ಸಚಿವ ಎಸ್.ಟಿ.‌‌ ಸೋಮಶೇಖರ್ ಕಾರ್ಯವೈಖರಿ ಬಗ್ಗೆ ಸಿಎಂ ಯಡಿಯೂರಪ್ಪ ಮೆಚ್ಚುಗೆ

ನನ್ನ ಕಾರ್ಯವೈಖರಿ ಬಗ್ಗೆ ಸಹ ಮಾನ್ಯ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದೆಯೂ ಇದೇ ಮಾದರಿಯಲ್ಲಿ ಕಾರ್ಯನಿರ್ವಹಣೆ ಮಾಡಿ ಎಂದು ಮುಖ್ಯಮಂತ್ರಿಗಳು ಸಲಹೆ ಹಾಗೂ ಮಾರ್ಗದರ್ಶನ ಮಾಡಿದ್ದಾರೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

Last Updated : Jul 26, 2020, 12:40 PM IST
ಸಚಿವ ಎಸ್.ಟಿ.‌‌ ಸೋಮಶೇಖರ್ ಕಾರ್ಯವೈಖರಿ ಬಗ್ಗೆ ಸಿಎಂ ಯಡಿಯೂರಪ್ಪ ಮೆಚ್ಚುಗೆ title=

ಬೆಂಗಳೂರು: ಸಹಕಾರ ಇಲಾಖೆ ವ್ಯಾಪ್ತಿಯಲ್ಲಿ 3 ತಿಂಗಳ ಅವಧಿಗೆ ಏನೇನು ಸಾಧನೆ ಮಾಡಲಾಗಿದೆ ಎಂಬುದರ ಕಿರುಹೊತ್ತಿಗೆಯನ್ನು ಹೊರತಂದಿದ್ದು, ಅದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa)  ಬಿಡುಗಡೆಗೊಳಿಸಿದ್ದಾರೆ. ಅಲ್ಲದೆ ಸಚಿವನಾಗಿ ನಾನು ನಿರ್ವಹಿಸಿದ ಜವಾಬ್ದಾರಿ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಸುದ್ದಿಗಾರರಿಗೆ ತಿಳಿಸಿದರು.  

ನನ್ನ ಕಾರ್ಯವೈಖರಿ ಬಗ್ಗೆ ಸಹ ಮಾನ್ಯ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದೆಯೂ ಇದೇ ಮಾದರಿಯಲ್ಲಿ ಕಾರ್ಯನಿರ್ವಹಣೆ ಮಾಡಿ ಎಂದು ಮುಖ್ಯಮಂತ್ರಿಗಳು ಸಲಹೆ ಹಾಗೂ ಮಾರ್ಗದರ್ಶನ ಮಾಡಿದ್ದಾರೆ ಎಂದು ಸಚಿವರಾದ ಎಸ್.ಟಿ. ಸೋಮಶೇಖರ್ (ST Somashekhar)  ತಿಳಿಸಿದರು.
 
ನಾನು ಈಗಾಗಲೇ 25 ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಅರಿತಿದ್ದೇನೆ. ಪ್ರತಿ ಭೇಟಿ ವೇಳೆಯೂ ರೈತರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಪ್ರಸಕ್ತ ಬಾರಿ ರೈತರಿಗೆ ಮಧ್ಯಮಾವಧಿ, ಅಲ್ಪಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲವಾಗಿ 14500 ಕೋಟಿ ರೂಪಾಯಿ ಸಾಲ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಚಾಲನೆ ನೀಡಲಾಗಿದ್ದು, ಈಗಾಗಲೇ 8,50,000  ರೈತರಿಗೆ (Farmers)  ರೂ.5,600 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು. 

ಕೋವಿಡ್ 19 (Covid-19)  ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಎಪಿಎಂಸಿ ಹಾಗೂ ಸಹಕಾರ ಇಲಾಖೆ ವತಿಯಿಂದ 53 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿ ವಿತರಣೆ ಮಾಡಿದ್ದೇವೆ. ಎಪಿಎಂಸಿ ಕಾಯ್ದೆ ತಿದ್ದಪಡಿಯಾದ ನಂತರ ಶೇಕಡಾ 1ಕ್ಕೆ ಸೆಸ್ ಇಳಿಸಲಾಗಿತ್ತು. ಬಳಿಕ ಇನ್ನೂ ಇಳಿಕೆ ಮಾಡುವ ಸಂಬಂಧ ಕೂಗು ಕೇಳಿಬಂದಿದ್ದರಿಂದ ಸಂಪುಟ ಸಭೆಯಲ್ಲಿ ಚರ್ಚಿಸಿ ಶೇ. 35ಕ್ಕೆ ಸೆಸ್ ಇಳಿಕೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯಂತೆ 12.75 ಕೋಟಿ ರೂಪಾಯಿಯನ್ನು ಇಲಾಖೆ ವತಿಯಿಂದ ನೀಡಲಾಗುತ್ತಿದ್ದು, ಈಗಾಗಲೇ 32 ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ನೀಡಲಾಗಿದೆ. ಉಳಿದ 10 ಸಾವಿರ ಆಶಾ ಕಾರ್ಯಕರ್ತೆಯರಿಗೆ ಶೀಘ್ರದಲ್ಲಿಯೇ ನೀಡಲಾಗುವುದು ಎಂದು ಸಚಿವರು ತಿಳಿಸಿದರು. 
ಮುಖ್ಯಮಂತ್ರಿಗಳು ಸವಾಲಿನ ಜೊತೆಯಲ್ಲೇ ಬಂದವರಾಗಿದ್ದಾರೆ. ಪ್ರವಾಹದಂತಹ ಸಂದರ್ಭದಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾವೆಲ್ಲರೂ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಸೋಮಶೇಖರ್ ಕಾರ್ಯವೈಖರಿಗೆ ಅಶೋಕ್ ಕೂಡ ಶ್ಲಾಘನೆ
ಸಹಕಾರ ಸಚಿವರಾದ ಸೋಮಶೇಖರ್ ಅವರು ಚಟುವಟಿಕೆಯಿಂದ ಅನುಭವಿ ಮಂತ್ರಿಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಚಟುವಟಿಕೆ ಬಗ್ಗೆ ನನಗೆ ಖುಷಿ ಹಾಗೂ ಹೆಮ್ಮೆ ಇದೆ ಎಂದು ಕಂದಾಯ ಸಚಿವರಾದ ಆರ್. ಅಶೋಕ್ ತಿಳಿಸಿದರು.

Trending News