ನ.11 ರಂದು ಪಿಎಂ ಭೇಟಿ : ಸಂಚಾರ ವ್ಯವಸ್ಥೆಗೆ ತೊಡಕಾಗದಂತೆ ಕ್ರಮಕ್ಕೆ ಸಿಎಂ ಸೂಚನೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ  ಟರ್ಮಿನಲ್ 2ರ ಉದ್ಘಾಟನೆ ಹಾಗೂ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರ್ವಭಾವಿ ಸಭೆ ನಡೆಸಿದರು.

Written by - Prashobh Devanahalli | Last Updated : Oct 20, 2022, 07:36 PM IST
  • ನವೆಂಬರ್ 11 ರಂದು ಪಿಎಂ ಮೋದಿ ಬೆಂಗಳೂರು ಭೇಟಿ
  • 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣ
  • ಈ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಸಿಎಂ ಬೊಮ್ಮಾಯಿ ಪೂರ್ವಭಾವಿ ಸಭೆ
ನ.11 ರಂದು ಪಿಎಂ ಭೇಟಿ : ಸಂಚಾರ ವ್ಯವಸ್ಥೆಗೆ ತೊಡಕಾಗದಂತೆ ಕ್ರಮಕ್ಕೆ ಸಿಎಂ ಸೂಚನೆ title=

ಬೆಂಗಳೂರು : ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ  ಟರ್ಮಿನಲ್ 2ರ ಉದ್ಘಾಟನೆ ಹಾಗೂ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರ್ವಭಾವಿ ಸಭೆ ನಡೆಸಿದರು.

ಈ ಕಾರ್ಯಕ್ರಮದಿಂದ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಕಾರ್ಯಕ್ರಮ ಆಯೋಜಿಸುವಂತೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
 ಇದಕ್ಕೆ  ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ ಎಂಬ ಅಭಿಯಾನ ನಾಳೆಯಿಂದ ಪ್ರಾರಂಭವಾಗಲಿದೆ. ಈ ಅಭಿಯಾನ ಯಶಸ್ವಿಗೊಳಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಮತ್ತು ಪಿಡಿಓಗಳ ಸಹಕಾರ ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇದನ್ನೂ ಓದಿ : ಬೆಂಗಳೂರು-ಪುಣೆ ಮಾರ್ಗದಲ್ಲಿ 10 ಕಿಮೀ ಟ್ರಾಫಿಕ್ ಜಾಮ್..!

ಮೃತ್ತಿಕೆ ಸಂಗ್ರಹಿಸಲು 20 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದ್ದು 15 ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮೃತ್ತಿಕೆ ಸಂಗ್ರಹಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದರು.

ಮೃತ್ತಿಕೆ ಸಂಗ್ರಹ ಅಭಿಯಾನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಆರ್ ಅಶೋಕ, ಡಾ. ಸಿಎನ್ ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ್, ಬಿಎ ಬಸವರಾಜ, ಕೆ ಗೋಪಾಲಯ್ಯ, ಕೆಸಿ ನಾರಾಯಣ ಗೌಡ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಕೃಷ್ಣಪ್ಪ, ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು. 

ಇದನ್ನೂ ಓದಿ : ಬಾಲನ್ಯಾಯ ತಿದ್ದುಪಡಿ ಕಾಯ್ದೆ 2021 ಪಾಲಿಸಲು ಸರ್ಕಾರ ಸೂಚನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News