ಆನೆಗೆ ಗಾಯ! ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಲಾಗುವುದು: ಸಿಎಂ ಬೊಮ್ಮಾಯಿ

ನಾಗರಹೊಳೆ ಅರಣ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವುದನ್ನು ಗಮನಿಸಿದ್ದು ಈ ಬಗ್ಗೆ ಪತ್ರ ಬರೆದಿದ್ದಾರೆ. 

Written by - Zee Kannada News Desk | Last Updated : Oct 6, 2022, 12:43 PM IST
  • ನಾಗರಹೊಳೆ ಅರಣ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವುದನ್ನು ಗಮನಿಸಿದ್ದರು.
  • ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
  • ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?
ಆನೆಗೆ ಗಾಯ! ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಲಾಗುವುದು: ಸಿಎಂ ಬೊಮ್ಮಾಯಿ title=
Elephant injured

ಬೆಂಗಳೂರು: ನಾಗರಹೊಳೆ ಅರಣ್ಯದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು, ಈ ಬಗ್ಗೆ ಸ್ಪಂದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಇಂದು ಮಾಧ್ಯಮ ದವರೊಂದಿಗೆ ಮಾತನಾಡುತ್ತಿದ್ದರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಗರಹೊಳೆ ಅರಣ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವುದನ್ನು ಗಮನಿಸಿದ್ದು ಈ ಬಗ್ಗೆ ಪತ್ರ ಬರೆದಿದ್ದಾರೆ.  ಇನ್ನು ಅರ್ಧ ಗಂಟೆಯಲ್ಲಿ ಮಾಹಿತಿ ಪಡೆದು ಹಿರಿಯ ಅಧಿಕಾರಿಗಳ ಬಳಿ ಮಾತನಾಡಿ ಆನೆಗಳಿಗೆ ಏನೆಲ್ಲಾ ಚಿಕಿತ್ಸೆ ನೀಡಬಹುದು  ಎಂದು ಪರಿಶೀಲನೆ ಮಾಡಲಾಗುವುದು. ಅವರು ಗಮನಕ್ಕೆ ತಂದಿರುವ ವಿಷಯದ ಬಗ್ಗೆ ಸ್ಪಂದಿಸಲಾಗುವುದು ಹಾಗೂ  ಮಾನವೀಯ ದೃಷ್ಟಿಯಿಂದ  ಅದರ ಅಗತ್ಯವೂ ಇದೆ ಎಂದರು. 

ಇದನ್ನೂ ಓದಿ- ಶಿರಾಳಕೊಪ್ಪದಲ್ಲಿ ನಡುಗಿದ ಭೂಮಿ, ಭಾರೀ ಶಬ್ದಕ್ಕೆ ಬೆಚ್ಚಿ ಬಿದ್ದ ಜನತೆ.!

ಯಾವುದೇ ಪರಿಣಾಮ ಬೀರೋಲ್ಲ:
ಭಾರತ್ ಜೋಡೋ ಅಭಿಯಾನದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ,  ಸಹಜವಾಗಿ ಎಲ್ಲಾ ಪಕ್ಷದ ಮುಖ್ಯಸ್ಥರು ತಮ್ಮ ಪಕ್ಷಕ್ಕೆ ಕೆಲಸ ಮಾಡುತ್ತಾರೆ. ಸೋನಿಯಾ ಗಾಂಧಿ  ಅರ್ಧ ಕಿ.ಮೀ ನಡೆದು ವಾಪಸ್ಸಾಗಿದ್ದಾರೆ. ಇದ್ಯಾವುದೂ ಪರಿಣಾಮವನ್ನು ಬೀರುವುದಿಲ್ಲ. ಪ್ರಿಯಾಂಕಾ ಗಾಂಧಿ ಅಭಿಯಾನದಲ್ಲಿ ಪಾಲ್ಗೊಳ್ಳುವುದಕ್ಕೂ ನಮಗೂ ಸಂಬಂಧ ಇಲ್ಲ, ಇದರಿಂದ ಯಾವ ಪರಿಣಾಮವೂ ಆಗುವುದಿಲ್ಲ ಎಂದರು. 

ಆರು ರ್ಯಾಲಿಗಳು:
ಭಾರತ್ ಜೋಡೋ ಅಭಿಯಾನಕ್ಕೂ  ಮುನ್ನವೇ ತೀರ್ಮಾನಿಸಿದಂತೆ ಬಿಜೆಪಿ ಆರು ರ್ಯಾಲಿಗಳನ್ನು ಕೈಗೊಳ್ಳಲಿದೆ. ಮಧ್ಯೆ ಅಧಿವೇಶನ ಹಾಗೂ ದಸರಾ ಇದ್ದುದರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಜಂಟಿ ಪ್ರವಾಸವನ್ನು ಪ್ರಾರಂಭ ಮಾಡಲಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ- KSRTC ಬಸ್‌ ಟಿಕೆಟ್‌ನಲ್ಲಿ ನಾಡದ್ರೋಹಿ ʼಮಹಾರಾಷ್ಟ್ರ ಸರ್ಕಾರದ ಲಾಂಚನʼ..!

ಪೊಲೀಸ್ ಹಲ್ಲೆ ಕುರಿತು ಪರಿಶೀಲನೆ:
ಮಂಡ್ಯದಲ್ಲಿ ಪೊಲೀಸ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿ ಯಾರ ತಪ್ಪಿದೆ ಎಂದು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News