Belagavi News : ಜನ ಸಂಕಲ್ಪ ಯಾತ್ರೆಗೆ ಚಾಲನೆ.. ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಸಿಎಂ

Jana Sankalpa Yatra : ಜನ ಸಂಕಲ್ಪ ಯಾತ್ರೆಗೆ ರಾಯಬಾಗ ಪಟ್ಟಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹಲವು ಸಚಿವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ರಾಯಬಾಗ ಪಟ್ಟಣದಲ್ಲಿ ಸಿಎಂ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ನಂತರ ಬೃಹತ್ ವೇದಿಕೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಕುರಿತು ಜನರಿಗೆ ತಿಳಿಸಿದರು. 

Written by - Zee Kannada News Desk | Last Updated : Nov 9, 2022, 05:36 PM IST
  • ಜನ ಸಂಕಲ್ಪ ಯಾತ್ರೆಗೆ ಚಾಲನೆ
  • ರಾಯಬಾಗ ಪಟ್ಟಣದಲ್ಲಿ ನಡೆದ ಕಾರ್ಯಕ್ರಮ
  • ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಸಿಎಂ
Belagavi News : ಜನ ಸಂಕಲ್ಪ ಯಾತ್ರೆಗೆ ಚಾಲನೆ.. ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಸಿಎಂ title=
ಬೊಮ್ಮಾಯಿ

ಚಿಕ್ಕೋಡಿ : ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಇನ್ನೇನು ನಾಲ್ಕು ತಿಂಗಳು ಇರುವಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಒಂದು ಹೆಜ್ಜೆ ಮುಂದೆ ಎಂಬಂತೆ, ಇವತ್ತು ಬಿಜೆಪಿ ಅಭ್ಯರ್ಥಿಗಳನ್ನು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಆಯ್ಕೆ ಮಾಡುವಂತೆ ಸಿಎಂ ಆದಿಯಾಗಿ ಎಲ್ಲರೂ ಜನರಲ್ಲಿ ಮನವಿ ಸಲ್ಲಿಸಿದರು. ರಾಜ್ಯ ರಾಜಕಾರಣ ಒಂದೆಡೆಯಾದರೆ, ಬೆಳಗಾವಿಯ ರಾಜಕಾರಣ ಪ್ರಬಲವಾಗಿದೆ ಎಂಬ ಮಾತುಗಳು ಪ್ರಸ್ತುತ. ಆದರೆ ಇದಕ್ಕೆ ಪೂರಕ ಎಂಬಂತೆ ಬಿಜೆಪಿ ಪಕ್ಷ ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆ ಪ್ರಚಾರ ನಡೆಸಿದೆ. ಜನ ಸಂಕಲ್ಪ ಯಾತ್ರೆಗೆ ಇಲ್ಲಿಂದಲೇ ಚಾಲನೆ ನೀಡಿದೆ. ರಾಯಬಾಗ ಪಟ್ಟಣದಿಂದ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹಲವು ಸಚಿವರ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಾಯಿತು. 

ಇದನ್ನೂ ಓದಿ : ಗುಬ್ಬಿ ಶ್ರೀನಿವಾಸ್ ಜೊತೆ ಜೆಡಿಎಸ್ ಶಾಸಕರ ಭೇಟಿ : ವಿಶೇಷ ಅರ್ಥ ಬೇಡ ಎಂದ ಹೆಚ್.ಡಿ.ಕುಮಾರಸ್ವಾಮಿ

ರಾಯಬಾಗ ಪಟ್ಟಣದಲ್ಲಿ ಸಿಎಂ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ನಂತರ ಬೃಹತ್ ವೇದಿಕೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಕುರಿತು ಜನರಿಗೆ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಯೋಜನೆಗಳನ್ನು ರೂಪಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು. ಇತ್ತ ಹಲವು ನೀರಾವರಿ ಯೋಜನೆ ಮಂಜೂರಾತಿ ನೀಡುವಂತೆ ವೇದಿಕೆಯಲ್ಲಿ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಸಿಎಂ ಹಾಗೂ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿದರು. 

ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಮಾಜಿ ಸಿದ್ದರಾಮಯ್ಯ ಅವರ ಕಾಲೆಳೆದರು. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಮಾತನಾಡುತ್ತಾರೆ, ಪರಂಪರೆ ಇತಿಹಾಸ ಹೊಂದಿರುವ ಧರ್ಮದ ಬಗ್ಗೆ ಮಾತನಾಡುತ್ತಾರೆ. ರಾಹುಲ್ ಗಾಂಧಿ ಚುನಾವಣೆ ಬಂದಾಗ ಮಾತ್ರ ಹಿಂದೂ ಧರ್ಮದ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಒಟ್ಟಾರೆಯಾಗಿ, ರಾಯಬಾಗ ಪಟ್ಟಣದಲ್ಲಿ ಜನ ಸಂಕಲ್ಪ ಯಾತ್ರೆ ಯಶಸ್ವಿಯಾಗಿದ್ದು,  ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಹಲವು ಬೆಳಗಾವಿ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಗೈರಾಗಿದ್ದು ಎದ್ದು ಕಾಣುತ್ತಿತ್ತು.  

ಇದನ್ನೂ ಓದಿ : ರಾಜಕೀಯಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಬಳಕೆ ಅಕ್ಷಮ್ಯ: ಬಿಜೆಪಿ ವಿರುದ್ಧ ಹೆಚ್ಡಿಕೆ ಕಿಡಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News