ರಾಜ್ಯ ಪೊಲೀಸ್ ಇಲಾಖೆಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ!

ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸಿಎಂ ತಿಳಿಸಿದ್ದಾರೆ.

Written by - Puttaraj K Alur | Last Updated : Jan 17, 2024, 05:02 PM IST
  • ಪೊಲೀಸರ ವೈದ್ಯಕೀಯ ವೆಚ್ಚ 1,000 ರೂ.ನಿಂದ 1,500 ರೂ.ಗೆ ಹೆಚ್ಚಿಸಲಾಗುವುದು
  • ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಗುವುದು
  • ರಾಜ್ಯವನ್ನು ಡ್ರಗ್ ಮುಕ್ತಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ
ರಾಜ್ಯ ಪೊಲೀಸ್ ಇಲಾಖೆಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ! title=
ಪೊಲೀಸ್ ಇಲಾಖೆಗೆ ಸಿಎಂ ಕೊಡುಗೆ!

ಬೆಂಗಳೂರು: ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯ ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯನವರು ಬಂಪರ್ ಕೊಡುಗೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯನವರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಮಾಣಪತ್ರ ಸಲ್ಲಿಸುವಾಗ ಕ್ರಿಮಿನಲ್‌ ಕೇಸ್‌ಗಳ ಮಾಹಿತಿ ನೀಡಬೇಕು: ಹೈಕೋರ್ಟ್

ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸಿಎಂ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಗೆ ಸಿಎಂ ಕೊಡುಗೆ!

  • ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ. ಇದಕ್ಕಾಗಿ ರಾಜ್ಯ ಬಜೆಟ್‍ನಲ್ಲಿ ಹಣ ನಿಗದಿ ಮಾಡಲಾಗುವುದು.
  • ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ
  • ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1,000 ರೂ.ನಿಂದ 1,500 ರೂ.ಗೆ ಹೆಚ್ಚಿಸಲಾಗುವುದು.
  • CEN ಠಾಣಾಧಿಕಾರಿಗಳ ಹುದ್ದೆಯನ್ನು ACP & DCP ಮಟ್ಟಕ್ಕೆ ಉನ್ನತೀಕರಣ.
  • ಬೆಂಗಳೂರು ನಗರದಲ್ಲಿ 8 ಅಡಿಷನಲ್‍ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲಾಗುವುದು.
  • ರಾಜ್ಯವನ್ನು ಡ್ರಗ್ ಮುಕ್ತಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ

ಇದನ್ನೂ ಓದಿ: ನಕಲಿ ಮೈಸೂರ್ ಸ್ಯಾಂಡಲ್ ಸೋಪ್ ತಯಾರಿಕರ ಜತೆ ಬಿಜೆಪಿ ನಂಟು: ಪ್ರಿಯಾಂಕ್ ಖರ್ಗೆ ಆರೋಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News