ಮತ್ತೆ ಅಧಿಕಾರದಲ್ಲಿ ಮುಂದುವರೆಯಲು 'ಕೈ' ಕಸರತ್ತು!

ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ 2018ರ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದೆ ಕೈ.

Last Updated : Nov 24, 2017, 02:56 PM IST
ಮತ್ತೆ ಅಧಿಕಾರದಲ್ಲಿ ಮುಂದುವರೆಯಲು 'ಕೈ' ಕಸರತ್ತು! title=

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳ ಪ್ರಚಾರ ಭರದಿಂದ ಸಾಗಿದೆ. ಸದ್ಯ ಚಳಿಗಾಲದ ಅಧಿವೇಶನದಲ್ಲಿ ಬ್ಯುಸಿ ಆಗಿದ್ದ ಆಡಳಿತ ಪಕ್ಷವಾದ ಕಾಂಗ್ರೇಸ್ ಇದೀಗ ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಪ್ರಚಾರಕ್ಕೆ ಸಜ್ಜಾಗುತ್ತಿದ್ದೆ. ಮತ್ತೆ ಅಧಿಕಾರದಲ್ಲಿ ಮುಂದುವರೆಯಲು 'ಕೈ' ಕಸರತ್ತು ನಡೆಸುತ್ತಿದೆ.

ಮುಂದಿನ ಚುನಾವಣೆಯ ತಯಾರಿ ಕುರಿತು ಸಭೆಗೆ ಕಾಂಗ್ರೇಸ್ ನಾಯಕರು ಇಂದು ಪಕ್ಷ ಸಂಘಟನೆ, ವಿಧಾನಸಭೆ ಚುನಾವಣೆಯ ರಣತಂತ್ರದ ಕುರಿತು ಸಭೆ ನಡೆಸಲಿದ್ದಾರೆ. ಇಂದು ಸಂಜೆ ಬೆಂಗಳೂರಲ್ಲಿ ಈ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸಭೆಯ ನೇತೃತ್ವ ವಹಿಸಲಿದ್ದಾರೆ. ಸಭೆಗ ಹಾಜರಾಗುವಂತೆ ಕಾಂಗ್ರೆಸ್ ನಾಯಕರಿಗೆ ಪರಮೇಶ್ವರ್ ಸೂಚನೆ ನೀಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್, ಎಸ್ ಆರ್ ಪಾಟೀಲ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರಿಗೆ ಪರಮೇಶ್ವರ್ ಸೂಚನೆ ನೀಡಿದ್ದು, ಚುನಾವಣೆಗೆ ಮುನ್ನ ಮಾಡಿಕೊಳ್ಳಬೇಕಾದ ತಯಾರಿ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸುವ ನಿರೀಕ್ಷೆ ಇದೆ. 

ರಾಜ್ಯ ಪ್ರವಾಸ, ಬಿಜೆಪಿ ಪರಿವರ್ತನಾ ಯಾತ್ರೆಯ ಪ್ರತಿ ತಂತ್ರಕ್ಕೆ ರ್ಯಾಲಿ, ಚುನಾವಣೆಯ ಪ್ರಚಾರ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಹತ್ವದ ಮಾತುಕತೆ ನಡೆಯಲಿದೆ.

Trending News