ʼಭಾರತ್ ಜೋಡೋ ಮಾಡಿದ್ಯಾರು, ತೋಡೋ ಮಾಡಿದ್ಯಾರು ಎಂದು ತಿಳಿದಿದೆʼ

ಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು ತೋಡೋ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Written by - Zee Kannada News Desk | Edited by - Krishna N K | Last Updated : Sep 29, 2022, 03:02 PM IST
  • ಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು ತೋಡೋ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ
  • ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ
  • ಎಸ್.ಡಿ.ಪಿ.ಐ ಬ್ಯಾನ್‌ ಬಗ್ಗೆ ಈಗಲೇ ನಿರ್ಧಾರವಿಲ್ಲ
ʼಭಾರತ್ ಜೋಡೋ ಮಾಡಿದ್ಯಾರು, ತೋಡೋ ಮಾಡಿದ್ಯಾರು ಎಂದು ತಿಳಿದಿದೆʼ title=

ಹಾವೇರಿ : ಯಾರು ಭಾರತ್ ಜೋಡೋ ಮಾಡಿದ್ದಾರೆ, ಯಾರು ತೋಡೋ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಿ.ಬಿ. ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜು ಮೈದಾನದ ಹೆಲಿಪ್ಯಾಡ್‍ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಭಾರತ್ ಜೋಡೋ ಫ್ಲೆಕ್ಸ್‌ಗಳನ್ನು ಹರಿದುಹಾಕಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಡಿ.ಕೆ.ಶಿವಕುಮಾರ್ ಏನಾದರೂ ಹೇಳಲಿ. ಯಾರೇ ಫ್ಲೆಕ್ಸ್ ಹಾಕಬೇಕಾದರೂ ಅನುಮತಿ ಪಡೆಯಬೇಕು. ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯುವ ಅವಶ್ಯಕತೆ ಬಿಜೆಪಿಗೆ ಇಲ್ಲ. ಎಲ್ಲ ಜನರಿಗೂ ಎಲ್ಲಾ ವಿಚಾರಗಳು ಗೊತ್ತಿದೆ. ಹೀಗಾಗಿ ಅದರ ಅವಶ್ಯಕತೆ ಇಲ್ಲ ಎಂದು ನನ್ನ ಭಾವನೆ ಎಂದರು.

ಇದನ್ನೂ ಓದಿ: ರಿಯಲ್‌ ಗನ್‌ ಹಿಡಿದು ಶೂಟರ್‌ ಲೆವೆಲ್‌ಗೆ ಫೈಯರ್‌ ಮಾಡಿದ ರಾಕಿಭಾಯ್‌..!

ಎಸ್.ಡಿ.ಪಿ.ಐ ಬಗ್ಗೆ ಈಗಲೇ ನಿರ್ಧಾರವಿಲ್ಲ : ಪಿ.ಎಪಿ.ಐ  ನಿಷೇಧಿಸಲಾಗಿದೆ. ಹಲವಾರು ಪಾತ್ರಗಳನ್ನು ಪಡೆದುಕೊಡದ್ದಿದೆ. ಎಸ್.ಡಿ.ಪಿ.ಐ ಭಾರತ ಚುನಾವಣಾ ಆಯೋಗದಲ್ಲಿ ನೋಂದಣಿಯಾಗಿರುವ ಪಕ್ಷ. ಇದರ ನಿಷೇಧದ ಬಗ್ಗೆ  ಯಾವುದೇ ನಿರ್ಧಾರ  ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ. ಬರುವ ದಿನಗಳ ಬೆಳವಣಿಗೆಯ ಆಧಾರದ ಮೇಲೆ  ಕ್ರಮವಹಿಸಲಾಗುವುದು ಎಂದರು. 

ಗಿಮಿಕ್ ಎನ್ನುವುದು ಸರಿಯಲ್ಲ : ಪಿ.ಎಫ್.ಐ ನಿಷೇಧ ರಾಜಕೀಯ ಸ್ಟಂಟ್ ಹಾಗೂ ಚುನಾವಣಾ ಗಿಮಿಕ್  ಎಂದಿರುವ ಬಿ.ಕೆ.ಹರಿಪ್ರಸಾದ್ ಅವರಿಗೆ ಬೇರೇನೂ ವ್ಯಾಖ್ಯಾನ ಮಾಡಲು ಸಾಧ್ಯ. ಇಷ್ಟು ವರ್ಷ ವಿಧ್ವಂಸಕ ಕೃತ್ಯಗಳು ನಮ್ಮೆದುರಿಗೆ ನಡೆದಿದೆ. ಕೊಲೆ, ಭಯೋತ್ಪಾದನೆ ಚಟುವಟಿಗೆ ಬೆಂಬಲ ನೀಡಿದ್ದಾರೆ. ಇದೆ ಕಾಂಗ್ರೆಸ್ ವಿಧಾನ ಸಭೆ ಒಳಹೊರಗೆ  ನಿಷೇಧಿಸಿ ಅಂತ ಹೇಳುತ್ತಿದ್ದವರು, ಈಗ ಗಿಮಿಕ್ ಎಂದು ಕರೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಹರಿಪ್ರಸಾದ್ ಯೋಚಿಸಬೇಕು ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News