ಮುಂದಿನ ಮೂರು ಉಪಚುನಾವಣೆ ಗೆಲ್ಲಲು ಕಾಂಗ್ರೆಸ್ ನಿಂದ 'ಭರ್ಜರಿ ಪ್ಲಾನ್'!

ಆರ್ ಆರ್ ನಗರ ಮತ್ತು ಶಿರಾ ಬೈ ಎಲೆಕ್ಷನ್ ನಲ್ಲಿ ಸೋಲನುಭವಿಸಿದ ಬಳಿಕ ಎಚ್ಚೇತ್ತುಕೊಂಡ ಕಾಂಗ್ರೆಸ್

Last Updated : Nov 22, 2020, 06:11 PM IST
  • ಆರ್ ಆರ್ ನಗರ ಮತ್ತು ಶಿರಾ ಬೈ ಎಲೆಕ್ಷನ್ ನಲ್ಲಿ ಸೋಲನುಭವಿಸಿದ ಬಳಿಕ ಎಚ್ಚೇತ್ತುಕೊಂಡ ಕಾಂಗ್ರೆಸ್
  • ಮೂರು ಕ್ಷೇತ್ರಗಳಿಗೆ ಶೀಘ್ರವೇ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ
  • ಈಗಿನಿಂದಲೇ ಕ್ಷೇತ್ರದಲ್ಲಿ ಸಕ್ರಿಯವಾಗಿ ಸಂಘಟನೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಯಾರಿ
ಮುಂದಿನ ಮೂರು ಉಪಚುನಾವಣೆ ಗೆಲ್ಲಲು ಕಾಂಗ್ರೆಸ್ ನಿಂದ 'ಭರ್ಜರಿ ಪ್ಲಾನ್'! title=

ಬೆಂಗಳೂರು: ಕಾಂಗ್ರೆಸ್ ಪಕ್ಷವು ಆರ್ ಆರ್ ನಗರ ಮತ್ತು ಶಿರಾ ಬೈ ಎಲೆಕ್ಷನ್ ನಲ್ಲಿ ಸೋಲನುಭವಿಸಿದ ಬಳಿಕ ಎಚ್ಚೇತ್ತುಕೊಂಡು ಮುಂದೆ ನಡೆಯುವ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳು ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳ ಚುನಾವಣೆ(Election) ಗೆಲಲ್ಲು 'ಭರ್ಜರಿ ಪ್ಲಾನ್' ಗೆ ಕಾಂಗ್ರೆಸ್ ಮುಂದಾಗಿದೆ.

ಮಸ್ಕಿ ಮತ್ತು ಬಸವಕಲ್ಯಾಣ ಎರಡು ಕ್ಷೇತ್ರಗಳಲ್ಲಿ ಈ ಹಿಂದೆ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಬಸವಕಲ್ಯಾಣ ಕ್ಷೇತ್ರದಲ್ಲಿ ಶಾಸಕರಾಗಿದ್ದ ನಾರಾಯಣ್‍ರಾವ್ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದರು. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಆಪರೆಷನ್ ಕಮಲದಿಂದ ಬಿಜೆಪಿ ಸೇರಿದರು. ಇನ್ನೂ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ಕೂಡ ಸೋಂಕಿನಿಂದ ಸಾವನ್ನಪ್ಪಿದರು.

ಮುಂದಿನ ಮೂರು ಉಪಚುನಾವಣೆ ಗೆಲ್ಲಲು ಕಾಂಗ್ರೆಸ್ ನಿಂದ 'ಭರ್ಜರಿ ಪ್ಲಾನ್'!

ಮೂರು ಕ್ಷೇತ್ರಗಳಿಗೆ ಶೀಘ್ರವೇ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಈವರೆಗೂ ಪ್ರಭಾವಿ ಅಭ್ಯರ್ಥಿಗಳಿಲ್ಲ. ಮಸ್ಕಿ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿಯಿಂದ ಕಾಂಗ್ರೆಸ್ ವಿರುದ್ಧ ಬಸನಗೌಎಡ ತುರುವೇಹಾಳ ಅವರು ನಾಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದು, ಬಹುತೇಕ ಅವರನ್ನೇ ಉಪಚುವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಡುವ ಸಾಧ್ಯತೆಗಳಿವೆ.

ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಶೀಘ್ರ ಮುಂಬಡ್ತಿ - ಆರೋಗ್ಯ ಸಚಿವ ಕೆ. ಸುಧಾಕರ

ಬಸವಕಲ್ಯಾಣದಲ್ಲೂ ಕಾಂಗ್ರೆಸ್‍ಗೆ ಅಭ್ಯರ್ಥಿಗಳಿಲ್ಲ, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲೂ ಇದೇ ಪರಿಸ್ಥಿತಿ ಇದೆ. ಹಾಗಾಗಿ ಈಗಿನಿಂದಲೇ ಕ್ಷೇತ್ರದಲ್ಲಿ ಸಕ್ರಿಯವಾಗಿ ಸಂಘಟನೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಯಾರಿ ಆರಂಭಿಸಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಕರ್ನಾಟಕ(ಕಲ್ಯಾಣ ಕರ್ನಾಟಕ) ಭಾಗದಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅದರಲ್ಲಿ ಪ್ರಮುಖವಾಗಿ ಮಸ್ಕಿ ಮತ್ತು ಬಸವ ಕಲ್ಯಾಣದಲ್ಲಿ ಸಂಚರಿಸಲಿರುವ ಡಿಕೆಶಿ ಸ್ಥಳೀಯ ನಾಯಕರನ್ನೇ ಗುರುತಿಸಿ ಚುನಾವಣಾ ಉಸ್ತುವಾರಿ ನೀಡಲಿದ್ದಾರೆ.

'ಕರ್ನಾಟಕ ಬಂದ್ ನಡೆದೇ ನಡೆಯುತ್ತೆ, ಯಾರಿಂದಲೂ ತಡೆಯಲು ಸಾಧ್ಯವಿಲ್ಲ'

ಶಿರಾ ಮತ್ತು ರಾಜರಾಜೇಶ್ವರಿನಗರ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೊರಗಿನಿಂದ ಮುಖಂಡರನ್ನು ನಿಯೋಜನೆ ಮಾಡಿ ಚುನಾವಣಾ ಉಸ್ತುವಾರಿ ವಹಿಸಲಾಗಿತ್ತು. ಅದು ಸ್ಥಳೀಯ ಮಟ್ಟದಲ್ಲಿ ಯಶಸ್ವಿಯಾಗಲಿಲ್ಲ. ಹಾಗಾಗಿ ವಿಫಲವಾಗಿತ್ತು.

ಬೆಳಗಾವಿ ಲೋಕಸಭಾ ಬೈಎಲೆಕ್ಷನ್: ಬಿಜೆಪಿಯಿಂದ ಮಾಜಿ ಸಿಎಂಗೆ ಟಿಕೆಟ್..!?

ಮುಂದಿನ ಚುನಾವಣೆಯಲ್ಲಿ ಸ್ಥಳೀಯ ನಾಯಕರಿಗೆ ಉಸ್ತುವಾರಿ ವಹಿಸಲಾಗುತ್ತಿದೆ. ಬೂತ್ ಮಟ್ಟದಲ್ಲಿನ ಕಾರ್ಯಕರ್ತರನ್ನು ಹೆಚ್ಚು ಸಕ್ರಿಯಗೊಳಿಸಲಾಗುತ್ತಿದೆ. ಭಾವನಾತ್ಮಕ ವಿಚಾರಗಳು ಬಂದಾಗ ಅವನ್ನು ಸಮರ್ಥವಾಗಿ ಹೆದರುರಿಸಲು ಚಿಂತಕರ ಚಾವಡಿ ರಚಿಸಲಾಗುತ್ತಿದೆ. ಜೊತೆ ಬೇರೆ ಬೇರೆ ರೀತಿಯ ಕಾರ್ಯತಂತ್ರಗಳ ಮೂಲಕ ಈ ಬಾರಿ ಬಿಜೆಪಿಯನ್ನು ಮಣಿಸಿ ಶಿರಾ ಮತ್ತು ರಾಜರಾಜೇಶ್ವರಿನಗರ ಸೋಲಿನ ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್ ತಯಾರಿ ನಡೆಸಿದೆ.

Trending News