ಬೆಂಗಳೂರು: ಬಿಬಿಎಂಪಿ ಕಚೇರಿ ಆವರಣದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಸಿ.ಎಂ.ಶಿವಕುಮಾರ್ ಮೃತಪಟ್ಟಿದ್ದಾರೆ. ಶಿವಕುಮಾರ್ ಅವರು ಪತ್ನಿ ಉಮಾ ಮಹೇಶ್ವರಿ ಮತ್ತು ಪುತ್ರಿಯರಾದ ವಿಭಾ ನಿಧಿ (12) ಹಾಗೂ ನಿರ್ವಿ ನೇಹಾ (10) ಅವರನ್ನು ಅಗಲಿದ್ದಾರೆ.
ಬೆಂಗಳೂರಿನ ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶಿವಕುಮಾರ್ ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಗಣ್ಯರ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಜಾರಿಗೆ S.T.ಸೋಮಶೇಖರ್ ಸಕಲ ಸಿದ್ಧತೆ
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಕಚೇರಿ, ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ.ಶಿವಕುಮಾರ್ ಅವರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು.
ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬದವರಿಗೆ… pic.twitter.com/BU3YgRYDxD— CM of Karnataka (@CMofKarnataka) August 30, 2023
ಬಿಡಿಎ ಅಧ್ಯಕ್ಷರಾಗಿರುವ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಮತ್ತು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಕೂಡ ಶಿವಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಕೇಶ್ ಸಿಂಗ್, ‘ಪಾಲಿಕೆಯ ಹಲವು ವಿಭಾಗಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಶಿವಕುಮಾರ್ ಅವರು ಕಿರಿಯ ವಯಸ್ಸಿನಲ್ಲೇ ವಿಧಿವಶರಾಗಿರುವುದು ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ಕುಟುಂಬ ಸದಸ್ಯರು ಹಾಗೂ ಬಂಧು-ಮಿತ್ರರಿಗೆ ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಅವರ ಅಗಲಿದ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರು ಮತ್ತು ಬಂಧು ಮಿತ್ರರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. 2/2
— Rakesh Singh IAS (@BBMPAdmn) August 30, 2023
ಇದನ್ನೂ ಓದಿ: ಅಕ್ಕಿ ಬದಲಿಗೆ ಹಣ ನೀಡಿ ಬಡವರ ಬದುಕ ಇನ್ನಷ್ಟು ದುರ್ಬರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.