CM Siddaramaiah: ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ (Union Minister Amit Shah) ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Sidaramaiah), ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಆದರೆ ಮಾಜಿಮುಖ್ಯಮಂತ್ರಿ ಈ ಬಗ್ಗೆ ಚಕಾರವೆತ್ತದೇ, ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹೈಲೆವಲ್ ಕಮಿಟಿ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಬರಪರಿಹಾರಕ್ಕೆ ಸಮ್ಮತಿ ಸೂಚಿಸಿಲ್ಲ. ಮೇಕೆದಾಟು ಯೋಜನೆ (Mekedatu Yojana), ಮಹದಾಯಿ ಯೋಜನೆಗೂ (Mahadai Yojana) ಇದುವರೆಗೆ ಅನುಮತಿ ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ- ಮಾಜಿ ಸಿಎಂ ಎಸ್.ಎಂ. ಕೃಷ್ಣರ ಆಶೀರ್ವಾದ ಪಡೆದ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು)
ಅಮಿತ್ ಶಾ ವಿರುದ್ಧ ನೀಡಿದ ಹೇಳಿಕೆಗಾಗಿ ಚುನಾವಣಾ ಆಯೋಗದಿಂದ (Election Commission) ನೋಟೀಸ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣಾ ಆಯೋಗ ನೀಡಿರುವ ನೋಟೀಸ್ ಗೆ ಉತ್ತರ ನೀಡಲಾಗಿದೆ. ಸಿಬಿಐ ನವರು ನೀಡಿರುವ ವರದಿಯ ಮೇಲೆ ಅವರು ಹೇಳಿಕೆಯನ್ನು ನೀಡಿದ್ದು, ಈ ಬಗ್ಗೆ ಸ್ಪಷ್ಟೀಕರಣವನ್ನು ಈಗಾಗಲೇ ನೀಡಿದ್ದೇನೆ ಎಂದರು.
ಕಾಂಗ್ರೆಸ್ ಸರ್ಕಾರದ ಸಾಧನೆಗಳ ಮೇಲೆ ಚುನಾವಣೆ!
ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ನಿನ್ನೆಯ ಪ್ರಚಾರ ಭಾಷಣದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಜನಪರ ಯೋಜನೆಗಳು ,ಅಭಿವೃದ್ಧಿ ಕಾರ್ಯಗಳು ಮುಂದುವರೆಯಬೇಕಾದರೆ ನಮ್ಮ ಸರ್ಕಾರವೇ ಅಸ್ತಿತ್ವದಲ್ಲಿರಬೇಕು. ಬಿಜೆಪಿಯವರು ಅಧಿಕಾರಕ್ಕೆ ಬಂದಲ್ಲಿ, ಜನಪರ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಜನರಿಗೆ ಮನವರಿಕೆ ಮಾಡಿಸಿದ್ದೇನೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ (Congress Govt.) ಮಾಡಿರುವ ಸಾಧನೆಗಳ ಆಧಾರದ ಮೇಲೆ ಮತ ಕೇಳುತ್ತಿದ್ದು, ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲಿದ್ದಾರೆ ಎಂಬ ಭರವಸೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ:
ರಾಜ್ಯದಲ್ಲಿ ಬರದಿಂದ ನೀರಿನ ಸಮಸ್ಯೆ (Water Issue) ಹೆಚ್ಚಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮಾಧ್ಯಮಗಳು ಊಹಾಪೋಹಗಳ ಮೇಲೆ ವರದಿ ಮಾಡಬಾರದು. ರಾಜ್ಯದ ಯಾವುದೇ ಭಾಗದಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ (Drinking Water Problem) ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.
ಇದನ್ನೂ ಓದಿ- ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಅಕ್ರಮ ಗಣಿಗಾರಿಕೆ: ಸಚಿವರ ವಿರುದ್ಧ ವರದಿ ಬಂದಿಲ್ಲ
ಶಾಸಕ ಜನಾರ್ಧನ ರೆಡ್ಡಿ(MLA Janardhan Reddy) ಯವರು ಸಚಿವರಾದ ಸಂತೋಷ್ ಲಾಡ್ (Santhosh Lad) ಹಾಗೂ ನಾಗೇಂದ್ರ (Nagendra) ಅವರ ಮೇಲೆ ಅಕ್ರಮ ಗಣಿಗಾರಿಕೆ ಆರೋಪದ ಕುರಿತು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅಕ್ರಮ ಗಣಿಗಾರಿಕೆ ನಡೆಸಿರುವ ಬಗ್ಗೆ ಸಾಕ್ಷ್ಯಧಾರಗಳಿದ್ದರೆ ನ್ಯಾಯಾಯಲದ ಮೊರೆ ಹೋಗಬೇಕು. ಜನಾರ್ಧನ ರೆಡ್ಡಿಯವರು ಅಕ್ರಮಗಣಿಗಾರಿಕೆಯಲ್ಲಿ ತೊಡಗಿದ್ದರು ಎಂದು ವರದಿಯಲ್ಲಿ ಬಂದ ಕಾರಣದಿಂದಾಗಿ, ನಾನು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹೋರಾಟ ಮಾಡಿ, ಪಾದಯಾತ್ರೆ ಕೈಗೊಂಡಿದ್ದೆ. ಈ ರೀತಿಯ ಯಾವ ವರದಿಗಳು ಈ ಸಚಿವರ ಮೇಲೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಾಸನದಲ್ಲಿ ಕಾಂಗ್ರೆಸ್ ಪರ ಜನರ ಒಲವು!
ಮಂಡ್ಯದಲ್ಲಿ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಯವರು ಚುನಾವಣೆ ಎದುರಿಸುತ್ತಿರುವುದು ದೈವೇಚ್ಛೆ ಎಂದ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮಗನನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಲ್ಲಿಸಿ ಸೋಲನ್ನು ಅನುಭವಿಸಿದರು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಹಾಸನದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಪರ ಪ್ರಚಾರ ಮಾಡಿದ್ದರಿಂದ ಅವರು ಹಾಸನದಲ್ಲಿ ಗೆಲುವನ್ನು ಸಾಧಿಸಿದರು. ಈ ಬಾರಿ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕೆಂದು ಕಾರ್ಯಪ್ರವೃತ್ತರಾಗಿದ್ದು, ಹಾಸನದ ಜನತೆ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎಂದರು.
ಯಾವುದೇ ಆತಂಕ ಇಲ್ಲ:
ವರುಣಾ ಜನರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಯಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಾರಿಯ ನನ್ನ ಸರ್ಕಾರದ ಅವಧಿಯೇ ನಾಲ್ಕು ವರ್ಷವಿದೆ. ನನ್ನ 82 ನೇಯ ವಯಸ್ಸಿಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷವಾಗುತ್ತದೆ. ಚುನಾವಣೆಯ ಬಗ್ಗೆ ಯಾವುದೇ ರೀತಿಯ ಆತಂಕವಿಲ್ಲ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.