ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲು ಸೌಲಭ್ಯ ಜಾರಿಗೆ ತಂದಿದ್ದು ಕಾಂಗ್ರೆಸ್- ಸಿದ್ದರಾಮಯ್ಯ

ದಿವಂಗತ ರಾಜೀವ್ ಗಾಂಧಿಯವರ ಪ್ರಯತ್ನದಿಂದ ಮಹಿಳೆಯರು, ಹಿಂದುಳಿದವರು ಹಾಗೂ ಇತರೆ ವರ್ಗದವರಿಗೆ ಮೀಸಲು ಸೌಲಭ್ಯ ದೊರೆತಿದೆ. ಮಹಿಳೆಯರಿಗೆ ಶೇ. 50ರಷ್ಟು ಮೀಸಲು ಸೌಲಭ್ಯ ದೊರೆಯುವಂತೆ ಮಾಡಿದ್ದು ಕಾಂಗ್ರೆಸ್.   

Last Updated : Aug 27, 2018, 07:44 AM IST
ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲು ಸೌಲಭ್ಯ ಜಾರಿಗೆ ತಂದಿದ್ದು ಕಾಂಗ್ರೆಸ್- ಸಿದ್ದರಾಮಯ್ಯ title=
File Photo

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್  63 ವಾರ್ಡ್ ಗಳಲ್ಲಿ ಸ್ಪರ್ಧೆ ಮಾಡಿದೆ. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುವ ಪಕ್ಷ ನಮ್ಮದು. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲು ಸೌಲಭ್ಯ ಜಾರಿಗೆ ತಂದಿದ್ದು ಸಹ ಕಾಂಗ್ರೆಸ್. ಇದರ ಕಾರಣಕರ್ತರು ದಿವಂಗತ ರಾಜೀವ್ ಗಾಂಧಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಭಾನುವಾರ(ಆ.26) ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲು ಸೌಲಭ್ಯ ಜಾರಿಗೆ ತಂದಿದ್ದು ಕಾಂಗ್ರೆಸ್. ಇದರ ಕಾರಣಕರ್ತರು ದಿವಂಗತ ರಾಜೀವ್ ಗಾಂಧಿ. ಅವರ ಪ್ರಯತ್ನದಿಂದ ಮಹಿಳೆಯರು, ಹಿಂದುಳಿದವರು ಹಾಗೂ ಇತರೆ ವರ್ಗದವರಿಗೆ ಮೀಸಲು ಸೌಲಭ್ಯ ದೊರೆತಿದೆ. ಮಹಿಳೆಯರಿಗೆ ಶೇ. 50ರಷ್ಟು ಮೀಸಲು ಸೌಲಭ್ಯ ದೊರೆಯುವಂತೆ ಮಾಡಿದ್ದು ಕಾಂಗ್ರೆಸ್. ಬಿಜೆಪಿಯವರು ಇದನ್ನು ವಿರೋಧ ಮಾಡಿದ್ದರು. ಬಿಜೆಪಿಯ ರಾಮಾಜೋಯೀಸ್ ಅವರೇ ಮೀಸಲು ಸೌಲಭ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗಿದ್ದರು ಎಂದರು.

ರಾಜಕೀಯ ಹಾಗೂ  ಸರ್ಕಾರಿ ಸಂಸ್ಥೆಗಳಲ್ಲಿ ಜಾರಿಗೆ ತಂದಿರುವ ಮೀಸಲು ಸೌಲಭ್ಯವನ್ನು ಸದಾ ವಿರೋಧ ಮಾಡಿದವರು ಬಿಜೆಪಿಯವರು. ಮೀಸಲು ಸೌಲಭ್ಯ ಹಾಗೂ ಸಾಮಾಜಿಕ ನ್ಯಾಯಕ್ಕೆ ನಮ್ಮ ಪಕ್ಷ ಸದಾ ಬದ್ಧ. ಮೈಸೂರು ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾದ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಮಹಾನಗರದ ಅಭಿವೃದ್ಧಿಗೆ ನಮ್ಮ ಸರ್ಕಾರ 2,530 ಕೋಟಿ ರೂ.ಗಳ ಅನುದಾನ ಒದಗಿಸಿತ್ತು. ನಗರದಲ್ಲಿ ತಲೆ ಎತ್ತಿ ನಿಂತಿರುವ ಸರ್ಕಾರದ ಹೊಸ ಕಟ್ಟಡಗಳೇ ಇದಕ್ಕೆ ಸಾಕ್ಷಿ. ಪಾಲಿಕೆಯಲ್ಲಿ ಜೆಡಿಎಸ್, ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಯಾವುದೇ ಅಭಿವೃದ್ಧಿ ಆಗಿಲ್ಲ. ಅಭಿವೃದ್ಧಿಯಲ್ಲಿ ಮೈಸೂರು ನಂಬರ್ ಒನ್ ಆಗಿದ್ದರೆ ಅದಕ್ಕೆ ನಮ್ಮ ಸರ್ಕಾರ ಕಾರಣ. ಇದನ್ನು ಮನಗಂಡು ಮೈಸೂರಿನ ಮತದಾರರು ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಕೈ ಹಿಡಿಯಬೇಕು. ಮೈಸೂರಿನ ಜನ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಶೀರ್ವಾದ ಮಾಡುವ  ವಿಶ್ವಾಸವಿದೆ ಎಂದರು.

ಬಿಜೆಪಿಯ ಪೊಳ್ಳುತನ ಜನರಿಗೆ ಅರ್ಥವಾಗಿದೆ:
ಹಿಂದಿನ ಚುನಾವಣೆಗಳಲ್ಲಿ ಬಿಜೆಪಿಯವರ ಅಪಪ್ರಚಾರದಿಂದ ನಮಗೆ  ಸೋಲಾಯಿತು ಎಂದ ಸಿದ್ದರಾಮಯ್ಯ, ಬಿಜೆಪಿಯ ಪೊಳ್ಳುತನ ಜನರಿಗೆ ಈಗ ಅರ್ಥವಾಗಿದೆ. ಹೀಗಾಗಿ ಅವರು ಪಾಲಿಕೆ ಚುನಾವಣೆಯಲ್ಲಿ ನಮಗೆ ಆಶೀರ್ವಾದ ಮಾಡುವ ನಂಬಿಕೆ ಇದೆ. ಮೈಸೂರು ನಗರದ ಜನರ ನಾಡಿ ಮಿಡಿತ ಗೊತ್ತಿದೆ ಎಂದು ಹೇಳಿದರು.
 

Trending News