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಆಸ್ಪತ್ರೆಗಳಲ್ಲಿ ಬೆಂಕಿ ಅವಘಡ ಆಗಿರುವ ಬಗ್ಗೆ ಆಡಿಟ್ ಮಾಡಲು ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಲಸಿಕೆ ಅಭಿಯಾನ ಉತ್ತಮವಾಗಿ ಮಾಡಿರುವುದರಿಂದ ಮೂರನೇ ಅಲೆ ಸಮರ್ಥವಾಗಿ ಎದುರಿಸಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಲಸಿಕೆ ಹೆಚ್ಚಳ ಮಾಡಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆ ನೀಡಿದ್ದಾರೆ.
ಜನರಲ್ಲಿ ಭಯದ ಬದಲಾಗಿ, ಮುಂಜಾಗ್ರತಾ ಕ್ರಮ ಕೈಗೊಂಡು ಜೀವನ ಮುಂದುವರಿಸಬೇಕು. ಕೋವಿಡ್ ನಿಯಂತ್ರಣ ಮಾಡಲು ಏನು ಕ್ರಮ ಕೈಗೊಳ್ಳಬೇಕು ಅದನ್ನು ಕೈಗೊಳ್ಳಿ ಎಂಬ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಇದನ್ನು ಓದಿ: SRH ಟೀಂ ಮ್ಯಾಚ್ ವಿನ್ನರ್ಗಳು ಈ 2 ಬೌಲರ್ಗಳು : ಇವರ ವೇಗಕ್ಕೆ ಎದುರಾಳಿ ಎದೆಯಲ್ಲಿ ಗಡ ಗಡ!
12 ರಿಂದ 15 ಹಾಗೂ 15 ರಿಂದ 18 ಜೊತೆಗೆ 60 ಕ್ಕೆ ಮೇಲ್ಪಟ್ಟವರಿಗೆ ಲಸಿಕೆ ನೀಡುವುದನ್ನು ಹೆಚ್ಚಳ ಮಾಡುತ್ತೇವೆ. ಎಲ್ಲ ಆಸ್ಪತ್ರೆಗಳಲ್ಲಿ ಇರುವ ರೋಗಿಗಳಿಗೆ ಕೋವಿಡ್ ತಪಾಸಣೆ ಮಾಡಲಾಗುತ್ತದೆ. ಅಲ್ಲಿ ಪಾಸಿಟಿವ್ ಬಂದರೆ ಅದನ್ನು ಜಿನೋಮ್ ಸೀಕ್ವೆಂನ್ಸ್ಗೆ ಕಳುಹಿಸಲಾಗುವುದು. ಹಾಗೂ ಕೋವಿಡ್ ನಿಯಂತ್ರಣ ಕ್ರಮಗಳನ್ನು ಮುಂದುವರಿಸಲಾಗುತ್ತದೆ ಎಂದರು. ಅದರ ಜೊತೆಗೆ ಈಗಾಗಲೇ ಇರುವ ಆಕ್ಸಿಜನ್ ದಾಸ್ತಾನು ಪ್ರಮಾಣವನ್ನು 1,100 ಮೆಟ್ರಿಕ್ ಟನ್ ಪ್ರಮಾಣದಲ್ಲಿ ಹೆಚ್ಚು ಮಾಡಲಾಗುವುದು ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.