ಹಾಸನ : ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯಕ್ಕಾಗಿ ಹೋರಾಟ ಕೈಗೊಂಡಿದ್ದಾರೆ. 2014ರಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಿ ಕೊಡುವ ಭರವಸೆಯನ್ನು ನೀಡಿ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ, ಅತಿಕ್ರಮಣ ಮಾಡಿಕೊಂಡಿರುವವರಿಗೆ ನೋಟೀಸುಗಳನ್ನೂ ನೀಡಿದ್ದರು. ಬಿಜೆಪಿಯವರು ರಾಜಕೀಯ ಇಬ್ಬಂದಿತನವನ್ನು ಇಬ್ಬದಿನೀತಿಯನ್ನು ಪಾಲಿಸುತ್ತಿದ್ದಾರೆ ಎಂದರು.
ಇದನ್ನೂ ಓದಿ: ರಂಗಚಟುವಟಿಕೆಯ ತಾಣವಾಗಿದ್ದ ಕೆಂಗಲ್ ಹನುಮಂತಯ್ಯ ಕಲಾಸೌಧಕ್ಕೆ ಬೀಗಮುದ್ರೆ
ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆಯನ್ನು ಜನವರಿ 25 ಕ್ಕೆ ನಿಗದಿಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಕಾನೂನು ತಜ್ಞರೊಂದಿಗೆ ಮಾಹಿತಿ ಪಡೆದು ಚರ್ಚಿಸುತ್ತೇನೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.