ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಿಎಂ ಸಿದ್ದು ಸರ್ಕಾರದ ಕೊಡುಗೆಗಳಿವು

Karnataka Budget:  14ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿರುವ ಸಿದ್ದರಾಮಯ್ಯ, ತಮ್ಮ ಬಜೆಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಿರುವ ಕೊಡುಗೆಗಳ ಬಗ್ಗೆ ಇಲ್ಲಿದೆ ಮಾಹಿತಿ. 

Written by - Yashaswini V | Last Updated : Jul 7, 2023, 01:38 PM IST
  • ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕೆ ಸಿಎಂ 'ಸಿದ್ದ'ಹಸ್ತ

    ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ. ಆಯವ್ಯಯ ನಿಗದಿಪಡಿಸಲಾಗಿದೆ.
  • ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ
    51,229 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಿಎಂ ಸಿದ್ದು ಸರ್ಕಾರದ ಕೊಡುಗೆಗಳಿವು  title=

Karnataka Budget:  ರಾಜ್ಯದಲ್ಲಿ ನೂತನವಾಗಿ ಜಾರಿಗೆ ಬಂದಿರುವ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸುತ್ತಿದ್ದಾರೆ. 14ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿರುವ ಸಿದ್ದರಾಮಯ್ಯ, ತಮ್ಮ ಬಜೆಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಿರುವ ಕೊಡುಗೆಗಳೇನು? ಇಲ್ಲಿದೆ ಮಾಹಿತಿ... 

ಸಂವಿಧಾನದ ಮುಂದೆ ಎಲ್ಲರೂ ಸಮಾನರು!
ಸಂವಿಧಾನದ ಮುಂದೆ ಎಲ್ಲರೂ ಸಮಾನರು ಗಂಡು-ಹೆಣ್ಣು, ಮೇಲು-ಕೀಳು ಎಂಬ ತಾರತಮ್ಯ ಸಮಾಜದಲ್ಲಿ ಹಾಸುಹೊಕ್ಕಾಗಿ ಬೆಳೆದಿರುವುದು ಸುಳ್ಳಲ್ಲ. ಶಿಕ್ಷಣ, ಆರ್ಥಿಕ ಸ್ವಾವಲಂಬನೆ ಈ ತಾರತಮ್ಯ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಕುಟುಂಬದ ಯಜಮಾನಿಗೆ ಎರಡು ಸಾವಿರ ರೂ.ಗಳ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಿ ನಮ್ಮ ಸರ್ಕಾರ ಮಹಿಳೆಯರನ್ನು ನಿಜವಾದ ಅರ್ಥದಲ್ಲಿ 'ಗೃಹಲಕ್ಷ್ಮಿ'ಯಾಗಿಸಿದೆ ಎಂದರು. 

ಯಾರಿಗೆಲ್ಲಾ ಸಿಗುತ್ತೆ ಗೃಹಲಕ್ಷ್ಮಿ ಯೋಜನೆ ಕೊಡುಗೆ?
ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿಯರೂ ಸಹ ಈ ಯೋಜನೆಯ ವ್ಯಾಪ್ತಿಗೆ ಸೇರುತ್ತಾರೆ. 

ಗೃಹಲಕ್ಷ್ಮಿ ಯೋಜನೆ ಉದ್ದೇಶ?
ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಾಗುತ್ತದೆ.

​*  ಬಡತನದಲ್ಲಿ ಗಣನೀಯ ಇಳಿಕೆಯಾಗುತ್ತದೆ.

​* ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕುಟುಂಬಗಳಿಗೆ ತುಸು ನೆಮ್ಮದಿ ಸಿಗುವಂತಾಗುತ್ತದೆ. ಖರೀದಿಸುವ ಸಾಮರ್ಥ್ಯ ಹೆಚ್ಚಾಗುತ್ತದೆ.

​* ಇದರಿಂದ ಆರ್ಥಿಕ ಚಟುವಟಿಕೆ ಮತ್ತು ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ.

