ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರದ ಬೆದರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಬಾಹಿರವಾಗಿ, ಕಾನೂನು ಬಾಹಿರವಾಗಿ ಕ್ಯಾಬಿನೆಟ್ ನಡೆಸಿ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು  

Written by - Prashobh Devanahalli | Last Updated : Aug 3, 2024, 07:58 PM IST
    • ಮುಖ್ಯಮಂತ್ರಿ ಇಲ್ಲದೇ ಸಚಿವ ಸಂಪುಟ ಸಭೆ ಹೇಗೆ ನಡೆಯುತ್ತದೆ?
    • ಕ್ಯಾಬಿನೆಟ್ ನಡೆಸಲು ಅಧಿಕೃತವಾಗಿ ಲೆಟರ್ ಕೊಟ್ಟಿದ್ದರೆಯೇ?
    • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇರ ಆರೋಪ
ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರದ ಬೆದರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ title=
File Photo

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ಧಮ್ಕಿ ಹಾಕಿ ಬೆದರಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ಧದ ಪಾದಯಾತ್ರೆ ಹೋರಾಟದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಲಂಕಾ ವಿರುದ್ಧದ 2ನೇ ಏಕದಿನದಲ್ಲಿ ಪ್ರಮುಖ ಬದಲಾವಣೆ... ಟೀಂ ಇಂಡಿಯಾದಿಂದ ಆ ಆಟಗಾರ ಔಟ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಬಾಹಿರವಾಗಿ, ಕಾನೂನು ಬಾಹಿರವಾಗಿ ಕ್ಯಾಬಿನೆಟ್ ನಡೆಸಿ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು

ಮುಖ್ಯಮಂತ್ರಿ ಇಲ್ಲದೇ ಸಚಿವ ಸಂಪುಟ ಸಭೆ ಹೇಗೆ ನಡೆಯುತ್ತದೆ? ಸಿಎಂ ಏನಾದರೂ ತಮ್ಮ ಅನುಪಸ್ಥಿತಿಯಲ್ಲಿ ಕ್ಯಾಬಿನೆಟ್ ನಡೆಸಲು ಅಧಿಕೃತವಾಗಿ ಲೆಟರ್ ಕೊಟ್ಟಿದ್ದರೆಯೇ? ಎಂದು ಪ್ರಲ್ಹಾದ ಜೋಶಿ ಪ್ರಶ್ನಿಸಿದರು

ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಅವರು ವಾಲ್ಮೀಕಿ ಹಗರಣ ಮತ್ತು ಮೂಡಾ ಹಗರಣದಲ್ಲಿ ತಮ್ಮ ಪಾತ್ರ ಒಪ್ಪಿಕೊಂಡು ರಾಜೀನಾಮೆ ನೀಡುವುದು ಬಿಟ್ಟು ರಾಜಭವನದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಖಂಡಿಸಿದರು.

ರಾಜ್ಯಪಾಲರು ಸಂವಿಧಾನದ ಪ್ರಕಾರ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಸಿಎಂಗೆ ನೋಟಿಸ್ ನೀಡಿದ ಕಾರಣಕ್ಕೆ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಪ್ರಲ್ಹಾದ ಜೋಶಿ ಆಕ್ಷೇಪಿಸಿದರು.

ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ: ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದಾಗಲ್ಲೆಲ್ಲ ಭ್ರಷ್ಟಾಚಾರ ಹಗರಣಗಳು ನಡೆದಿವೆ ಎಂದು ಜೋಶಿ ಹೇಳಿದರು.

ಇದನ್ನೂ ಓದಿ: ಕನಸಿನಲ್ಲಿ ಈ ಪ್ರಾಣಿ ಕಂಡರೆ ಅದರಷ್ಟು ಶುಭ ಮತ್ತೊಂದಿಲ್ಲ: ಶ್ರೀಮಂತಿಕೆ ಮನೆಬಾಗಿಲಿಗೆ ಬರಲಿದೆ

ತಾರ್ಕಿಕ ಅಂತ್ಯಕ್ಕೆ:
ಭ್ರಷ್ಟಾಚಾರವನ್ನು ರಕ್ತಗತ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷದ ಹಗರಣಗಳ ವಿರುದ್ಧದ ಹೋರಾಟವನ್ನು ಈ ಮೂಲಕ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಸಚಿವ ಜೋಶಿ ಹೇಳಿದರು,

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News