ಮಾಧ್ಯಮ ಸ್ವಾತಂತ್ರ್ಯಕ್ಕೆ ಸದಾ ಬದ್ಧ ಎಂದು ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಎಸ್‌ವೈ

ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.

Last Updated : Oct 10, 2019, 11:54 AM IST
ಮಾಧ್ಯಮ ಸ್ವಾತಂತ್ರ್ಯಕ್ಕೆ ಸದಾ ಬದ್ಧ ಎಂದು ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಎಸ್‌ವೈ title=

ಬೆಂಗಳೂರು: ಇಂದು ಆರಂಭವಾಗಿರುವ ವಿಧಾನಮಂಡಲ ಅಧಿವೇಶನಕ್ಕೆ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.

"ಮಾಧ್ಯಮ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧವಾಗಿದೆ. ವಿಧಾನಸಭೆಯ ಕಲಾಪದ ನೇರ ಪ್ರಸಾರಕ್ಕೆ ತಡೆ ಹಾಕಿರುವ ಸ್ಪೀಕರ್ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿ ಮಾಡುತ್ತೇನೆ" ಎಂದು ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ನಲ್ಲಿ ತಿಳಿಸಲಾಗಿತ್ತು. ಆದರೆ ಕೆಲವೇ ಕ್ಷಣಗಳಲ್ಲಿ ಆ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ. 

ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ಇಂದಿನಿಂದ ಮೂರು ದಿನಗಳ ನಡೆಯಲಿದ್ದು, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದರು. ಈ ನಿರ್ಧಾರಕ್ಕೆ ವಿಪಕ್ಷಗಳು ಮತ್ತು ಮಾಧ್ಯಮಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ಪೀಕರ್ ಆದೇಶದಂತೆ, ಕೇವಲ ದೂರದರ್ಶನದ ಕ್ಯಾಮೆರಾಮೆನ್ ಗಳಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

Trending News