ಬಿಜೆಪಿ ಶ್ರೀಮಂತರ ಪರ : ಕೇಸರಿಶಾಲು ಹಾಕಿದರೆ ದೇಶಭಕ್ತಿ ಎನ್ನುವುದು ತಪ್ಪು ಕಲ್ಪನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಪ್ರಧಾನಿಯವರು ಐದು ಗ್ಯಾರಂಟಿಗಳನ್ನು ಕರ್ನಾಟಕದಲ್ಲಿ ಜಾರಿ ಮಾಡುವುದಕ್ಕೆ ಸಾಧ್ಯವಿಲ್ಲ.ಗ್ಯಾರಂಟಿ ಯೋಜನೆಗಳಿಂದ ಅಭಿವೃಧ್ಧಿ ಕೆಲಸ ಕುಂಟಿತವಾಗುತ್ತವೆ ಎಂದು ಮೂದಲಿಸಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Written by - Ranjitha R K | Last Updated : Feb 29, 2024, 06:00 PM IST
  • ನಮ್ಮ ಹೋರಾಟ ಬಿಜೆಪಿ ವಿರುದ್ಧ - ಸಿದ್ದರಾಮಯ್ಯ
  • ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ
  • ಬಾಗಿಲಿನಿಂದ ಬಂದು ಅಧಿಕಾರ ಮಾಡುವ ಬಿಜೆಪಿ
ಬಿಜೆಪಿ ಶ್ರೀಮಂತರ ಪರ : ಕೇಸರಿಶಾಲು ಹಾಕಿದರೆ ದೇಶಭಕ್ತಿ ಎನ್ನುವುದು ತಪ್ಪು ಕಲ್ಪನೆ- ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು : ಬಿಜೆಪಿಯವರು ಶ್ರೀಮಂತರ ಪರವಾಗಿರುವ ಪಕ್ಷ. ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡರೆ ದೇಶ ಭಕ್ತಿ ಬರುತ್ತದೆ ಎಂದುಕೊಂಡಿರುವುದು ಅವರ ತಪ್ಪು ಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರಿಗೆ ನಮ್ಮ ದೇಶದ ಬಗ್ಗೆ ಮಾತಾನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ನಮ್ಮ ಸರ್ಕಾರ  ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ರಾಜ್ಯದ ಜನರಿಗೆ ಶಕ್ತಿ ತುಂಬುವ ಸಲುವಾಗಿ ಜನಪರ, ಬಡವರ ಪರ ಬಜೆಟ್ ಮಂಡಿಸಿದೆ. ದೇಶದ ಪ್ರಧಾನಿಯವರು ಐದು ಗ್ಯಾರಂಟಿಗಳನ್ನು ಕರ್ನಾಟಕದಲ್ಲಿ ಜಾರಿ ಮಾಡುವುದಕ್ಕೆ ಸಾಧ್ಯವಿಲ್ಲ. ಗ್ಯಾರಂಟಿ ಯೋಜನೆಗಳಿಂದ ಅಭಿವೃಧ್ಧಿ ಕೆಲಸ ಕುಂಟಿತವಾಗುತ್ತವೆ ಎಂದು ಮೂದಲಿಸಿದ್ದರು ಎಂದು ತಿಳಿಸಿದರು.

ಇದನ್ನೂ ಓದಿ : ಕೊನೆಗೂ ನಿಗಮ, ಮಂಡಳಿ ಪಟ್ಟಿ ಫೈನಲ್:‌ ಸಿಎಂ ಸಿದ್ದರಾಮಯ್ಯ ಅಭಿನಂದನೆ

ನಮ್ಮ ಹೋರಾಟ ಬಿಜೆಪಿ ವಿರುದ್ಧ : 
ಭಾರತಕ್ಕೆ ಸ್ವಾತಂತ್ರ್ಯ ತಂದಿರುವುದು ಕಾಂಗ್ರೆಸ್ ಪಕ್ಷದವರು. 1942ನೇ ಸಾಲಿನಲ್ಲಿ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಹೇಳುವಾಗ ಬಿಜೆಪಿಯವರು ಎಲ್ಲಿದ್ದರು. ಬಿಜೆಪಿಯವರು ಬ್ರಿಟಿಷ್ವರ ಜೊತೆಗೆ ಶಾಮೀಲಾಗಿದ್ದರು.ಇವರಿಗೆ ದೇಶದ ಬಗ್ಗೆ ಮಾತಾನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಕಾಳಜಿಲ್ಲ. ನಮ್ಮ ಹೋರಾಟವೇ ಬಿಜೆಪಿ ವಿರುದ್ಧ. ಕಾಂಗ್ರೆಸ್ ಪಕ್ಷ ಸಂವಿಧಾನ ತಂದುಕೊಟ್ಟ ಮೇಲೆ ಬಿಜೆಪಿಯವರು ಇಲ್ಲಿಗೆ ಬಂದಿದ್ದಾರೆ. ಬಿಜೆಪಿಯವರು ಬಡವರ, ದಿನದಲಿತರ, ಅಲ್ಪಸಂಖ್ಯಾಂತರ ಜನರ ದ್ವೇಷಿಗಳು ಎಂದು ಆರೋಪಿಸಿದ್ದಾರೆ. 

ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ:
ಧರ್ಮ ಮತ್ತು ಜಾತಿ ಹೆಸರನಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು. ಜೆಪಿಯವರ ನಾಟಕವನ್ನು ರಾಜ್ಯದ ಜನರು ನೋಡುತ್ತಿದ್ದಾರೆ.ಅಧಿಕಾರದಲ್ಲಿ ಇದ್ದಾಗ ಬಿಜೆಪಿಯವರಿಗೆ ಜನರ ಆರ್ಶೀವಾದ ಮಾಡಿಲ್ಲ. ಬಾಗಿಲಿನಿಂದ ಬಂದು ಅಧಿಕಾರ ಮಾಡುವುದಕ್ಕೆ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ಓದಿ :ಜೂನ್ ತಿಂಗಳ ಅವಧಿಯಲ್ಲಿ ಒಟ್ಟು 15 ಮಂದಿ ವಿಧಾನಪರಿಷತ್ ಸದಸ್ಯರ ಅವಧಿ ಮುಕ್ತಾಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News