ಹುಬ್ಬಳ್ಳಿ : ಕೋವಿಡ್ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಭೆಯಲ್ಲಿ ಸೂಚಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರ ಜೊತೆಗೆ ಮಾತನಾಡಿ, ಮಹಾಮಾರಿ ಕೊರೊನಾ ಹೆಚ್ಷಾಗದಂತೆ ಹೆಚ್ಚು ಹೆಚ್ಚು ಬೂಸ್ಟರ್ ಡೋಸ್ ಕೊಡುವುದು, ಶಿಬಿರಗಳನ್ನು ಮಾಡಿ, ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಇದನ್ನೂ ಓದಿ : Hubballi : ಹುಬ್ಬಳ್ಳಿಯ ಬೈರಿದೇವರಕೊಪ್ಪದ ದರ್ಗಾ ಶಿಫ್ಟ್ : ಸ್ಥಳಕ್ಕೆ ಸಿಎಂ ಬೊಮ್ಮಾಯಿ ಭೇಟಿ
ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ಏರ್ಪೋರ್ಟ್ ಗಳಲ್ಲಿ ಕೋವಿಡ್ ತಪಾಸಣೆ ನಡೆಸಿ ಕಟ್ಟೆಚ್ಚರ ವಹಿಸಲಾಗುವದು. ಹೊಸ ವರ್ಷಕ್ಕೆ ಹೊಸ ಗೈಡ್ ಬಗ್ಗೆ ಸಚಿವರಾದ ಅಶೋಕ್ ಮತ್ತು ಸುಧಾಕರ ಚರ್ಚೆ ಮಾಡಿ ತಿಳಿಸುತ್ತಾರೆ. ಅದು ಯಾವ ರೀತಿ ಇರುತ್ತದೆ ನೋಡೋಣ. ಈಗಾಗಲೇ ಆರೋಗ್ಯ ಸಚಿವರಿಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಸಹ ತಿಳಿಸಲಾಗಿದೆ. ಒಂದು ವೇಳೆ ಕೋವಿಡ್ ಹೆಚ್ಚಾದರೆ ಆ ಸಂದರ್ಭದಲ್ಲಿ ತೊಂದರೆ ಆಗದಂತೆ ಆಕ್ಸಿಜನ್, ಸೇರಿದಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಇರಲಿ ಎಂದರು.
ವಿಧಾನ ಪರಿಷತ್ ಹಾಗೂ ವಿಧಾನಸಭಾ ಉಭಯ ಸದನಗಳಲ್ಲಿ ಉತ್ತರ ಕರ್ನಾಟಕದ ವಿಚಾರಗಳ ಚರ್ಚೆ ಆಗದ ವಿಚಾರ ಕುರಿತು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಕನಿಷ್ಠ ಎರಡು - ಮೂರು ದಿನ ಚರ್ಚೆ ಆಗಬೇಕು. ಈಗಾಗಲೇ ಸಭಾಪತಿಗಳ ಜೊತೆ ಇದೇ ವಿಚಾರ ಮಾತನಾಡಿದ್ದೇನೆ. ಅವಧಿ ಪೂರ್ಣ ಚುನಾವಣೆ ಹೋಗುವ ಮಾತೇ ಇಲ್ಲ. ಇನ್ನು ಯಾವುದೇ ಕಾರಣಕ್ಕೋ ಅವಧಿ ಪೂರ್ಣ ಚುನಾವಣೆ ನಡೆಸಲ್ಲ. ಆದರೆ ಕಾಂಗ್ರೆಸ್ ನಾಯಕರಿಗೆ ಕಾಡುತ್ತಿದೆ. ಅವರ ಕಾರ್ಯಕರ್ತರನ್ನ ಸನ್ನದ್ಧ ಮಾಡಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ : ರಾಜ್ ಕುಟುಂಬದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ: ಪುನೀತ್ ಕೆರೆಹಳ್ಳಿಗೆ ಧರ್ಮದೇಟು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.