ಬಿಬಿಎಂಪಿಯನ್ನು ಎಟಿಎಂ ಮಾಡಲು ಕಾಂಗ್ರೆಸ್ ಹೊರಟಿದೆ : ಆರ್.ಅಶೋಕ್ ಆಕ್ಷೇಪ

ಬಿಬಿಎಂಪಿಯನ್ನು  ಕಾಂಗ್ರೆಸ್ ಎಟಿಎಂ ಮಾಡಲು ಯತ್ನಿಸುತ್ತಿದೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಆರೋಪಿಸಿದರು.

Written by - RACHAPPA SUTTUR | Edited by - Manjunath N | Last Updated : Jun 14, 2023, 06:35 PM IST
  • ಯಾರು ಸಭೆ ಮಾಡಬೇಕೆಂದು ಸರಕಾರದ ಮಾರ್ಗದರ್ಶಿ ಸೂತ್ರಗಳಿವೆ
  • ಅದು ಕನ್ನಡದಲ್ಲೇ ಇದೆ ಎಂದ ಅವರು,‘ಆಯಾ ಸಮಿತಿಯ ಕಾರ್ಯ ವ್ಯಾಪ್ತಿಗೆ ಒಳಪಟ್ಟು ಸಮೀಕ್ಷಣಾ ಸಭೆಗಳನ್ನು ನಡೆಸಬಹುದು
  • ಇದನ್ನು ಹೊರತುಪಡಿಸಿ ಶಾಸಕರೇ ಆಗಲಿ ಇತರ ಖಾಸಗಿ ಪ್ರಮುಖರೇ ಆಗಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮೀಕ್ಷಾ ಸಭೆಗಳನ್ನು ನಡೆಸುವಂತಿಲ್ಲ
ಬಿಬಿಎಂಪಿಯನ್ನು ಎಟಿಎಂ ಮಾಡಲು ಕಾಂಗ್ರೆಸ್ ಹೊರಟಿದೆ : ಆರ್.ಅಶೋಕ್ ಆಕ್ಷೇಪ title=
file photo

ಬೆಂಗಳೂರು : ಬಿಬಿಎಂಪಿಯನ್ನು  ಕಾಂಗ್ರೆಸ್ ಎಟಿಎಂ ಮಾಡಲು ಯತ್ನಿಸುತ್ತಿದೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಿಬಿಎಂಪಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದನ್ನು ಆಕ್ಷೇಪಿಸಿ ರಾಜ್ಯಪಾಲರಿಗೆ ಇಂದು ದೂರು ನೀಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಮಹಾನಗರಪಾಲಿಕೆಯನ್ನು ಕಾಂಗ್ರೆಸ್ ಕಚೇರಿ ಮಾಡಲು ಕಾಂಗ್ರೆಸ್ ಪಕ್ಷದವರು, ಸಚಿವರಾದ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್,ಜಮೀರ್ ಮತ್ತಿತರರು ಹೊರಟಿದ್ದಾರೆ ಎಂದು ಆಕ್ಷೇಪಿಸಿದರು.

ನಮ್ಮ ಸಂಸದರಾದ ಶ್ರೀಮತಿ ನಿರ್ಮಲಾ ಸೀತಾರಾಮನ್,ರಾಜೀವ್ ಚಂದ್ರಶೇಖರ್,ತೇಜಸ್ವಿ ಸೂರ್ಯ ಅವರನ್ನು ಕರೆಯದೆ ಯಾವುದೋ ರಾಜ್ಯದಿಂದ ಚುನಾಯಿತರಾದ ಸುರ್ಜೇವಾಲರನ್ನು ಕರೆದು ಸಭೆ ನಡೆಸಿದ್ದಾರೆ.ವಾರ್ಡ್ ವಿಂಗಡಣೆ,ಅಭಿವೃದ್ಧಿ, ಚುನಾವಣೆ, ಮೀಸಲಾತಿ, ವಾರ್ಡ್‍ಗಳಿಗೆ ಅನುದಾನ ಮತ್ತಿತರ ವಿಚಾರಗಳ ಕುರಿತು ಅವರು ಚರ್ಚಿಸುವುದಾದರೆ ಯಾಕೆ ಮತದಾನ ಬೇಕು? ಯಾಕೆ ಚುನಾಯಿತ ಪ್ರತಿನಿಧಿಗಳು ಬೇಕು? ಎಂದು ಪ್ರಶ್ನಿಸಿದರು.

