ಬೆಳಗಾವಿ: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಟ್ಟು ಲಕ್ಷ್ಮಣ ಸವದಿಗೆ ಕೊಟ್ಟ ಮಾತನ್ನು ನಾವು ಈಡೇರಿಸಿದ್ದೇವೆ. ಇದು ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಎನ್ನುವುದನ್ನು ಮರೆಯಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇದರಿಂದ ಅಥಣಿ ತಾಲ್ಲೂಕಿನ ಶೇ95 ರಷ್ಟು ಭೂಮಿ, ಅಂದರೆ 50 ಸಾವಿರ ಎಕರೆ ಜಮೀನು ನೀರಾವರಿ ಸೌಲಭ್ಯ ಪಡೆಯಲಿವೆ ಎಂದರು.
ನೀರಾವರಿ ಯೋಜನೆಗಳ ಬಗ್ಗೆಯೂ ರಾಜ್ಯದ BJP ಸಂಸದರು ಬಾಯಿಯನ್ನೇ ಬಿಡಲಿಲ್ಲ, ರಾಜ್ಯಕ್ಕೆ ಆರ್ಥಿಕವಾಗಿ ವಂಚಿಸುತ್ತಿರುವ ಬಗ್ಗೆಯೂ ತುಟಿ ಬಿಡದ ಈ ಸಂಸದರಿಗೆ ನೀವು ಕೊಟ್ಟ ಓಟಿಗೆ ಏನು ಗೌರವ ಬಂತು ಹೇಳಿ ಎಂದರು. ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ನೀವು ಕೊಟ್ಟ ಓಟಿಗೆ ಗೌರವ ಕೊಟ್ಟಿದೆಯೋ-ಇಲ್ಲವೋ ಎಂದು ಎದೆ ಮುಟ್ಟಿಕೊಂಡು ಕೇಳಿಕೊಳ್ಳಿ ಎಂದರು.
ನಿಮ್ಮ ಬದುಕಿಗೆ ಆಸರೆ ಆಗುತ್ತಿರುವ ನಾವು ಬೇಕೋ-ದೇವರ ಹೆಸರಲ್ಲಿ ನಿಮ್ಮ ಭಾವನೆ ಕೆರಳಿಸಿ ನಿಮ್ಮ ಬದುಕಿಗೆ ವಂಚಿಸುತ್ತಿರುವ BJP ಬೇಕಾ? ನಿಮ್ಮ ಹೃದಯವನ್ನು ಕೇಳಿ ಮತ ಹಾಕಿ ಎಂದರು.
1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದರು.
ಈ ಯೋಜನೆಯಿಂದ ಎರಡು ರೀತಿಯ ಲಾಭ ಆಗಲಿದೆ. ಮೊದಲಿಗೆ ಒಣ ಭೂಮಿ ಇರುವ ಜಮೀನುಗಳಿಗೆ ನೀರು ಒದಗುತ್ತದೆ. ಎರಡನೆಯದಾಗಿ ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಅಭಿವೃದ್ಧಿ ಕೂಡ ಆಗುತ್ತದೆ ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಉದಾಹರಣೆಗಳನ್ನು ನೀಡಿ ವಿವರಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ಅಭಿವೃದ್ಧಿ ನೋಡಿ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕೇಂದ್ರದ ಹಾಲಿ ಸರ್ಕಾರ ಮತ್ತು ರಾಜ್ಯದಲ್ಲಿ ಈ ಹಿಂದೆ ಇದ್ದ BJP ಸರ್ಕಾರ ರಾಜ್ಯದ ಯಾವ ನೀರಾವರಿ ಯೋಜನೆಗಳಿಗೂ ಬೆಂಬಲ ನೀಡಲಿಲ್ಲ. ಕೃಷ್ಣ ಮೇಲ್ದಂಡೆ, ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಒಂಚೂರು ಸಹಕಾರ ನೀಡುತ್ತಿಲ್ಲ. ಬೆಳಗಾವಿಯಲ್ಲಿ ಗೆದ್ದಿರುವ ಇಬ್ಬರು ಸಂಸದರು ಸೇರಿ ಬಿಜೆಪಿಯ ಒಬ್ಬೇ ಒಬ್ಬ ಸಂಸದ ಪಾರ್ಲಿಮೆಂಟಲ್ಲಿ ದ್ವನಿ ಎತ್ತಲಿಲ್ಲ. ಇದು ಬೆಳಗಾವಿ ಜನತೆಗೆ, ರಾಜ್ಯದ ಜನತೆಗೆ ಬಿಜೆಪಿ ಸಂಸದರು ಬಗೆದ ದ್ರೋಹ ಅಲ್ಲವೇ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.
