ಕಾಂಗ್ರೆಸ್ ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ: ವಿಜಯೇಂದ್ರ ಆಕ್ರೋಶ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಲೇ ಇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

Written by - Puttaraj K Alur | Last Updated : Jan 2, 2024, 07:21 PM IST
  • ದಿನೇ ದಿನೇ ಗೂಂಡಾಗಳ ವರ್ತನೆ ಗಮನಿಸಿದರೆ ಕಾಂಗ್ರೆಸ್ ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ
  • ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿದೆ
  • ತಕ್ಷಣ ಪೋಲಿಸರು ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವಿಜಯೇಂದ್ರ ಆಗ್ರಹ
ಕಾಂಗ್ರೆಸ್ ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ: ವಿಜಯೇಂದ್ರ ಆಕ್ರೋಶ title=
ಕಾಂಗ್ರೆಸ್ ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ!

ಬೆಂಗಳೂರು: ದಿನೇ ದಿನೇ ಗೂಂಡಾಗಳ ವರ್ತನೆ ಗಮನಿಸಿದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸನಗರ ತಾಲೂಕಿನ ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ನಿತಿನ್ ಮತ್ತು ನವೀನ್ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಲೇ ಇವೆ’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಡ್ಡಿ ಸಮೇತ ಠೇವಣಿ ಹಣ ಹಿಂದಿರುಗಿಸದ ಧಾರವಾಡದ ಸಹಕಾರಿ ಸಂಘಕ್ಕೆ ದಂಡ

ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಂತೂ ಇದು ಮರುಕಳಿಸುತ್ತಲೇ ಇದೆ, ಹೊಸನಗರ ತಾಲೂಕಿನ ಯುವ ಮೋರ್ಚಾ ಅಧ್ಯಕ್ಷ ನಿತಿನ್ ಅವರ ಮೇಲೆ ಕಾಂಗ್ರೆಸ್ ಗೂಂಡಾಗಳಿಂದ ನಡೆದ ಹಲ್ಲೆ ಅತ್ಯಂತ ಖಂಡನಾರ್ಹ.ದಿನೇ ದಿನೇ ಗೂಂಡಾಗಳ ವರ್ತನೆ ಗಮನಿಸಿದರೆ, ಕಾಂಗ್ರೆಸ್ ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣ ಪೋಲಿಸರು ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇನೆ. ಇಂತಹ ಘಟನೆಗಳು ಮತ್ತೆ ಮತ್ತೆ ಮರುಕಳಿಸುವ ಪರಿಸ್ಥಿತಿ ಮುಂದುವರೆದರೆ, ಬಿಜೆಪಿ ಹೋರಾಟದ ಸ್ವರೂಪ ತೀವ್ರಗೊಳಿಸಬೇಕಾದೀತು ಎಂದು ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕಲ್ಪತರುನಾಡಿನಲ್ಲಿ ಊಸರವಳ್ಳಿ JN-1 ಕೇಕೆ.. ಜಿಲ್ಲಾ ಆರೋಗ್ಯ ಇಲಾಖೆ ಫುಲ್ ಆಕ್ಟಿವ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News