ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸಿ ಸಂವಿಧಾನ ವಿರೋಧಿಸುವ BJP-RSS ಅನ್ನು ತಿರಸ್ಕರಿಸಿ 

ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಅಲ್ಲದೆ, ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಗುಡುಗಿದರು. 

Written by - Prashobh Devanahalli | Edited by - Krishna N K | Last Updated : Jan 28, 2024, 04:25 PM IST
  • ಮಂಡಲ್ ವರದಿಯನ್ನು ಬಿಜೆಪಿ ಮತ್ತು RSS ವಿರೋಧಿಸುತ್ತಲೇ ಬಂದಿದೆ.
  • ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ.
  • ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಕರೆ ನೀಡಿದ ಸಿಎಂ ಸಿದ್ದರಾಮಯ್ಯ.
ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸಿ ಸಂವಿಧಾನ ವಿರೋಧಿಸುವ BJP-RSS ಅನ್ನು ತಿರಸ್ಕರಿಸಿ  title=

ಚಿತ್ರದುರ್ಗ : ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 

ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ "ಶೋಷಿತರ ಜಾಗೃತಿ ಸಮಾವೇಶವನ್ನು" ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಸೂಚಿಸಿದರು. 

ಇದನ್ನೂ ಓದಿ:ಗ್ರಾಮಪಂಚಾಯಿತಿಂದ ಧ್ವಜ ಹಾಕಲು ಅನುಮತಿ ಪೆಡೆಯಲಾಗಿದೆ

ಮಂಡಲ್ ವರದಿಯನ್ನು ಬಿಜೆಪಿ ಮತ್ತು RSS ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದರು. 

ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಮುಖ್ಯಮಂತ್ರಿಗಳು ಟೀಕಿಸಿದರು. 

ಇದನ್ನೂ ಓದಿ:ಮುಂದಿನ ಎಂಪಿ HDK ಎಂದು ಘೋಷಣೆ ಕೂಗಿದ ಕಾರ್ಯಕರ್ತರು

ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಮಧ್ಯಮ ವರ್ಗ ಮತ್ತು ಬಡವರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ನನ್ನನ್ನು ವಿರೋಧಿಸುತ್ತಿದ್ದಾರೆ. 

ಅನ್ನ ಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ ಎಂದರು. ಅಲ್ಲದೆ, ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಜಾರಿಯಲ್ಲಿ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ ಎಂದು ವಿವರಿಸಿದರು. 

ಇದನ್ನೂ ಓದಿ:"ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ"

ಸಂಘಟನೆಗಳ ಮೂಲಕ ಜಗೃತಿ ಪಡೆದುಕೊಂಡರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ ಎನ್ನುವ ಎಚ್ಚರವನ್ನು ಅಂಬೇಡ್ಕರ್ ಮುಂತಾದ ಮಹನೀಯರು ನೀಡಿದ್ದಾರೆ. ಕುಲ ಕುಲ ಎಂದು ಬಡಿದಾಡದಿರಿ ಎಂದು ಕರೆ ನೀಡಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಿ ಅವಮಾನಿಸಬೇಡಿ ಎಂದರು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News