ಕೇಂದ್ರ ಬಜೆಟ್’ನಲ್ಲಿ ರಾಜ್ಯಕ್ಕೆ ಅನ್ಯಾಯ, ಫೆ.7 ರಂದು ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah on Central Budget: ರಾಜ್ಯಕ್ಕೆ ಕೇಂದ್ರ ಬಜೆಟ್’ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರದ ಬಜೆಟ್’ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ಅನ್ಯಾಯವನ್ನು ಎಸಗಲಾಗಿದೆ.

Written by - Bhavishya Shetty | Last Updated : Feb 2, 2024, 08:03 PM IST
    • ಕೇಂದ್ರ ಬಜೆಟ್’ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯಕ್ಕೆ ವಿರೋಧ
    • ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
    • ಸಂಸದ ಡಿ.ಕೆ.ಸುರೇಶ್ ಅವರ ದೇಶವನ್ನು ಇಬ್ಭಾಗವಾಗಿಸುವ ಹೇಳಿಕೆ
ಕೇಂದ್ರ ಬಜೆಟ್’ನಲ್ಲಿ ರಾಜ್ಯಕ್ಕೆ ಅನ್ಯಾಯ, ಫೆ.7 ರಂದು ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ title=
Chief Minister Siddaramaiah

CM Siddaramaiah on Central Budget: ಕೇಂದ್ರ ಬಜೆಟ್’ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್’ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: Viral Video:​ ಸೀಲಿಂಗ್ ಫ್ಯಾನ್‌ನಲ್ಲಿ ಹೆಡೆ ಎತ್ತಿ ರೌಂಡ್‌ ಹಾಕಿದ ನಾಗರ ಹಾವು!

ರಾಜ್ಯಕ್ಕೆ ಕೇಂದ್ರ ಬಜೆಟ್’ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರದ ಬಜೆಟ್’ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ಅನ್ಯಾಯವನ್ನು ಎಸಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್’ಡಿಆರ್’ಎಫ್ ನಿಂದ 4663 ಕೋಟಿ ರೂ. ಮೊತ್ತವನ್ನು ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳೂ ಕಳೆದಿದ್ದರೂ, ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ. ಈ ಎಲ್ಲ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾನೂ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

ಸಂಸದ ಡಿ.ಕೆ.ಸುರೇಶ್ ಅವರ ದೇಶವನ್ನು ಇಬ್ಭಾಗವಾಗಿಸುವ ಹೇಳಿಕೆ ಕೇಂದ್ರ ಅಧಿವೇಶನದಲ್ಲಿ ಚರ್ಚೆಯಾಗಿರುವ ಬಗ್ಗೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದೇಶವನ್ನು ಇಬ್ಬಾಗವಾಗಿಸುವ ಉದ್ದೇಶದಿಂದ ಸಂಸದ ಡಿ.ಕೆ.ಸುರೇಶ್ ಅವರು ಆ ಹೇಳಿಕೆಯನ್ನು ನೀಡಿರುವುದಿಲ್ಲ. ದೇಶ ಅಖಂಡವಾಗಿರಬೇಕೆಂದು ನಾವು ಬಯಸುತ್ತೇವೆ.  ಬಿಜೆಪಿಯವರು ಕೇಂದ್ರ ಬಜೆಟ್’ನಲ್ಲಿ  ಬಡವರು, ರೈತರು, ನಿರುದ್ಯೋಗ ವಿಷಯಗಳ ಬಗ್ಗೆ ಚರ್ಚೆ ಮಾಡಿ, ಪರಿಹಾರ ನೀಡುವ ಬದಲು ಇಂತಹ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರು.

ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದರೂ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 5495 ಕೋಟಿ  ರೂ. ಹಾಗೂ ಇಲ್ಲಿನ ಫೆರಿಫೆರಲ್ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಪ್ರಮುಖ ಯೋಜನೆಗಳಿಗೆ 6000 ಕೋಟಿ ರೂ.  ಒದಗಿಸುವ ಸಾಧ್ಯತೆ ಇತ್ತು. ಆದರೆ ಯಾವುದೇ ಅನುದಾನವನ್ನು ನೀಡಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: Poonam Pandey: ಇಂಟರ್ನೆಟ್ ಸೆಲೆಬ್ರಿಟಿ ಪೂನಂ ಪಾಂಡೆಯ ಟಾಪ್ 5 ವಿವಾದಗಳು..!‌

ಜನರಿಗಾಗಿ ಸಾಂಸ್ಕೃತಿಕ ಉತ್ಸವ :

ಇಂದಿನಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದೆ. ಜನರಿಗಾಗಿ  ಹಾಗೂ ಕಲಾವಿದರಿಗಾಗಿ ಉತ್ಸವಗಳನ್ನು ಆಚರಿಸಲಾಗುತ್ತದೆ. ಬರಗಾಲವಿದ್ದರೂ ಉತ್ಸವಗಳನ್ನು ಮಾಡದೇ ಇರಲು ಸಾಧ್ಯವಿಲ್ಲ. ಇದೊಂದು ಸಾಂಸ್ಕೃತಿಕ ಉತ್ಸವ ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News