ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲವೆಂದ ಸಿಎಂ ಸಿದ್ದರಾಮಯ್ಯ

ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಮೊತ್ತ ರೈತರಿಗೆ ತಲುಪಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Jan 2, 2024, 12:58 PM IST
  • ನಾವು ದ್ವೇಷದ ರಾಜಕಾರಣ ಅಥವಾ ನಿರಪರಾಧಿಗಳನ್ನು ಬಂಧಿಸುವ ಕೆಲಸ ಮಾಡಿಲ್ಲ
  • ತಪ್ಪು ಮಾಡಿದವರಿಗೆ ಏನು ಮಾಡಬೇಕು? ಅವರನ್ನು ಸುಮ್ಮನೇ ಬಿಟ್ಟುಬಿಡಬೇಕೇ?
  • ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲವೆಂದ ಸಿಎಂ ಸಿದ್ದರಾಮಯ್ಯ title=
ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ರೀತಿಯ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ತಪ್ಪು ಮಾಡಿದವರಿಗೆ ಏನು ಮಾಡಬೇಕು? ಅವರನ್ನು ಸುಮ್ಮನೇ ಬಿಟ್ಟುಬಿಡಬೇಕೇ? ಹಳೇ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಅದರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ನ್ಯಾಯಾಲಯದ ಸೂಚನೆ ಇದ್ದರೆ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಇದನ್ನೂ ಓದಿ: ನ್ಯೂ ಇಯರ್‌ ಸೆಲೆಬ್ರೇಷನ್‌ಗೆ ಹೋಗಿದ್ದ ಗೆಳೆಯರ ನಡುವೆ ಕಿರಿಕ್‌

ಅತಿಥಿ ಉಪನ್ಯಾಸಕರು ಪಾದಯಾತ್ರೆ ಮಾಡುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ‘ಅವರೊಂದಿಗೆ  ಮಾತನಾಡಿದ್ದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಅವರನ್ನು ಖಾಯಂ ಮಾಡಿ ಎಂದು ಬೇಡಿಕೆ ಇದೆ. ಖಾಯಂ ಮಾಡುವುದು ಕಷ್ಟದ ಕೆಲಸವೆಂದು ತಿಳಿಸಿದರು.

ರಾಮಮಂದಿರ ಉದ್ಘಾಟನೆಗೆ ಕೇವಲ ರಾಮಭಕ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ರಾಮಮಂದಿರದ ಮುಖ್ಯ ಅರ್ಚಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಾರಿಗೆ ಆಹ್ವಾನ ಹೋಗಿದೆ, ಬಿಟ್ಟಿದೆ ಎಂದು ಗೊತ್ತಿಲ್ಲ. ಆಹ್ವಾನ ಕೊಟ್ಟವರು ಹೋಗುತ್ತಾರೆ, ಇಲ್ಲದವರು ಇಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ರಾಮನಗರ ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಗಾಯಗೊಂಡ ಮಹಿಳೆ!

ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಮೊತ್ತ ರೈತರಿಗೆ ತಲುಪಲಿದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News