ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಸಿಎಂ ಕುಮಾರಸ್ವಾಮಿ

ದೆಹಲಿಯ ನಂ. 7, ಲೋಕಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಿ ನಿವಾಸದಲ್ಲಿ ಸೋಮವಾರ ಬೆಳಿಗ್ಗೆ 11:30ಕ್ಕೆ ಪ್ರಧಾನಿ ಭೇಟಿಗೆ ಸಮಯ ನಿಗದಿಯಾಗಿದೆ.

Last Updated : May 27, 2018, 01:06 PM IST
ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಸಿಎಂ ಕುಮಾರಸ್ವಾಮಿ title=
ಸಂಗ್ರಹ ಚಿತ್ರ

ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೋಮವಾರ ಬೆಳಿಗ್ಗೆ 11:30ಕ್ಕೆ ದೆಹಲಿಯ ನಂ. 7, ಲೋಕಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಿ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ಇದೊಂದು ಸೌಜನ್ಯದ ಭೇಟಿಯಾಗಿದೆ. ರಾಜ್ಯ ಸರ್ಕಾರದ ಕೆಲವು ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ಬೇಕಿದ್ದು, ಕೇಂದ್ರ ಸರ್ಕಾರ ಸಹಕಾರಕ್ಕೆ ಮನವಿ ಮಾಡುತ್ತೇನೆ. ರಾಜ್ಯ ಸರ್ಕಾರದ ಯಶಸ್ಸಿಗೆ ಕೇಂದ್ರದ ನೆರವು ಅಗತ್ಯವಾಗಿದೆ. ಹಾಗಾಗಿ ಸರ್ಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೋರುತ್ತೇನೆ. ಪ್ರಧಾನಿ ಭೇಟಿ ಬಳಿಕ ಕೇಂದ್ರ ಗೃಹ ಮತ್ತು ಇಂಧನ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ಕಲ್ಲಿದ್ದಲಿನ ಪೂರೈಕೆ ಕುರಿತು ಚರ್ಚೆ ನಡೆಸುವುದಾಗಿ ತಿಳಿಸಿದರು.

Trending News