​* ಪಶುಪಾಲನೆ, ಗುಡಿ ಕೈಗಾರಿಕೆಯಂತಹ ಜೀವನೋಪಾಯ ಚಟುವಟಿಕೆಗಳಲ್ಲಿ ತೊಡಗಲು ಪ್ರೇರೇಪಿಸುತ್ತದೆ.

​* ಗರ್ಭಿಣಿಯರು, ತಾಯಂದಿರು, ಮಹಿಳಾ ಹಿರಿಯ ನಾಗರಿಕರು ಮತ್ತು ಅನಾರೋಗ್ಯ ಪೀಡಿತ ಮಹಿಳೆಯರು ಕೆಲಸ ಮಾಡುವ ಅನಿವಾರ್ಯತೆಯನ್ನು ನಿವಾರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಉಲ್ಲೇಖಿಸಿದರು. 

ಇದನ್ನೂ ಓದಿ- Karnataka Budget: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ-ತೋಟಗಾರಿಕೆಗೆ ನೀಡಿದ್ದೇನು?

ರಾಜ್ಯದ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಗೃಹಲಕ್ಷ್ಮಿ: 
ಒಟ್ಟಾರೆಯಾಗಿ ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದ ಮಹಿಳೆಯರಿಗೆ ಬದುಕಿನ ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭವಾಗಲಿದ್ದು, ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2,000 ರೂ.ಗಳನ್ನು ವರ್ಗಾಯಿಸಲಾಗುವುದು, ಈ ಯೋಜನೆಗಾಗಿ ವಾರ್ಷಿಕ ಸುಮಾರು 30,000 ಕೋಟಿ ರೂ. ವೆಚ್ಚವಾಗಲಿದ್ದು, ಇದು ದೇಶದಲ್ಲಿಯೇ ಅತೀ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಲಿದೆ ಎಂದವೃ ತಿಳಿಸಿದರು. 

4,000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ:
ವಿಶೇಷಚೇತನರಿಗೆ ಆರ್ಥಿಕವಾಗಿ ಹಾಗೂ ಸದೃಢತೆಯನ್ನು ಸಾಮಾಜಿಕವಾಗಿ ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು 4,000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಒದಗಿಸಲಾಗುವುದು. ಇದಲ್ಲದೆ, ನೋಂದಣಿಯಾಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಕ್ರಮ
ವಹಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. 

ಮಹಿಳಾ ಉದ್ಯಮಿಗಳಿಗೆ ಶೇ.4 ರ ಬಡ್ಡಿ ದರದಲ್ಲಿ ಸಾಲ: 
ಮಹಿಳಾ ಉದ್ಯಮಿಗಳು ಆತಿಥ್ಯ, ಆರೈಕೆ ಮತ್ತು ಪ್ರವಾಸೋದ್ಯಮದಂತಹ ಸೇವಾ ವಲಯದಲ್ಲಿ ಹೆಚ್ಚಿನ ಅವಕಾಶ ಪಡೆಯುತ್ತಿದ್ದಾರೆ. ಆದ್ದರಿಂದ, ಸೇವಾ ವಲಯದಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.4 ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿಯನ್ನು ಎರಡು ಕೋಟಿ ರೂ.ಗಳಿಂದ ಐದು ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಬಜೆಟ್ ಮಂಡನೆಯಲ್ಲಿ ಭರವಸೆ ನೀಡಿದ್ದಾರೆ. 

ಇದನ್ನೂ ಓದಿ- ಬಜೆಟ್ 2023-24: ಮದ್ಯ ಪ್ರಿಯರಿಗೆ ಬರೆ : ಶೇ 20 ಹೆಚ್ಚಳ

2023-24ನೇ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಏಳು ಜಿಲ್ಲೆಗಳಲ್ಲಿ NGOಗಳ ಸಹಯೋಗದೊಂದಿಗೆ ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

ರಾಜ್ಯದಲ್ಲಿನ ಆಸಿಡ್ ದಾಳಿ ಸಂತ್ರಸ್ತರನ್ನು ಸಮಾಜದ ಮು ವಾಹಿನಿಗೆ ತರುವ ಉದ್ದೇಶದಿಂದ ಇವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಐದು 21 ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಎರಡು ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News