ಉಚಿತ ಯೋಜನೆ ಎಂಬ ತಪ್ಪು ಕಲ್ಪನೆ ಬೇಡ; ನಾವು ವಚನ ಪಾಲಕರು ಎಂದ ಸಿಎಂ ಸಿದ್ದರಾಮಯ್ಯ

ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು, ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ. ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು. ಚುನಾವಣಾ ಪ್ರಣಾಳಿಕೆಯನ್ನು ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು, ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುದು ಆಶಯ ನಮ್ಮದುವೆಂದು ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Jan 13, 2024, 12:52 PM IST
  • ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ
  • ಕೊಟ್ಟ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ
  • ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದ ಸಿಎಂ ಸಿದ್ದರಾಮಯ್ಯ
ಉಚಿತ ಯೋಜನೆ ಎಂಬ ತಪ್ಪು ಕಲ್ಪನೆ ಬೇಡ; ನಾವು ವಚನ ಪಾಲಕರು ಎಂದ ಸಿಎಂ ಸಿದ್ದರಾಮಯ್ಯ title=
'ನಾವು ವಚನ ಪಾಲಕರು'

ಬೆಂಗಳೂರು: ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ "ಯುವನಿಧಿ" ಯೋಜನೆಗೆ ಚಾಲನೆ ನೀಡಿದರು. ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿದ್ದೇವೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದ್ದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿದ್ದು, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ ಅಂತಾ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಪ್ರಿಯಕರನೊಂದಿಗೆ‌ ಬೆಡ್‌ ರೂಮ್‌ನಲ್ಲಿದ್ದಾಗ ಬಂದ ಪತಿಯ ಕೊಂದ ಪತ್ನಿ.. ಹೃದಯಾಘಾತ ಎಂದು ಹೈಡ್ರಾಮಾ!

ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು. ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ  ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ. ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು, ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ. ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು. ಚುನಾವಣಾ ಪ್ರಣಾಳಿಕೆಯನ್ನು ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು, ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುದು ಆಶಯ ನಮ್ಮದು. ನಮ್ಮ ಸರ್ಕಾರದ ಸದಾಶಯಕ್ಕೆ ತಮ್ಮೆಲ್ಲರ ಬೆಂಬಲವಿರಲಿ. ಗ್ಯಾರಂಟಿಗಳ ಗೆಲುವು, ಕರ್ನಾಟಕದ ಗೆಲುವು, ನಿಮ್ಮೆಲ್ಲರ ಗೆಲುವು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್ ಕಂಟ್ರೋಲ್‌ಗೆ ಸಹಕಾರಿ ಈ ರಿಂಗ್‌ರೈಲ್ ಯೋಜನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News