ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್  ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

Written by - Yashaswini V | Last Updated : Mar 28, 2024, 02:05 PM IST
  • ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌
  • ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ.
  • ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ- ಸಿಎಂ ಸಿದ್ದರಾಮಯ್ಯ ಸ್ಪಷ್ಟ ಮಾತು
ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ  title=

CM Siddaramaiah: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,  ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು. 

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದು ಸಿಎಂ ಹೇಳಿದರು. 

ಇದನ್ನೂ ಓದಿ- ತೇಜಸ್ವಿನಿ ಗೌಡ ಬಿಜೆಪಿಗೆ ರಾಜೀನಾಮೆ ನೀಡಿ ಉಪಕಾರ ತೀರಿಸಿದ್ದಾರೆ: ಬಿಎಸ್ ಯಡಿಯೂರಪ್ಪ

ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ಓಟಿಗೂ ಘನತೆ ತಂದಿದ್ದೇವೆ ಎಂದರು. 

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ ಎಂದು ವಿವರಿಸಿದರು. 

ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ ಎಂದರು. 

ಇದನ್ನೂ ಓದಿ- ಸುಮಲತಾ ಅವರು ನಮಗೂ ಊಟ ಬಡಿಸಿದ್ದಾರೆ, ಅವರ ಮೇಲೆ ಶತ್ರುತ್ವ ಇಲ್ಲ : ಹೆಚ್‌ಡಿಕೆ

ಹೀಗಾಗಿ ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್  ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ ಎಂದರು. 

ಕುಮಾರಸ್ವಾಮಿ ಅವರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಏಕೆ ಕಡೆಗಣಿಸಿದ್ದರು ಎನ್ನುವುದಕ್ಕೆ ಜನರಿಗೆ ಉತ್ತರಿಸಲಿ ಎಂದವರು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ತಿಳಿಸಿದರು.  

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್,   ಸಚಿವರಾದ ಎಂ.ಸಿ.ಸುಧಾಕರ್, ಮಂಕಾಳ ವೈದ್ಯ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್ , ವಿಧಾನ‌ ಪರಿಷತ್ ಸದಸ್ಯ ಸುದಾಮ ದಾಸ್ ಸೇರಿ ರಾಮನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರುಗಳು ಮತ್ತು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News