ಮೈಸೂರು : ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದೆ. 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು 2140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ ಎನ್ನುವ ಆರೋಪ ಅಂದಿನ ಬಿಜೆಪಿ ಸರ್ಕಾರದ ಮೇಲಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಏನು ಹೇಳುತ್ತಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ರಾಜಕೀಯ ನಿವೃತ್ತಿ :
ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ :ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮತದಾನ
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ :
ಇಂದು ಮತದಾನ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಜನಸ್ಪಂದನೆ ನೋಡಿದರೆ, ಕಾಂಗ್ರೆಸ್ ಗೆಲುವು ನೂರಕ್ಕೆ ನೂರು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರನ್ನು ಗುರಿಯಾಗಿಸಿ ಪ್ರಧಾನಿ ಟೀಕೆ :
ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಕರ್ನಾಟಕವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿರುವ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ದೊಡ್ಡ ರಾಜ್ಯವಾಗಿದ್ದು, ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದಿರುವುದರಿಂದ , ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಧಾನಿಯವರು ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ ಎಂದರು.
ಇದನ್ನೂ ಓದಿ : ವಯನಾಡುವಿನಲ್ಲಿ ವೋಟಿಂಗ್: ಪ್ರಿಯಾಂಕ ಭವಿಷ್ಯ ಬರೆಯಲಿರುವ ಮತದಾರರು
ಬಿಜೆಪಿಗೆ ಕೋಮುಗಳ ನಡುವೆ ಬೆಂಕಿ ಹಚ್ಚುವುದೇ ಕೆಲಸ :
ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಬಗ್ಗೆ ಹಾಗೂ ಈ ಬಗ್ಗೆ ಬಿಜೆಪಿ ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿರುವಂತೆ ಮುಸ್ಲಿಮರಿಗೂ ಮೀಸಲಾತಿ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ. ಆದರೆ ಈ ಬಗ್ಗೆ ಯಾವುದೇ ತೀರ್ಮಾನ ಸರ್ಕಾರ ತೆಗೆದುಕೊಂಡಿಲ್ಲ. ಬಿಜೆಪಿಯವರಿಗೆ ಕೋಮುವಾದವನ್ನು ಸೃಷ್ಟಿಸುವುದೇ ಕಾಯಕವಾಗಿದೆ. ಕೋಮುಗಳ ನಡುವೆ ಬೆಂಕಿ ಹಚ್ಚುವ ಕೆಲಸದಲ್ಲಿ ಅವರು ನಿರತರಾಗಿದ್ದಾರೆ. ಬಿಜೆಪಿಯವರೆಂದೂ ಸಮಾಜದಲ್ಲಿ ಶಾಂತಿ, ಸೋದರತ್ವ ನೆಲೆಸಬೇಕೆಂದು ಬಯಸಿದವರೇ ಅಲ್ಲ ಎಂದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link -
https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.