ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ; ದಾಖಲೆ ಇಟ್ಟ ಹೆಚ್.ಡಿ.ಕುಮಾರಸ್ವಾಮಿ

CM Siddaramaiah vs Union Minister HD Kumaraswamy: ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯನ್ನು ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿದ್ದಾರೆ.

Written by - Yashaswini V | Last Updated : Aug 23, 2024, 11:27 AM IST
  • ಪರಿಹಾರ ಇಲ್ಲವೇ 40:60ರ ಅನುಪಾತದಲ್ಲಿ ನಿವೇಶನ ನಿರಾಕರಿಸಿದ ಸಿಎಂ ಪತ್ನಿ
  • "50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ 'ಒತ್ತಾಯ' ಮಾಡಿದ್ದಾರೆ!!"
  • ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಪ್ರಶ್ನೆ
ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ; ದಾಖಲೆ ಇಟ್ಟ ಹೆಚ್.ಡಿ.ಕುಮಾರಸ್ವಾಮಿ title=

Siddaramaiah Vs HD Kumaraswamy: ಮೂಡಾ ಹಗರಣದಲ್ಲಿ (MUDA Scam) ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (Union Minister HD Kumaraswamy), ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮೂಡಾ ಪ್ರಸ್ತಾವನೆಯನ್ನು ನಿರಾಕರಿಸಿ ಬದಲಿ ಜಮೀನನ್ನೇ ನೀಡುವಂತೆ ಒತ್ತಾಯ ಮಾಡಿರುವ ದಾಖಲೆಯನ್ನು ಕೇಂದ್ರ ಸಚಿವರು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ- ಸಿಬಿಐ, ಲೋಕಾಯುಕ್ತದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ : ಡಿಸಿಎಂ ಡಿ.ಕೆ.ಶಿವಕುಮಾರ್

ಸಿಎಂ ಸಿದ್ದರಾಮಯ್ಯನವರೇ (CM Siddaramaiah).. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯನ್ನು ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿದ್ದಾರೆ.

"50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ 'ಒತ್ತಾಯ' ಮಾಡಿದ್ದಾರೆ!!" ಹಾಗೂ "ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು  ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ." ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ- K-SET: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 28 ರವರೆಗೆ ಅವಕಾಶ

ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ 'ಒತ್ತಾಯಿಸಿರುತ್ತಾರೆ!!!' ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಅಥವಾ ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಅವರು ಸಿಎಂಗೆ ತಿರುಗೇಟು ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News