Basavaraj Bommai : 'ಭ್ರಷ್ಟಾಚಾರವನ್ನು ಹುಟ್ಟಿಹಾಕಿದ್ದೇ ಕಾಂಗ್ರೆಸ್ ಪಾರ್ಟಿ'

ಭ್ರಷ್ಟಾಚಾರವನ್ನು ಹುಟ್ಟಿಹಾಕಿದ್ದೇ ಕಾಂಗ್ರೆಸ್ ಪಕ್ಷ. ಲೋಕಾಯುಕ್ತವನ್ನು ಮುಚ್ಚಿ ಎಸಿಬಿಯನ್ನು ಪ್ರಾರಂಭಿಸಿದರು. 50 ಕ್ಕಿಂತ ಹೆಚ್ಚು ಪ್ರಕರಣಗಳು ಕಾಂಗ್ರೆಸ್ ನವರ ಮೇಲಿತ್ತು. ಅವುಗಳನ್ನು ಮುಚ್ಚಿಹಾಕಿದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Written by - Prashobh Devanahalli | Last Updated : Nov 22, 2022, 09:13 PM IST
  • ಭ್ರಷ್ಟಾಚಾರವನ್ನು ಹುಟ್ಟಿಹಾಕಿದ್ದೇ ಕಾಂಗ್ರೆಸ್ ಪಕ್ಷ
  • ಹಿರಿಯೂರಿನಲ್ಲಿ ನಡೆದ ಜನ ಸಂಕಲ್ಪ ಯಾತ್ರೆ
  • 50 ಕ್ಕಿಂತ ಹೆಚ್ಚು ಪ್ರಕರಣಗಳು ಕಾಂಗ್ರೆಸ್ ನವರ ಮೇಲಿತ್ತು
Basavaraj Bommai : 'ಭ್ರಷ್ಟಾಚಾರವನ್ನು ಹುಟ್ಟಿಹಾಕಿದ್ದೇ ಕಾಂಗ್ರೆಸ್ ಪಾರ್ಟಿ' title=

ಚಿತ್ರದುರ್ಗ  : ಭ್ರಷ್ಟಾಚಾರವನ್ನು ಹುಟ್ಟಿಹಾಕಿದ್ದೇ ಕಾಂಗ್ರೆಸ್ ಪಕ್ಷ. ಲೋಕಾಯುಕ್ತವನ್ನು ಮುಚ್ಚಿ ಎಸಿಬಿಯನ್ನು ಪ್ರಾರಂಭಿಸಿದರು. 50 ಕ್ಕಿಂತ ಹೆಚ್ಚು ಪ್ರಕರಣಗಳು ಕಾಂಗ್ರೆಸ್ ನವರ ಮೇಲಿತ್ತು. ಅವುಗಳನ್ನು ಮುಚ್ಚಿಹಾಕಿದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಬಿಜೆಪಿ ವತಿಯಿಂದ ಇಂದು ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಆದರೆ ತಾವೇ ಶುದ್ಧಹಸ್ತರು ಎನ್ನುವಂತೆ ಮಾತನಾಡುವ ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ಭ್ರಷ್ಟಾಚಾರ ಮಾಡಿದೆ. ಸಾಮಾಜಿಕ ನ್ಯಾಯವೆಂದು ಮಾತನಾಡುವ ಕಾಂಗ್ರೆಸ್, ಸಾಮಾಜಿಕ ಅನ್ಯಾಯವನ್ನೇ ಮಾಡಿದೆ. ಹೆಚ್ಚಿನ ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತ ಕಳೆದುಕೊಂಡಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಭಾಜಪ ಪರ ಫಲಿತಾಂಶ ಕರ್ನಾಟಕ ರಾಜ್ಯದ ಭಾಜಪ ಗೆಲುವಿಗೆ ಮುನ್ನುಡಿ ಬರೆಯಲಿದೆ ಎಂದರು.

ಇದನ್ನೂ ಓದಿ : ಬಳ್ಳಾರಿ ‘ನವಶಕ್ತಿ ಸಮಾವೇಶ’ದ ಯಶಸ್ಸು ಕಾಂಗ್ರೆಸ್ ಪಕ್ಷಕ್ಕೆ ತಳಮಳ ಮೂಡಿಸಿದೆ: ಬಿಜೆಪಿ

ಕಾಂಗ್ರೆಸ್ ಪಕ್ಷ 50 ವರ್ಷಕ್ಕಿಂತ ಹೆಚ್ಚು ಕರ್ನಾಟಕವನ್ನು ಆಳಿದ್ದಾರೆ. ವಾಣಿವಿಲಾಸ ಸಾಗರದ ಕಾಯಕಲ್ಪ ಮಾಡಬೇಕೆನ್ನುವ ಇಚ್ಛಾಶಕ್ತಿ ಅವರಿಗಿರಲಿಲ್ಲ. ಇಲ್ಲಿನ ಜನ ಮತ ಹಾಕಿ ಗೆಲ್ಲಿಸಿದ ಕಾಂಗ್ರೆಸ್ ಪಕ್ಷ, ಜನರಿಗೆ ನೀರು ಪೂರೈಸುವ ಮೂಲಕ ಜನರ ಋಣವನ್ನು ತೀರಿಸುವ ಕೆಲಸ ಮಾಡಲಿಲ್ಲ. ಆದರೆ ಈ ಕೆಲಸವನ್ನು ಭಾಜಪ ಸರ್ಕಾರ ಮಾಡಿದೆ ಎಂದರು.

ಕಾಂಗ್ರೆಸ್ ನವರು  ಮತ್ತೆ ಅಧಿಕಾರಕ್ಕೆ ಬರಬೇಕೆಂದು ಹಂಬಲಿಸುತ್ತಾರೆ. ಅವರ ಅಧಿಕಾರದ ಐದು ವರ್ಷಗಳಲ್ಲಿ ಅನ್ನಭಾಗ್ಯದಲ್ಲಿ ಕನ್ನ ಹೊಡೆದರು.ಎಸ್ ಸಿ ಎಸ್ ಟಿ ಗಳಿಗೆ ನೀಡುವ ದಿಂಬು ಹಾಸಿಗೆಗಳಿಗೂ ಕನ್ನ, ಸಣ್ಣನೀರಾವರಿ, ಜಲಸಂಪನ್ಮೂಲ, ವಿದ್ಯುಚ್ಛಕ್ತಿಯಲ್ಲಿ ಭ್ರಷ್ಟಾಚಾರ ಮಾಡಿದರು. ಎಸ್ ಸಿ, ಎಸ್ ಟಿ , ಹಿಂದುಳಿದ ವರ್ಗದ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ತಿಳಿಸಿದರು.

ಇದನ್ನೂ ಓದಿ : Mangaluru auto blast : ನಾಳೆ ಮಂಗಳೂರಿಗೆ ಗೃಹ ಸಚಿವರ ಭೇಟಿ, ಹಿರಿಯ ಅಧಿಕಾರಿಗಳ ಜೊತೆ ಸಭೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News