ಯಾರು ಸಭೆ ಮಾಡಬೇಕೆಂದು ಸರಕಾರದ ಮಾರ್ಗದರ್ಶಿ ಸೂತ್ರಗಳಿವೆ. ಅದು ಕನ್ನಡದಲ್ಲೇ ಇದೆ ಎಂದ ಅವರು,‘ಆಯಾ ಸಮಿತಿಯ ಕಾರ್ಯ ವ್ಯಾಪ್ತಿಗೆ ಒಳಪಟ್ಟು ಸಮೀಕ್ಷಣಾ ಸಭೆಗಳನ್ನು ನಡೆಸಬಹುದು.ಇದನ್ನು ಹೊರತುಪಡಿಸಿ ಶಾಸಕರೇ ಆಗಲಿ ಇತರ ಖಾಸಗಿ ಪ್ರಮುಖರೇ ಆಗಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮೀಕ್ಷಾ ಸಭೆಗಳನ್ನು ನಡೆಸುವಂತಿಲ್ಲ. ವಿರೋಧ ಪಕ್ಷದ ನಾಯಕರಿಗೂ ಸಹ ಅಧಿಕಾರಿಗಳ ಸಭೆ ನಡೆಸುವ ಅವಕಾಶ ಇಲ್ಲ’ ಎಂದು ಆದೇಶದ ವಿವರ ನೀಡಿದರು.

ಅಂಥ ಸಭೆಗಳನ್ನು ನಡೆಸಲು ಮಾನ್ಯ ಸಚಿವರಿಗೆ,ಅಧಿಕಾರಿಗಳಿಗೆ ಅವಕಾಶ ಇದೆ ಎಂದು ತಿಳಿಸಿದರು.ಇವರು ಯಾವ ಸಚಿವರು? ಕೆಡಿಪಿ ಸಭೆ ನಡೆಸುವ ಉಸ್ತುವಾರಿಯನ್ನೂ ಇವರಿಗೆ ಕೊಟ್ಟಿಲ್ಲ.ಇವರಿಗೆ ಇಲ್ಲಿನ ಕಾಂಗ್ರೆಸ್ ನಾಯಕರ ಮೇಲೆ ವಿಶ್ವಾಸ ಇಲ್ಲದಂತಿದೆ.‌ಬೆಂಗಳೂರನ್ನು ಎಟಿಎಂ ಮಾಡಿಕೊಳ್ಳಲು ನೇರವಾಗಿ ಇವರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಟೀಕಿಸಿದರು.

ನರೇಂದ್ರ ಮೋದಿಜಿ, ಅಮಿತ್ ಶಾ ಅವರು ಹೇಳಿದಂತೆ ‘10,ಜನಪಥವು ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಹೊರಟಿದೆ’ ಎಂದು ಆರೋಪಿಸಿದರು. ಮುಖ್ಯ ಕುರ್ಚಿಯಲ್ಲಿ ಕುಳಿತು ಅಧಿಕಾರಿಗಳಿಗೆ ಸುರ್ಜೇವಾಲಾ ಸೂಚನೆ ಕೊಟ್ಟಿದ್ದಾರೆ.28 ಶಾಸಕರು, 4 ಸಂಸದರಿಗೆ ಬೆಲೆ ಇಲ್ಲವೇ? ಎಂದು ಕೇಳಿದರು. ಇದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.ಈ ಬಗ್ಗೆ ತನಿಖೆ ಮಾಡಿ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಸಭೆಗೆ ತೆರಳಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಇರೋದು ನಾಲ್ಕೇ ದಿನ. ಕಾಂಗ್ರೆಸ್‍ಗೆ ಪಕ್ಷಕ್ಕೆ ಅಧಿಕಾರದ ಮದ, ಪಿತ್ಥ ತಲೆಗೇರಿದೆ. ಇರೋದು ನಾಲ್ಕೇ ದಿನ.ಯಾರೂ ಪರ್ಮನೆಂಟಲ್ಲ.ಕಾಂಗ್ರೆಸ್ ಪಕ್ಷ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಆರ್.ಅಶೋಕ್ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಸಭೆ ನಡೆಸಿದ್ದಕ್ಕೆ ದಾಖಲೆಗಳಿವೆ.ಸುಮ್ಮನೆ ಬಂದು ಹೋದರು ಎನ್ನಲು ಇದೇನು ನಾಟಕದ ಕಂಪೆನಿಯೇ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಕರ್ನಾಟಕದ ಎಟಿಎಂ ಆರಂಭವಾಗಿದೆ.ಕರ್ನಾಟಕ ಇನ್ಮೇಲೆ ದಿವಾಳಿ ಆಗಲಿದೆ ಎಂದು ತಿಳಿಸಿದ ಅವರು, ಇನ್ಮೇಲೆ ಏನೇ ಮಾಡಲು ಆಗದಿದ್ದರೂ ಕೇಂದ್ರ ಸರಕಾರದತ್ತ ತೋರಿಸುತ್ತಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News