ಮಕ್ಕಳಿಗೆ ಕೊರೊನಾದಿಂದ ಸ್ವಾತಂತ್ರ್ಯ ಸಿಕ್ಕಿದೆ: ಮಲ್ಲೇಶ್ವರಂ ಕಾಲೇಜಿನಲ್ಲಿ ಸಿಎಂ ಬೊಮ್ಮಾಯಿ

ಬೆಂಗಳೂರಿನ ಮಲ್ಲೇಶ್ವರಂ ಬಡಾವಣೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.  

Written by - Puttaraj K Alur | Last Updated : Aug 23, 2021, 12:22 PM IST
  • ಬೆಂಗಳೂರಿನ ಮಲ್ಲೇಶ್ವರಂ ಬಡಾವಣೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ
  • ಕೋವಿಡ್-19 ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಸಿದ್ಧತೆಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಸಿಎಂ ಸವಾಂದ
  • ಕೊರೊನಾ ಸೋಂಕು ಕಡಿಮೆಯಾದರೆ ಗಡಿ ಜಿಲ್ಲೆಗಳಲ್ಲಿಯೂ ಶಾಲೆ ಆರಂಭಿಸಲಾಗುವುದು ಎಂದ ಸಿಎಂ ಬೊಮ್ಮಾಯಿ
ಮಕ್ಕಳಿಗೆ ಕೊರೊನಾದಿಂದ ಸ್ವಾತಂತ್ರ್ಯ ಸಿಕ್ಕಿದೆ: ಮಲ್ಲೇಶ್ವರಂ ಕಾಲೇಜಿನಲ್ಲಿ ಸಿಎಂ ಬೊಮ್ಮಾಯಿ title=
ವಿದ್ಯಾರ್ಥಿಗಳೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಂವಾದ ನಡೆಸಿದರು (Photo Courtesy: Twitter/@BSBommai)

ಬೆಂಗಳೂರು: ಇಂದಿನಿಂದ(ಆಗಸ್ಟ್ 23) ಶಾಲಾ-ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಆರಂಭವಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂ ಬಡಾವಣೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯ(Basavaraj Bommai)ವರು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.  

ಸಸಿ ನೆಡುವ ಮೂಲಕ ಭೌತಿಕ ತರಗತಿಗಳ ಪುನರಾರಂಭಕ್ಕೆ ಸಿಎಂ ಬೊಮ್ಮಾಯಿ ಸೋಮವಾರ ಚಾಲನೆ ನೀಡಿದರು. ಬಳಿಕ ಕಾಲೇಜಿನ ಕೊಠಡಿಗಳಿಗೆ ಭೇಟಿ ನೀಡಿ ಕೋವಿಡ್-19(COVID-19) ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಸಿದ್ಧತೆಯನ್ನು ಪರಿಶೀಲಿಸಿದರು. ಇದೇ ವೇಳೆ ಯಾವುದೇ ಆತಂಕವಿಲ್ಲದೆ ಕಾಲೇಜಿಗೆ ಬರುವಂತೆ ವಿದ್ಯಾರ್ಥಿಗಳಿಗೆ ಸಿಎಂ ಆಹ್ವಾನಿಸಿದರು. ಮಕ್ಕಳಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸಿದ ಸಿಎಂ ಕೋವಿಡ್-19 ರೂಲ್ಸ್ ಪಾಲಿಸುವಂತೆ ಮನವಿ ಮಾಡಿದರು.  

ಇದನ್ನೂ ಓದಿ: KSP Recruitment 2021: ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ

ಸರ್ಕಾರಿ ಶಾಲೆಯ ಭೇಟಿ ಬಳಿಕ ನಿರ್ಮಲಾ ರಾಣಿ ಅನುದಾನಿತ ಪ್ರೌಢಶಾಲೆ(Nirmala Rani High School)ಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಯಾವುದೇ ಆತಂಕವಿಲ್ಲದೆ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರಬಹುದು. ಆದರೆ ಕೊರೊನಾ ಬಗ್ಗೆ ಅತ್ಯಂತ ಎಚ್ಚರಿಕೆ ವಹಿಸಬೇಕು ಅಂತಾ ಸಲಹೆ ನೀಡಿದರು. ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಕೊರೊನಾವನ್ನು ಹೊಡೆದೊಡಿಸಬಹುದು ಅಂತಾ ವಿದ್ಯಾರ್ಥಿಗಳಲ್ಲಿ ಸಿಎಂ ಜಾಗೃತಿ ಮೂಡಿಸಿದರು.

ಕೋವಿಡ್​ನಿಂದ ಮಕ್ಕಳಿಗೆ ಸ್ವಾತಂತ್ರ್ಯ ಸಿಕ್ಕಿದೆ

ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai), ‘ಕೋವಿಡ್​-19ನಿಂದ ಮಕ್ಕಳಿಗೆ ಇಂದು ಸ್ವಾತಂತ್ರ್ಯ ಸಿಕ್ಕಿದೆ. ಕೊರೊನಾ ಕಡಿಮೆಯಾಗಿ ಶಾಲಾರಂಭವು ಯಶಸ್ವಿ ಆಗಬೇಕು’ ಅಂತಾ ಹೇಳಿದರು. ಗಡಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಕಡಿಮೆಯಾದರೆ ಅಲ್ಲಿಯೂ ಕೂಡ ಶಾಲೆ ಆರಂಭಿಸಲಾಗುವುದು. 1 ರಿಂದ 8ರವರೆಗಿನ ತರಗತಿ ತೆರೆಯಲು ವರದಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.

ಇದನ್ನೂ ಓದಿ: ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

‘ಕಳೆದ ಒಂದೂವರೆ ವರ್ಷದಿಂದ ಶಾಲೆ ನಡೆದಿರಲಿಲ್ಲ. ಕೋವಿಡ್ ಸಾಂಕ್ರಾಮಿಕ(COVID-19 Pandemic)ದ ಸಂದರ್ಭದಲ್ಲಿ ಮಕ್ಕಳನ್ನು ನಿಭಾಯಿಸುವುದು ತುಂಬಾ ಕಷ್ಟ. ಮಕ್ಕಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ತಜ್ಞರ ವರದಿ ಆಧಾರದ ಮೇಲೆ ಇಂದಿನಿಂದ ರಾಜ್ಯಾದ್ಯಂತ 9 ರಿಂದ 12ನೇ ತರಗತಿ ಆರಂಭವಾಗಿದೆ. ಇಂದು ಮಕ್ಕಳು ಮತ್ತು ಶಿಕ್ಷಕರ ಜೊತೆ ಮಾತನಾಡಿದ್ದೇನೆ. ಆನ್​ಲೈನ್ ಶಿಕ್ಷಣದಿಂದ ತೊಂದರೆ ಆಗುತ್ತಿತ್ತು ಅಂತಾ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಎಲ್ಲ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದೇನೆ’ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News