ಬೆಂಗಳೂರು: ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಇದನ್ನೂ ಓದಿ: ಪುಸ್ತಕ ಓದಿ ಟೆಲಿಸ್ಕೋಪ್ ತಯಾರಿಸಿದ ಯುವಕ- ನಿತ್ಯ ಗ್ರಹ, ನಕ್ಷತ್ರ ದರ್ಶನ
ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು. ಮನುಷ್ಯರು ಪ್ರೀತಿ, ವಿಶ್ವಾಸದಿಂದ , ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಜನತೆಯೂ ಅಭಿವೃದ್ಧಿಯಾಗಬೇಕು. ದೇವರು ಎಲ್ಲರಿಗೂ ಸದ್ಭುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ ಎಂದರು.
ಇದನ್ನೂ ಓದಿ: ನಾಳೆಯೇ ಕೊನೆ ದಿನ! ಆಧಾರ್’ಗೆ ಪ್ಯಾನ್ ಲಿಂಕ್ ಆಗಿದೆಯೇ ಎಂಬುದನ್ನು ಹೀಗೆ ಚೆಕ್ ಮಾಡಿ…
ತ್ಯಾಗದ ಸಂಕೇತ
ರಾಜ್ಯದ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಬಕ್ರೀದ್ ಹಬ್ಬ ತ್ಯಾಗದ ಸಂಕೇತ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿರುವುದಾಗಿ ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/38l6m8543Vk?feature=share
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.