ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ: ಸಿಎಂ ಸಿದ್ದರಾಮಯ್ಯ

ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Jan 13, 2024, 05:21 PM IST
  • ಕಾಂಗ್ರೆಸ್ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ
  • ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು
  • ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲವೆಂದ ಸಿಎಂ ಸಿದ್ದರಾಮಯ್ಯ
ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ: ಸಿಎಂ ಸಿದ್ದರಾಮಯ್ಯ  title=
'ಕಾಂಗ್ರೆಸ್ ಜಾತ್ಯಾತೀತ ಪಕ್ಷ'

ಬೆಂಗಳೂರು: ಕಾಂಗ್ರೆಸ್ ಪಕ್ಷವು ಜಾತ್ಯಾತೀತ ತತ್ವದಲ್ಲಿ ನಂಬಿಕೆ  ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಶನಿವಾರದ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ನಾವು ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು’ ಎಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾನಾಗಲಿ, ಯತೀಂದ್ರ ಆಗಲಿ ಈ ರೀತಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ, ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಇವೆಲ್ಲ ಊಹಾಪೋಹಗಳು ಅಷ್ಟೇ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ದೆಹಲಿ ಪೊಲೀಸ್ ಅಪರಾಧ ವಿಭಾಗದ ಮೊದಲ ಮಹಿಳಾ ಮುಖ್ಯಸ್ಥೆ ಶಾಲಿನಿ ಸಿಂಗ್ ಯಾರು?

ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೇಟ್ ನೀಡಲಾಗುವುದು ಎಂದು ಅವರು ಹೇಳಿದರು.

ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ ಮಾಡಬಾರದು. ಜನವರಿ 22ರಂದು ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನ ವಿರೋಧಿಗಳಲ್ಲ. ನಾನು ಎಲ್ಲಿಯೂ ಅಯೋಧ್ಯೆಗೆ ಹೋಗುತ್ತೇನೆ ಅಥವಾ ಹೋಗುವುದಿಲ್ಲ ಎಂದು ಹೇಳಿಲ್ಲವೆಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಭಾರತೀಯ ಸೇನೆ ಬಳಸುವ ಈ ಅಂಗೈ ಗಾತ್ರದ ಹೆಲಿಕಾಪ್ಟರ್ ಡ್ರೋನ್ ಬೆಲೆ ಎಷ್ಟು ಗೊತ್ತಾ..?

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗೃಹ ಲಕ್ಷ್ಮೀ ಯೋಜನೆಯಡಿ ಕೊಡುವ 2,000 ರೂ.ಯಾವುದಕ್ಕೂ ಸಾಲುವುದಿಲ್ಲ ಎಂದಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ 100 ರೂ.ಗಳನ್ನಾದರೂ ಕೊಟ್ಟಿದ್ದಾರಾ? ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News