ನೀರಾವರಿ ಯೋಜನೆಗಳ ಬಗ್ಗೆಯೂ ಈ ಸಂಸದರು ಬಾಯಿಯನ್ನೇ ಬಿಡಲಿಲ್ಲ, ರಾಜ್ಯಕ್ಕೆ ಆರ್ಥಿಕವಾಗಿ ವಂಚಿಸುತ್ತಿರುವ ಬಗ್ಗೆಯೂ ತುಟಿ ಬಿಡದ ಈ ಸಂಸದರಿಗೆ ನೀವು ಕೊಟ್ಟ ಓಟಿಗೆ ಏನು ಗೌರವ ಬಂತು ಹೇಳಿ. BJP ಇವತ್ತಿನವರೆಗೂ ನುಡಿದಂತೆ ನಡೆದ ಒಂದೇ ಒಂದು ಉದಾಹರಣೆ ಇದೆಯಾ ನೀವೇ ವಿಚಾರ ಮಾಡಿ. ಕಾಂಗ್ರೆಸ್ ಸರ್ಕಾರ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ನೀವು ಕೊಟ್ಟ ಓಟಿಗೆ ಗೌರವ ಕೊಟ್ಟಿದ್ದೇವೆ. ಹೌದೋ ಇಲ್ಲವೋ ಎದೆ ಮುಟ್ಟಿಕೊಂಡು ಕೇಳಿಕೊಳ್ಳಿ ಎಂದು ಸಿಎಂ ಕರೆ ನೀಡಿದರು.
ನಿಮ್ಮ ಬದುಕಿಗೆ ಆಸರೆ ಆಗುತ್ತಿರುವ, ಕುಟುಂಬದ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮ ಕೊಡುತ್ತಿರುವ ನಾವು ಬೇಕೋ-ದೇವರ ಹೆಸರಲ್ಲಿ ನಿಮ್ಮ ಭಾವನೆ ಕೆರಳಿಸಿ ನಿಮ್ಮ ಬದುಕಿಗೆ ವಂಚಿಸುತ್ತಿರುವ BJP ಬೇಕಾ? ನಿಮ್ಮ ಹೃದಯವನ್ನು ಕೇಳಿಕೊಳ್ಳಿ. ನಿಮ್ಮ ಹೃದಯ ಹೇಳಿದವರಿಗೆ ಮತ ಹಾಕಿ ಎಂದು ಸಿಎಂ ಕರೆ ನೀಡಿದರು.
ನರೇಂದ್ರ ಮೋದಿಯವರ ಸುಳ್ಳುಗಳಿಗೆ, ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯಗಳಿಗೆ ಕೋಲೆ ಬಸವನಂತೆ ತಲೆ ಆಡಿಸುವ ಬಿಜೆಪಿಯನ್ನು ತಿರಸ್ಕರಿಸಿ. ನಾವು ಕೆಲಸ ಮಾಡಿ ಕೂಲಿ ಕೇಳುತ್ತಿದ್ದೇವೆ. ಕೆಲಸ ಮಾಡಿದವರಿಗೆ ನೀವು ಕೂಲಿ ಕೊಡಿ ಎಂದು ಮನವಿ ಮಾಡಿದರು.
ನಾಡಿನ ಬಡವರ, ಮಧ್ಯಮ ವರ್ಗದವರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದು ತಪ್ಪಾ? ಆದರೆ ಬಿಜೆಪಿ ಇದನ್ನು ವಿರೋಧಿಸುತ್ತಿದೆ. ನಾಡಿನ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು BJP ಅವಮಾನಿಸುತ್ತಿದೆ. ನಿಮ್ಮನ್ನು ಅವಮಾನಿಸುವವರನ್ನು ಕ್ಷಮಿಸಬೇಡಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.
ಇದನ್ನೂ ಓದಿ: ನಾಳೆ ಸಭೆ ಬಳಿಕ ಕಾಂಗ್ರೆಸ್ ಟಿಕೆಟ್ ಬಗ್ಗೆ ನಿರ್ಧಾರ : ಕಾಂಗ್ರೆಸ್ ನತ್ತ ಮುಖ ಮಾಡಲಿದ್ದಾರಂತೆ ಬಿಜೆಪಿ ನಾಯಕರು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.