Guarantees Implement: ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ - ಸಿಎಂ ಸಿದ್ದರಾಮಯ್ಯ

 ಐದು ಗ್ಯಾರೆಂಟಿಗಳ ಬಗ್ಗೆ ಇಂದು ಸಿಎಂ, ಡಿಸಿಎಂ ಜಂಟಿ ಸುದ್ದಿಗೋಷ್ಠಿಯಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಚರ್ಚಿಸಲಾಯಿತು.  

Written by - Zee Kannada News Desk | Last Updated : Jun 2, 2023, 06:41 PM IST
Guarantees Implement: ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ - ಸಿಎಂ ಸಿದ್ದರಾಮಯ್ಯ title=

ಬೆಂಗಳೂರು: ಐದು ಗ್ಯಾರೆಂಟಿಗಳ ಬಗ್ಗೆ ಇಂದು ಸಿಎಂ, ಡಿಸಿಎಂ ಜಂಟಿ ಸುದ್ದಿಗೋಷ್ಠಿಯಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಚರ್ಚಿಸಲಾಯಿತು.  

ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು ಬಿಲ್​ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್​​ಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತವೇ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು. ಜೂನ್​ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆದಾರ್​ ಕಾರ್ಡ್​​, ಬ್ಯಾಂಕ್​ ಅಕೌಂಟ್​ ಪಾಸ್​ಬುಕ್​ ಜರಾಕ್ಸ್​ ನೀಡಬೇಕು. ಎಪಿಎಲ್​ ಮತ್ತು ಬಿಪಿಎಲ್​​ ಕಾರ್ಡ್​ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ಧಾರೆ.

ಇದನ್ನೂ ಓದಿ: Trending News: ಯುವ ರೈತನ ಮದುವೆ: ಎತ್ತಿನ ಬಂಡಿಯಲ್ಲಿ ನವ ವಧುವರನ ಮೆರವಣಿಗೆ!

ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಕೊಡ್ತೀವಿ. ಈ ಆರ್ಥಿಕ ವರ್ಷದಲ್ಲೇ ಕೊಡ್ತೀವಿ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ  ಮುಖ್ಯ ಮಂತ್ರಿಗಳು ವಿವರಣೆ ನೀಡಿದರು.

1. ಗೃಹಜ್ಯೋತಿ - 200 ಯುನಿಟ್ ವರೆಗೆ ಉಚಿತ ವಿದ್ಯುತ್.
ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇ.10 ರಷ್ಟರವರೆಗಿನ ವಿದ್ಯುತ್ ಉಚಿತ. ಜು.1 ರಿಂದ ಆಗಸ್ಟ್ ಗರೆಗಿನ ಖರ್ಚಿಗೆ ಇದು ಲೆಕ್ಕ. ಜುಲೈನಿಂದ ಮಾಡಿರುವ ಖರ್ಚಿನ ಬಿಲ್ ಆಗಸ್ಟ್ ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ಕಟ್ಟಲ್ಲ.

ಇದನ್ನೂ ಓದಿ: Guarantees Implement: ನುಡಿಯುವಂತೆ ನಡೆಯುವವರು ಐದು ಗ್ಯಾರೆಂಟಿ ಜಾರಿ - ಡಿಸಿಎಂ ಡಿ ಕೆ ಶಿವಕುಮಾರ್

2. ಗೃಹಲಕ್ಷ್ಮೀ - ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್ವೇರ್ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮೆ. ಜೂ.15 ರಿಂದ ಜು.15 ರೊಳಗೆ ಆನ್ ಲೈನ್ ಅಲ್ಲಿ ಅರ್ಜಿ ಹಾಕಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಹಾಕಬಹುದು. 18 ವರ್ಷ ತುಂಬಿದವರು. ಜು.15 ರಿಂದ ಆ.15 ರವರೆಗೆ ಪ್ರಕ್ರಿಯೆ ನಡೆಸಿ, ಆ.15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಇಲ್ಲ.

3. ಅನ್ನಭಾಗ್ಯ- ನಾವು 7 ಕೆ.ಜಿ. ಕೊಡುತ್ತಿದ್ದೆವು. ಈ 5 ಕೆ.ಜಿ.ಗೆ ಇಳಿಸಿದ್ದಾರೆ. 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ನಾವೀಗ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ದಾಸ್ತಾನು ಇಲ್ಲ. ಹೀಗಾಗಿ ಜು.1 ರಿಂದ ಬಿಪಿಎಲ್ + ಅಂತ್ಯೋದಯ ಅನ್ನ ಕಾರ್ಡುದಾರರಿಗೆ ತಲಾ 10 ಕೆ.ಜಿ. ಅಕ್ಕಿ. ನ್ಯಾಫೆಡ್, ಕೇಂದ್ರ, ಎನ್ ಸಿಸಿ ಎಫ್ ಎಲ್ಲಿಂದಲಾದರೂ ಸರಿ ತಂದು ಕೊಡುತ್ತೇವೆ.

4. ಶಕ್ತಿ - ಸಮಾಜದಲ್ಲಿ ಶೇ.50 ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂ.11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್,  (ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು) ಉಚಿತ ಪ್ರಯಾಣ. ಕೆಎಸ್ಆರ್ಟಿಸಿಯಲ್ಲಿ ಶೇ.50 ರಷ್ಟು ಆಸನ ಮೀಸಲು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಕುಳಿತು ಹೋಗಬಹುದು.

5. ಯುವನಿಧಿ - 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿಶಿಕ್ಷಣವೂ ಸೇರಿ ಎಲ್ಲ ಪದವೀಧರರು ನೋಂದಣಿ ಮಾಡಿಕೊಂಡ ದಿನದಿಂದ 24 ತಿಂಗಳ(2 ವರ್ಷ)ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ. ಅಷ್ಟರೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. ಯುವಕ, ಯುವತಿ + ತೃತೀಯಲಿಂಗಿಗಳಿಗೂ ಅನ್ವಯ. ಇದಕ್ಕೆ ಅರ್ಜಿ ಹಾಕಬೇಕು.

Trending News