ಸಿದ್ದರಾಮಯ್ಯ ಸರ್ಕಾರದ ಕೃಷಿ ಯೋಜನೆ ಬಗ್ಗೆ ತನಿಖೆಗೆ ಸಿಎಂ ಆದೇಶ

ಕೃಷಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. 

Last Updated : Sep 10, 2019, 09:02 AM IST
ಸಿದ್ದರಾಮಯ್ಯ ಸರ್ಕಾರದ ಕೃಷಿ ಯೋಜನೆ ಬಗ್ಗೆ ತನಿಖೆಗೆ ಸಿಎಂ ಆದೇಶ title=

ಬೆಂಗಳೂರು: ಈ ಹಿಂದೆ ಇದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಯೋಜನೆ ಬಗ್ಗೆ ತನಿಖೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಕೃಷಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ಈ ಬಗ್ಗೆ ಎರಡು ತಿಂಗಳುಗಳಲ್ಲಿ ವರದಿ ನೀಡುವಂತೆ  ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.

ಕೃಷಿ ಭಾಗ್ಯ ಯೋಜನೆಗೆ ಸರ್ಕಾರ 921.2 ಕೋಟಿ ರೂ. ಖರ್ಚು ಮಾಡಿದ್ದು, 2017-18ರ ಅವಧಿಯಲ್ಲಿ ಕೃಷಿ ಯೋಜನೆ ಅಡಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ.

Trending News