ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಬೆಂಗಳೂರಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಗೆ ಸೇರಿದ ಜಾಗ ಪಡೆಯುವ ಕುರಿತು ಮಾತುಕತೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

Last Updated : Sep 16, 2017, 02:30 PM IST
ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ title=

ಬೆಂಗಳೂರು: ಒಂದು ದಿನದ ಭೇಟಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದರು. ಮುಖ್ಯಮಂತ್ರಿಗಳು ಇಂದು ಸಂಜೆ 4 ಗಂಟೆಗೆ ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ 7 ಗಂಟೆಗೆ ಮುಖ್ಯಮಂತ್ರಿಗಳು ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ. 

ಇದೇ ವೇಳೆ ಮುಖ್ಯಮಂತ್ರಿಯವರು, ಬೆಂಗಳೂರಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಗೆ ಸೇರಿದ ಜಾಗ ಪಡೆಯುವ ಕುರಿತು ಮಾತುಕತೆ ನಡೆಸಲಿದ್ದಾರೆ. 

ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಅವರು ರಕ್ಷಣಾ ಸಚಿವರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಲಿದ್ದಾರೆ.

Trending News