ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಖಿ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದಸರಾ ಸ್ವಾಗತ ಸಮಿತಿ ಶನಿವಾರ ಅಧಿಕೃತ ಆಹ್ವಾನ ನೀಡಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಕ್ಕೆ ಭೇಟಿ ನೀಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್ ಮೊದಲಾದವರಿದ್ದ ಮೈಸೂರು ದಸರಾ ಸಮಿತಿ ನಿಯೋಗ ಸಿಎಂ ಯಡಿಯೂರಪ್ಪ ಅವರಿಗೆ ಮೈಸೂರು ಪೇಟ, ಶಾಲು ಹೊದಿಸಿ, ಹೂಗುಚ್ಛ ನೀಡಿ ಅಧಿಕೃತ ಆಹ್ವಾನಿಸಿತು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ @VSOMANNA_BJP ಮೈಸೂರು ದಸರಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಗೃಹ ಸಚಿವ @BSBommai, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಪುಷ್ಪಲತಾ, ಶಾಸಕರುಗಳಾದ @GTDevegowda, ತನ್ವೀರ್ ಸೇಠ್, ಹರ್ಷವರ್ಧನ್ ಉಪಸ್ಥಿತರಿದ್ದರು. pic.twitter.com/GrpdxEaTaf— CM of Karnataka (@CMofKarnataka) September 14, 2019
ಸೆಪ್ಟೆಂಬರ್ 29ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂದೆಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದ್ದು, ಅಕ್ಟೋಬರ್ 8ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.