ಬೆಂಗಳೂರು: ಗ್ರಾಮೀಣ ಬ್ಯಾಂಕ್ಗಳ ನೇಮಕಾತಿಯಲ್ಲಿ ಸ್ಥಳೀಯ ಭಾಷಿಕರಿಗೆ ಆದ್ಯತೆ ನೀಡಲು ನಿಯಮಾವಳಿಗಳ ಅಗತ್ಯ ಬದಲಾವಣೆ ಕೋರಿ ವಿತ್ತ ಸಚಿವ ಅರುಣ್ ಜೇಟ್ಲಿಯವರಿಗೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ.
My letter to Fin Min Shri @arunjaitley requesting revision of Institute for Banking &Personnel Selection IBPS rules for Regional Rural Banks pic.twitter.com/jRiT6LiTJL
— CM of Karnataka (@CMofKarnataka) September 11, 2017
ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ನಡೆಯುವ ಪ್ರಸಕ್ತ ಮಾದರಿಯ ಪರೀಕ್ಷೆಗಳು ಸಂವಿಧಾನದ ಆಶಯಗಳ ವಿರುದ್ಧವಾಗಿದ್ದು ಬಹುತ್ವ ಹಾಗೂ ಒಕ್ಕೂಟದ ಆಶಯದ ಉಲ್ಲಂಘನೆಯಾಗಿದೆ. ಸಂವಿಧಾನದ 8ನೇ ಪರಿಚ್ಛೇದದ ಅಡಿಯಲ್ಲಿ ಬರುವ ಎಲ್ಲಾ 22 ಭಾಷೆಗಳಿಗೂ ಸಮಾನ ಸ್ಥಾನಮಾನವಿದೆ. ಈ ಎಲ್ಲಾ ಭಾಷೆಗಳಲ್ಲಿಯೂ ಪರೀಕ್ಷೆ ನಡೆಯಲಿ ಎಂದು ಸಿಎಂ ಆಶಯ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಂದು ರಾಜ್ಯವು ತನ್ನ ನಾಗರಿಕರಿಗೆ ನ್ಯಾಯವನ್ನು ಒದಗಿಸುವ ಹೊಣೆಗಾರಿಕೆಯನ್ನು ಹೊಂದಿದೆ. ದೇಶದ ಬಹುತ್ವದಲ್ಲಿಯೇ ಅದರ ಅಖಂಡತೆಯಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಗ್ರಾಮೀಣ ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸಲು ಸ್ಥಳೀಯ ಭಾಷಾ ಜ್ಞಾನ ಅಗತ್ಯವಾಗಿದ್ದು ಸರ್ಕಾರದ ಯೋಜನೆಗಳ ಸಮರ್ಥ ಅನುಷ್ಠಾನಕ್ಕೆ ಗ್ರಾಮೀಣ ಬ್ಯಾಂಕ್ಗಳಲ್ಲಿ ಸ್ಥಳೀಯರ ಅಗತ್ಯತೆ ಕುರಿತು ಕೇಂದ್ರ ಹಣಕಾಸು ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದಲ್ಲಿ ವಿವರಿಸಿದ್ದಾರೆ.