ಬೆಂಗಳೂರು: ಜನವರಿ 26ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿಲ್ಲ. ಈ ವಿಚಾರವಾಗಿ ಬುಧವಾರ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ಕರ್ನಾಟಕದ ಮೇಲಿನ ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ಮುಂದುವರಿದಿದೆ. ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಟ್ಯಾಬ್ಲೋ ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರ ಕನ್ನಡಿಗರಿಗೆ ಮಹಾ ದ್ರೋಹ ಎಸಗಿದೆ. ಕೇಂದ್ರ ಸರ್ಕಾರದ ಈ ದ್ವೇಷದ ನೀತಿಯು ಒಕ್ಕೂಟ ವ್ಯವಸ್ಥೆಯ ಅಪಮೌಲ್ಯಕ್ಕೆ ಕಾರಣವಾಗಲಿದೆ. ಈ ಅನ್ಯಾಯವನ್ನು ಯಾವೊಬ್ಬ ಬಿಜೆಪಿಗರೂ ಪ್ರಶ್ನಿಸಿಲ್ಲ, ಬಿಜೆಪಿಯ 25 ಸಂಸದರೂ ತುಟಿ ಬಿಚ್ಚಿಲ್ಲ, ಕರ್ನಾಟಕದ ಸ್ವಾಭಿಮಾನದ ಪರ ನಿಲ್ಲಲು ಬಿಜೆಪಿಗೆ ಇಷ್ಟವಿಲ್ಲ’ವೆಂದು ಕಾಂಗ್ರೆಸ್ ಕಿಡಿಕಾರಿದೆ.
ಕರ್ನಾಟಕದ ಮೇಲಿನ ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ಮುಂದುವರಿದಿದೆ..
ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಟ್ಯಾಬ್ಲೋ ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರ ಕನ್ನಡಿಗರಿಗೆ ಮಹಾ ದ್ರೋಹ ಎಸಗಿದೆ.
ಕೇಂದ್ರ ಸರ್ಕಾರದ ಈ ದ್ವೇಷದ ನೀತಿಯು ಒಕ್ಕೂಟ ವ್ಯವಸ್ಥೆಯ ಅಪಮೌಲ್ಯಕ್ಕೆ ಕಾರಣವಾಗಲಿದೆ.
ಈ ಅನ್ಯಾಯವನ್ನು ಯಾವೊಬ್ಬ ಬಿಜೆಪಿಗರೂ ಪ್ರಶ್ನಿಸಿಲ್ಲ,…
— Karnataka Congress (@INCKarnataka) January 10, 2024
ಸಿಎಂ ಸಿದ್ದರಾಮಯ್ಯ ಆಕ್ರೋಶ!
ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ…
— Siddaramaiah (@siddaramaiah) January 9, 2024
‘ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ 7 ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು. ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ’ ಎಂದು ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಹೊಟ್ಟೆ ನೋವು ಅಂತ ಆಸ್ಪತ್ರೆಗೆ ಹೋದ 14ರ ಬಾಲಕಿಗೆ ಹೆರಿಗೆ : ಗಂಡು ಮಗು ಜನನ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರ ಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದು ಸಿಎಂ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ @BJP4India ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ…
— Siddaramaiah (@siddaramaiah) January 9, 2024
ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್‍ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ವಿಶೇಷ ಚೇತನ ಯುವಕನಿಗೆ ಸಹಾಯಹಸ್ತ ಚಾಚಿದ ಸಂತೋಷ್ ಲಾಡ್!
ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ ಏನಾಗಿತ್ತು?
ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ಧಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ರಾಜ್ಯ ಸರ್ಕಾರದ ಮನವಿಯನ್ನು ತಿರಸ್ಕರಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.